ಭಾರತ vs ಇಂಗ್ಲೆಂಡ್, ದ್ವಿತೀಯ ಟೆಸ್ಟ್‌: ರಾಹುಲ್ ಶತಕ, ಭಾರತ ಉತ್ತಮ ರನ್

KL ರಾಹುಲ್ ಪರಾಕ್ರಮಕ್ಕೆ ದಿಗ್ಗಜ ಕ್ರಿಕೆಟಿಗರ ದಾಖಲೆಗಳೇ ಪುಡಿಪುಡಿ | Oneindia Kannada

ಲಂಡನ್‌: ಲಂಡನ್‌ನ ಲಾರ್ಡ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್‌ ಪಂದ್ಯದ ಆರಂಭಿಕ ಇನ್ನಿಂಗ್ಸ್‌ನಲ್ಲಿ ಭಾರತದ ಓಪನರ್, ಕನ್ನಡಿಗ ಕೆಎಲ್ ರಾಹುಲ್ ಶತಕ ಬಾರಿಸಿದ್ದಾರೆ. ಇದು ಟೆಸ್ಟ್‌ ಕ್ರಿಕೆಟ್‌ನಲ್ಲಿ ಕೆಎಲ್ ರಾಹುಲ್ ಬಾರಿಸುತ್ತಿರುವ ಆರನೇ ಶತಕ. ಮೊದಲನೇ ಟೆಸ್ಟ್‌ನಲ್ಲಿ ರಾಹುಲ್ ಕ್ರಮವಾಗಿ 84, 26 ರನ್ ಬಾರಿಸಿದ್ದರು. ದ್ವಿತೀಯ ಪಂದ್ಯದಲ್ಲಿ ರಾಹುಲ್ ಅವರಿಂದ ಶತಕದ ಕೊಡುಗೆ ಬಂದಿದೆ.

'ಅಭಿಮಾನಿಗಳು ನನ್ನ ಸುಡುತ್ತಿದ್ದರು': ಸಚಿನ್‌ಗೆ ತಮಾಷೆ ಮಾಡೋಕೆ ಹೋಗಿ ಎಡವಟ್ಟಾಗಿದ್ದ ಕ್ಷಣ ನೆನೆದ ಶೋಯೆಬ್ ಅಖ್ತರ್'ಅಭಿಮಾನಿಗಳು ನನ್ನ ಸುಡುತ್ತಿದ್ದರು': ಸಚಿನ್‌ಗೆ ತಮಾಷೆ ಮಾಡೋಕೆ ಹೋಗಿ ಎಡವಟ್ಟಾಗಿದ್ದ ಕ್ಷಣ ನೆನೆದ ಶೋಯೆಬ್ ಅಖ್ತರ್

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತದಿಂದ ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಅವರಿಂದ ಉತ್ತಮ ಜೊತೆಯಾಟ ಬಂತು. ಇಬ್ಬರೂ 126 ರನ್ ಜೊತೆಯಾಟ ನೀಡಿದರು. ಆ ಬಳಿಕ ಶರ್ಮಾ 83 ರನ್ ಬಾರಿಸಿ ಜೇಮ್ಸ್ ಆ್ಯಂಡರ್ಸನ್ ಓವರ್‌ನಲ್ಲಿ ಬೌಲ್ಡ್ ಆಗಿ ನಿರ್ಗಮಿಸಿದರು.

ಭಾರತ vs ಇಂಗ್ಲೆಂಡ್, 2ನೇ ಟೆಸ್ಟ್‌ ಪಂದ್ಯ, Live ಸ್ಕೋರ್‌ಕಾರ್ಡ್

1
49713

ಒಂದನೇ ದಿನದಾಟದ ಅಂತ್ಯಕ್ಕೆ ಭಾರತ 276 ರನ್
ಗುರುವಾರ (ಆಗಸ್ಟ್ 12) ಮೊದಲನೇ ದಿನದಾಟದ ಅಂತ್ಯಕ್ಕೆ ಭಾರತ 90 ಓವರ್‌ಗೆ ಮೂರು ವಿಕೆಟ್ ಕಳೆದು 276 ರನ್ ಗಳಿಸಿದೆ. ಇಂಗ್ಲೆಂಡ್‌ನಿಂದ ಜೇಮ್ಸ್ ಆ್ಯಂಡರ್ಸನ್ 52 ರನ್‌ಗೆ 2 ವಿಕೆಟ್, ಆಲಿ ರಾಬಿನ್ಸನ್ 47 ರನ್‌ಗೆ 1 ವಿಕೆಟ್ ಪಡೆದಿದ್ದಾರೆ. ದಿನದಾಟದ ಅಂತ್ಯಕ್ಕೆ ಕೆಎಲ್ ರಾಹುಲ್ 248 ಎಸೆತಗಳಲ್ಲಿ 127 ರನ್ ಬಾರಿಸಿದ್ದರು. ಇದರಲ್ಲಿ 12 ಫೋರ್ಸ್, 1 ಸಿಕ್ಸರ್ ಸೇರಿತ್ತು. ರಾಹುಲ್ ಜೊತೆ ಉಪನಾಯಕ ಅಜಿಂಕ್ಯ ರಹಾನೆ ಆಡುತ್ತಿದ್ದರು. ನಾಯಕ ವಿರಾಟ್ ಕೊಹ್ಲಿ 103 ಎಸೆತಗಳಲ್ಲಿ 42 ರನ್ ಕೊಡುಗೆ ನೀಡಿದ್ದರು. ಇದೇ ಪಂದ್ಯದಲ್ಲಿ ರೋಹಿತ್ ಶರ್ಮಾ, ಕೆಎಲ್ ರಾಹುಲ್ ವಿಶೇಷ ದಾಖಲೆ ಕಾರಣರಾಗಿದ್ದಾರೆ. ಇಂಗ್ಲೆಂಡ್‌ಗೆ ಪ್ರವಾಸ ಬಂದು ಟೆಸ್ಟ್ ಪಂದ್ಯ ಆಡುವಾಗ ಮೊದಲ ಇನ್ನಿಂಗ್ಸ್‌ನಲ್ಲಿ ಅತೀ ಹೆಚ್ಚಿಗೆ ಆರಂಭಿಕ ಜೊತೆಯಾಟ ನೀಡಿದ ದಾಖಲೆ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಗುರುತಿಸಿಕೊಂಡಿದ್ದಾರೆ. 126 ರನ್ ಸಾಧನೆಯೊಂದಿಗೆ ರೋಹಿತ್, ರಾಹುಲ್ ಈ ದಾಖಲೆ ನಿರ್ಮಿಸಿದ್ದಾರೆ. ಈ ದಾಖಲೆ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಆಸ್ಟ್ರೇಲಿಯಾದ ಮೈಕಲ್ ಸ್ಲೇಟರ್ ಮತ್ತು ಮಾರ್ಕ್ ಟೇಲರ್ ಇದ್ದಾರೆ. 1993ರಲ್ಲಿ ಓಲ್ಡ್ ಟ್ರಾಫರ್ಡ್ ಸ್ಟೇಡಿಯಂನಲ್ಲಿ ನಡೆದಿದ್ದ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 128 ರನ್ ಗಳಿಸಿದ್ದರು.

ಭಾರತ vs ಇಂಗ್ಲೆಂಡ್: ಲಾರ್ಡ್ಸ್‌ ಕ್ರೀಡಾಂಗಣದಲ್ಲಿ ಹೆಚ್ಚು ಪಂದ್ಯ ಗೆದ್ದಿರುವರಾರು ಗೊತ್ತಾ?ಭಾರತ vs ಇಂಗ್ಲೆಂಡ್: ಲಾರ್ಡ್ಸ್‌ ಕ್ರೀಡಾಂಗಣದಲ್ಲಿ ಹೆಚ್ಚು ಪಂದ್ಯ ಗೆದ್ದಿರುವರಾರು ಗೊತ್ತಾ?

ಇಂಗ್ಲೆಂಡ್‌ಗೆ ಪ್ರವಾಸ ಬಂದು ಮೊದಲ ಇನ್ನಿಂಗ್ಸ್‌ನಲ್ಲಿ ಅತ್ಯಧಿಕ ರನ್ ಜೊತೆಯಾಟ ದಾಖಲೆ ಪಟ್ಟಿ
* 128 ರನ್, ಮೈಕಲ್ ಸ್ಲೇಟರ್ - ಮಾರ್ಕ್ ಟೇಲರ್, ಆಸ್ಟ್ರೇಲಿಯಾ, ಓಲ್ಡ್ ಟ್ರಾಫರ್ಡ್, 1993
* 126 ರನ್, ರೋಹಿತ್ ಶರ್ಮಾ - ಕೆಎಲ್ ರಾಹುಲ್, ಭಾರತ, ಲಾರ್ಡ್ಸ್ ಸ್ಟೇಡಿಯಂ, 2021*
* 120 ರನ್, ಮಾರ್ಟಿನ್ ಕೆಂಟ್ - ಗ್ರೇಮ್ ವುಡ್, ಆಸ್ಟ್ರೇಲಿಯಾ, ದ ಓವಲ್ ಸ್ಟೇಡಿಯಂ, 1981
* 120 ರನ್, ಅಲ್ವಿನ್ ಪೀಟರ್ಸನ್ - ಗ್ರೇಮ್ ಸ್ಮಿತ್, ದಕ್ಷಿಣ ಆಫ್ರಿಕಾ, ಲೀಡ್ಸ್ ಸ್ಟೇಡಿಯಂ, 2012

ಇಂಗ್ಲೆಂಡ್ ಪ್ಲೇಯಿಂಗ್ XI / ಭಾರತ ಪ್ಲೇಯಿಂಗ್ XI
ಇಂಗ್ಲೆಂಡ್ ಪ್ಲೇಯಿಂಗ್ XI: ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಹಸೀಬ್ ಹಮೀದ್, ಜೋ ರೂಟ್ (ಸಿ), ಜಾನಿ ಬೈರ್‌ಸ್ಟೊ, ಜೋಸ್ ಬಟ್ಲರ್ (ಡಬ್ಲ್ಯೂ), ಮೊಯೀನ್ ಅಲಿ, ಸ್ಯಾಮ್ ಕರನ್, ಒಲ್ಲಿ ರಾಬಿನ್ಸನ್, ಮಾರ್ಕ್ ವುಡ್, ಜೇಮ್ಸ್ ಆ್ಯಂಡರ್ಸನ್.
ಬೆಂಚ್: ಝ್ಯಾಕ್ ಕ್ರಾಲಿ, ಡೇನಿಯಲ್ ಲಾರೆನ್ಸ್, ಕ್ರೇಗ್ ಓವರ್‌ಟನ್, ಸಾಕಿಬ್ ಮಹಮೂದ್, ಓಲ್ಲಿ ಪೋಪ್, ಜ್ಯಾಕ್ ಲೀಚ್.
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ಡಬ್ಲ್ಯೂ), ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.
ಬೆಂಚ್: ಉಮೇಶ್ ಯಾದವ್, ಸೂರ್ಯಕುಮಾರ್ ಯಾದವ್, ಹನುಮ ವಿಹಾರಿ, ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಅಭಿಮನ್ಯು ಈಶ್ವರನ್, ಪೃಥ್ವಿ ಶಾ, ಮಯಾಂಕ್ ಅಗರ್ವಾಲ್, ವೃದ್ಧಿಮಾನ್ ಸಹಾ.

For Quick Alerts
ALLOW NOTIFICATIONS
For Daily Alerts
Story first published: Thursday, August 12, 2021, 23:53 [IST]
Other articles published on Aug 12, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X