ಭಾರತ vs ಇಂಗ್ಲೆಂಡ್: ಅಂತಿಮ ದಿನ ಟೀಮ್ ಇಂಡಿಯಾಗೆ ನಿಜವಾದ ಅಗ್ನಿ ಪರೀಕ್ಷೆ

ಲಂಡನ್, ಆಗಸ್ಟ್ 15: ಲಾರ್ಡ್ಸ್ ಟೆಸ್ಟ್‌ನ ನಾಲ್ಕನೇ ದಿನದಾಟ ಅಂತ್ಯವಾಗಿದ್ದು ಭಾರತ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ದ್ವಿತೀಯ ಇನ್ನಿಂಗ್ಸ್‌ನಲ್ಲಿ ಸವಾಲಿನ ಮೊತ್ತದ ಗುರಿಯನ್ನು ನೀಡುವ ಮೂಲಕ ಇಂಗ್ಲೆಂಡ್ ತಂಡಕ್ಕೆ ಆಘಾತ ನೀಡುವ ಪ್ರಯತ್ನದಲ್ಲಿ ಭಾರತಕ್ಕೆ ಹಿನ್ನಡೆಯಾಗಿದೆ. ನಾಲ್ಕನೇ ದಿನದಾಟದ ಆರಂಭದಲ್ಲಿಯೇ ಭಾರತ ಮೂರು ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಳ್ಳುವ ಮೂಲಕ ಹಿನ್ನಡೆಯನ್ನು ಅನುಭವಿಸಿತು. ನಂತರ ಚೇತೇಶ್ವರ್ ಪೂಜಾರ ಹಾಗೂ ಅಜಿಂಕ್ಯಾ ರಹಾನೆ ನಿಧಾನಗತಿಯಲ್ಲಿ ಆಡುತ್ತಾ ತಂಡವನ್ನು ಕುಸಿತದಿಂದ ಪಾರುಮಾಡುವ ಪ್ರಯತ್ನವನ್ನು ನಡೆಸಿದರು.

ಪೂಜಾರ ಹಾಗೂ ರಹಾನೆ ಹೋರಾಟ ಭಾರತ ತಂಡವನ್ನು ಒಂದು ಹಂತಕ್ಕೆ ಕುಸಿತದಿಂದ ಪಾರು ಮಾಡುವಲ್ಲಿ ಯಶಸ್ವಿಯಾಯಿತು. ಈ ಜೋಡಿ ಅತ್ಯಂತ ತಾಳ್ಮೆಯ ಆಟವನ್ನಾಡುತ್ತಾ ಇಂಗ್ಲೆಂಡ್ ಬೌಲರ್‌ಗಳ ಬೆವರಿಸಿದರು. ಈ ಜೋಡಿ ಭರ್ತಿ 100 ರನ್‌ಗಳ ಜೊತೆಯಾಟವನ್ನು ನೀಡಿತು. ಆದರೆ ಈ ಸಂದರ್ಭದಲ್ಲಿ ಪೂಜಾರ 206 ಎಸೆತಗಳನ್ನು ಎದುರಿಸಿ 45 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಈ ಮೂಲಕ ಇಂಗ್ಲೆಂಡ್ ತಂಡ ದೊಡ್ಡ ಯಶಸ್ಸನ್ನು ಸಾಧಿಸಿತು.

ಭಾರತ vs ಇಂಗ್ಲೆಂಡ್: ಟೀಮ್ ಇಂಡಿಯಾ ಸೇರಿದ ಇಬ್ಬರು ಹೊಸ ಆಟಗಾರರುಭಾರತ vs ಇಂಗ್ಲೆಂಡ್: ಟೀಮ್ ಇಂಡಿಯಾ ಸೇರಿದ ಇಬ್ಬರು ಹೊಸ ಆಟಗಾರರು

ಈ ಜೋಡಿ ಬೇರ್ಪಟ್ಟ ಕೆಲವೇ ಹೊತ್ತಿನಲ್ಲಿ ಇಂಗ್ಲೆಂಡ್ ಮತ್ತೊಂದು ದೊಡ್ಡ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಯಿತು. ಅಜಿಂಕ್ಯಾ ರಹಾನೆ ಕೂಡ 61 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ನಂತರ ಬಂದ ರವೋಂದ್ರ ಜಡೇಜಾ ಕೂಡ 3 ರನ್‌ಗೆ ಔಟ್ ಆಗುವ ಮೂಲಕ ಭಾರತದ ಸ್ಕೋರ್ 175 ರನ್‌ಗಳಿಗೆ ಆರು ವಿಕೆಟ್ ಕಳೆದುಕೊಂಡಿತ್ತು. ಅಂತಿಮವಾಗಿ ಮಂದಬೆಳಕಿನ ಕಾರಣ ಪಂದ್ಯ ಸ್ಥಗಿತವಾದಾಗ ಭಾರತ 181 ರನ್‌ಗಳಿಸಿ ಆರು ವಿಕೆಟ್ ಕಳೆದುಕೊಂಡಿದೆ. 14 ರನ್‌ಗಳಿಸಿರುವ ರಿಷಭ್ ಪಂತ್ ಹಾಗೂ ಇಶಾಂತ್ ಶರ್ಮಾ ಕ್ರೀಸ್‌ನಲ್ಲಿದ್ದಾರೆ.

ಅಂತಿಮ ದಿನದ ಸಂಪೂರ್ಣ ಆಟ ಈಗ ಬಾಕಿಯಿದ್ದು ಭಾರತ ತಂಡ ಸಾಧ್ಯವಾದಷ್ಟು ಹೊತ್ತು ಬ್ಯಾಟಿಂಗ್ ನಡೆಸುವ ಜೊತೆಗೆ ಇಂಗ್ಲೆಂಡ್ ತಂಡಕ್ಕೆ ಸವಾಲೆನಿಸುವಷ್ಟು ರನ್‌ಗಳನ್ನು ಕೂಡ ಕಲೆಹಾಕಬೇಕಿದೆ. ಆದರೆ ತಂಡದಲ್ಲಿ ಸ್ಪೆಶಲಿಸ್ಟ್ ಬ್ಯಾಟ್ಸ್‌ಮನ್ ಆಗಿ ರಿಷಭ್ ಪಂತ್ ಮಾತ್ರವೇ ಇದ್ದು ಬಾಲಂಗೋಚಿಗಳ ಜೊತೆ ಸೇರಿ ಸಾಧ್ಯವಾದಷ್ಟು ರನ್‌ಗಳನ್ನು ಗಳಿಸಬೇಕಿದೆ. ಬಳಿಕ ಭಾರತ ತಂಡದ ಬೌಲಿಂಗ್ ಪಡೆಗೂ ಕೂಡ ದೊಡ್ಡ ಸವಾಲಿದೆ. ಇಂಗ್ಲೆಂಡ್ ತಂಡದ ದಾಂಡಿಗರನ್ನು ಫೆವಿಲಿಯನ್‌ಗೆ ಕಳುಹಿಸುವ ಸವಾಲು ಭಾರತದ ಮುಂದಿದೆ. ಹೀಗಾಗಿ ಅಂತಿಮ ದಿನದಾಟ ಸಾಕಷ್ಟು ಕುತೂಹಲ ಮೂಡಿಸಿದ್ದು ಫಲಿತಾಂಶ ಏನಾಗಲಿದೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿದೆ.

ಇಂಗ್ಲೆಂಡ್ ಪ್ಲೇಯಿಂಗ್ XI: ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಹಸೀಬ್ ಹಮೀದ್, ಜೋ ರೂಟ್ (ನಾಯಕ), ಜಾನಿ ಬೈರ್‌ಸ್ಟೊ, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಮೊಯೀನ್ ಅಲಿ, ಸ್ಯಾಮ್ ಕರನ್, ಒಲ್ಲಿ ರಾಬಿನ್ಸನ್, ಮಾರ್ಕ್ ವುಡ್, ಜೇಮ್ಸ್ ಆ್ಯಂಡರ್ಸನ್.
ಬೆಂಚ್: ಝ್ಯಾಕ್ ಕ್ರಾಲಿ, ಡೇನಿಯಲ್ ಲಾರೆನ್ಸ್, ಕ್ರೇಗ್ ಓವರ್‌ಟನ್, ಸಾಕಿಬ್ ಮಹಮೂದ್, ಓಲ್ಲಿ ಪೋಪ್, ಜ್ಯಾಕ್ ಲೀಚ್.

ಲಾರ್ಡ್ಸ್ ಬಾಲ್ಕನಿಯಲ್ಲಿ ನಾಗಿನ್ ಡ್ಯಾನ್ಸ್ ಮಾಡಿ ನಕ್ಕು ನಲಿಸಿದ ಕೊಹ್ಲಿ | Oneindia Kannada

ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.
ಬೆಂಚ್: ಉಮೇಶ್ ಯಾದವ್, ಸೂರ್ಯಕುಮಾರ್ ಯಾದವ್, ಹನುಮ ವಿಹಾರಿ, ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಅಭಿಮನ್ಯು ಈಶ್ವರನ್, ಪೃಥ್ವಿ ಶಾ, ಮಯಾಂಕ್ ಅಗರ್ವಾಲ್, ವೃದ್ಧಿಮಾನ್ ಸಹಾ.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 22 - October 28 2021, 07:30 PM
ಆಸ್ಟ್ರೇಲಿಯಾ
ಶ್ರೀಲಂಕಾ
Predict Now

For Quick Alerts
ALLOW NOTIFICATIONS
For Daily Alerts
Story first published: Sunday, August 15, 2021, 23:17 [IST]
Other articles published on Aug 15, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X