ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್ ದ್ವಿತೀಯ ಟೆಸ್ಟ್: ಟೀಮ್ ಇಂಡಿಯಾದಿಂದ ಈ ಇಬ್ಬರು ಆಟಗಾರರು ಹೊರಬೀಳುವ ಸಾಧ್ಯತೆ!

India vs England: Mayank Agarwal and Ishant Sharma returns to the nets at Lords

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲನೇ ಪಂದ್ಯ ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಉತ್ತಮ ಪ್ರದರ್ಶನ ನೀಡುವುದರ ಮೂಲಕ ಎದುರಾಳಿ ಇಂಗ್ಲೆಂಡ್ ಮೇಲೆ ಪ್ರಾಬಲ್ಯ ಸಾಧಿಸಿತು ಎಂದೇ ಹೇಳಬಹುದು. ಪಂದ್ಯದ ಕೊನೆಯ ಕ್ಷಣದಲ್ಲಿ ಗೆಲುವಿನ ಸನಿಹಕ್ಕೆ ಬಂದಿದ್ದ ಟೀಮ್ ಇಂಡಿಯಾಗೆ ಗೆಲ್ಲಲು 157 ರನ್‌ಗಳ ಅಗತ್ಯತೆ ಮಾತ್ರ ಇತ್ತು ಮತ್ತು ಕೈನಲ್ಲಿ ಇನ್ನೂ 9 ವಿಕೆಟ್‍ಗಳು ಬಾಕಿ ಉಳಿದಿದ್ದವು.

ಮುಂದುವರಿಯಲಿರುವ ಐಪಿಎಲ್‌ನಲ್ಲಿ ಆರ್‌ಸಿಬಿಯ ಗ್ಲೆನ್ ಮ್ಯಾಕ್ಸ್‌ವೆಲ್ ಆಡ್ತಾರಾ, ಇಲ್ವಾ?ಮುಂದುವರಿಯಲಿರುವ ಐಪಿಎಲ್‌ನಲ್ಲಿ ಆರ್‌ಸಿಬಿಯ ಗ್ಲೆನ್ ಮ್ಯಾಕ್ಸ್‌ವೆಲ್ ಆಡ್ತಾರಾ, ಇಲ್ವಾ?

ಹೀಗೆ ಪಂದ್ಯದ ಕೊನೆಯವರೆಗೂ ಈ ಆಟದ ಮೇಲೆ ಪ್ರಾಬಲ್ಯವನ್ನು ಸಾಧಿಸುತ್ತಾ ಟೀಮ್ ಇಂಡಿಯಾಗೆ ವರುಣನ ಆಗಮನ ನಿರಾಸೆಯನ್ನುಂಟು ಮಾಡಿತು. ಹೀಗೆ ಮೊದಲನೇ ಪಂದ್ಯದಲ್ಲಿ ಗೆಲುವಿನ ಸನಿಹಕ್ಕೆ ಬಂದು ಕೊನೆಯ ಗಳಿಗೆಯಲ್ಲಿ ಮಳೆಯಿಂದಾಗಿ ಗೆಲ್ಲುವ ಅವಕಾಶವನ್ನು ತಪ್ಪಿಸಿಕೊಂಡ ಟೀಮ್ ಇಂಡಿಯಾ ಇದೀಗ ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಗುರುವಾರದಿಂದ ಆರಂಭವಾಗಲಿರುವ ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲುವ ಯೋಜನೆಯಲ್ಲಿದೆ.

ಮಾಜಿ ಕ್ರಿಕೆಟಿಗರಿಗೆ ಹಣದ ಕೊಡುಗೆ; ಮಾದರಿ ಕೆಲಸಕ್ಕೆ ಮುಂದಾದ ಸಿಎಸ್‌ಕೆಮಾಜಿ ಕ್ರಿಕೆಟಿಗರಿಗೆ ಹಣದ ಕೊಡುಗೆ; ಮಾದರಿ ಕೆಲಸಕ್ಕೆ ಮುಂದಾದ ಸಿಎಸ್‌ಕೆ

ಇನ್ನು ಗುರುವಾರ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ಎರಡನೇ ಟೆಸ್ಟ್ ಪಂದ್ಯವನ್ನಾಡಲು ಟೀಮ್ ಇಂಡಿಯಾ ಸೋಮವಾರವೇ ಲಂಡನ್ ಪ್ರಯಾಣವನ್ನು ಬೆಳೆಸಿತ್ತು. ಸದ್ಯ ಲಂಡನ್ ನಗರದ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸುತ್ತಿರುವ ಟೀಮ್ ಇಂಡಿಯಾ ತಂಡದ ಆಟಗಾರರು ಎರಡನೇ ಪಂದ್ಯವನ್ನು ಕೈವಶ ಮಾಡಿಕೊಳ್ಳುವ ಯೋಜನೆಯಲ್ಲಿ ಬೆವರು ಹರಿಸುತ್ತಿದ್ದಾರೆ. ಇನ್ನು ಲಾರ್ಡ್ಸ್ ಅಂಗಳದಲ್ಲಿ ಭಾರತದ ಈ ಇಬ್ಬರು ಆಟಗಾರರು ಅಭ್ಯಾಸ ನಡೆಸುತ್ತಿರುವುದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ತಂಡದಲ್ಲಿ ಎರಡನೇ ಪಂದ್ಯಕ್ಕೆ ಭಾರೀ ಬದಲಾವಣೆಯಾಗುವ ಲಕ್ಷಣಗಳು ಕಾಣಿಸುತ್ತಿವೆ.

ಪಾಕ್ ವಿರುದ್ಧ ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದ ಕ್ರಿಕೆಟಿಗ ಈಗ ದಿನಗೂಲಿ ನೌಕರ!ಪಾಕ್ ವಿರುದ್ಧ ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದ ಕ್ರಿಕೆಟಿಗ ಈಗ ದಿನಗೂಲಿ ನೌಕರ!

ಹೌದು ಲಾರ್ಡ್ಸ್ ಅಂಗಳದಲ್ಲಿ ಅಭ್ಯಾಸದಲ್ಲಿ ತೊಡಗಿರುವ ಟೀಮ್ ಇಂಡಿಯಾ ಆಟಗಾರರ ಪೈಕಿ ಇಶಾಂತ್ ಶರ್ಮಾ ಮತ್ತು ಮಯಾಂಕ್ ಅಗರ್ವಾಲ್ ಕೂಡ ಸೇರಿಕೊಂಡಿದ್ದು ಸದ್ಯ ಭಾರತೀಯ ಕ್ರೀಡಾಭಿಮಾನಿಗಳಲ್ಲಿ ಕುತೂಹಲವನ್ನು ಕೆರಳಿಸಿದೆ. ಭಾರತ ಮತ್ತು ಇಂಗ್ಲೆಂಡ್ ನಡುವೆ ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಪ್ರಮುಖ ಆಟಗಾರರಾದ ಇಶಾಂತ್ ಶರ್ಮಾ ಮತ್ತು ಮಯಾಂಕ್ ಅಗರ್ವಾಲ್ ಕಣಕ್ಕಿಳಿದಿರಲಿಲ್ಲ. ಗಾಯದ ಸಮಸ್ಯೆಯಿಂದ ಮಯಾಂಕ್ ಅಗರ್ವಾಲ್ ಮೊದಲನೆ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂಬ ವಿಷಯವನ್ನು ಪಂದ್ಯ ಆರಂಭಕ್ಕೂ ಮುನ್ನವೇ ಅಧಿಕೃತವಾಗಿ ತಿಳಿಸಲಾಗಿತ್ತು. ಆದರೆ ತಂಡದ ಹಿರಿಯ ಆಟಗಾರ ಇಶಾಂತ್ ಶರ್ಮಾಗೆ ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಡುವ ಬಳಗದಲ್ಲಿ ಸ್ಥಾನ ನೀಡದೇ ಇದ್ದದ್ದು ಎಲ್ಲರಲ್ಲಿಯೂ ಭಾರಿ ಆಶ್ಚರ್ಯವನ್ನು ಉಂಟು ಮಾಡಿದ್ದು ನಿಜ. ಸದ್ಯ ಎರಡನೇ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನವೇ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಸ್ಥಾನ ಪಡೆದುಕೊಳ್ಳದೆ ಇದ್ದ ಮಯಾಂಕ್ ಅಗರ್ವಾಲ್ ಮತ್ತು ಇಶಾಂತ್ ಶರ್ಮಾ ಅಭ್ಯಾಸ ನಡೆಸುತ್ತಿರುವುದನ್ನು ನೋಡಿದರೆ ಈ ಇಬ್ಬರೂ ಸಹ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಅವಕಾಶ ಗಿಟ್ಟಿಸಿಕೊಳ್ಳುವ ಎಲ್ಲಾ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ಕಠಿಣ ಅಭ್ಯಾಸದಲ್ಲಿ ತೊಡಗಿರುವ ಮಯಾಂಕ್ ಅಗರ್ವಾಲ್ ಮತ್ತು ಇಶಾಂತ್ ಶರ್ಮಾ

ಕಠಿಣ ಅಭ್ಯಾಸದಲ್ಲಿ ತೊಡಗಿರುವ ಮಯಾಂಕ್ ಅಗರ್ವಾಲ್ ಮತ್ತು ಇಶಾಂತ್ ಶರ್ಮಾ

ಭಾರತ ತಂಡದ ಪ್ರಮುಖ ಆಟಗಾರರಾದ ಮಯಾಂಕ್ ಅಗರ್ವಾಲ್ ಮತ್ತು ಇಶಾಂತ್ ಶರ್ಮಾ ಸದ್ಯ ನೆಟ್ ಅಭ್ಯಾಸದ ವೇಳೆ ಕಠಿಣ ತರಬೇತಿಯಲ್ಲಿ ತೊಡಗಿದ್ದು, ಈ ಕುರಿತು ಕ್ರೀಡಾಭಿಮಾನಿಗಳಲ್ಲಿ ಚರ್ಚೆಗಳು ಆರಂಭವಾಗಿವೆ. ಎರಡನೇ ಪಂದ್ಯಕ್ಕೂ ಮುನ್ನವೇ ಅಭ್ಯಾಸದಲ್ಲಿ ತೊಡಗಿಕೊಂಡಿರುವ ಈ ಇಬ್ಬರು ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾಗವಹಿಸುವುದು ಖಚಿತ ಎಂದು ಕ್ರೀಡಾಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ.

ಎರಡನೇ ಟೆಸ್ಟ್ ಪಂದ್ಯದಲ್ಲಿ ಇಶಾಂತ್ ಮತ್ತು ಮಯಾಂಕ್ ಕಣಕ್ಕಿಳಿದರೆ ತಂಡದಲ್ಲಿರುವ ಇಬ್ಬರಿಗೆ ಕೊಕ್ ನೀಡಬೇಕಾಗುತ್ತದೆ!

ಎರಡನೇ ಟೆಸ್ಟ್ ಪಂದ್ಯದಲ್ಲಿ ಇಶಾಂತ್ ಮತ್ತು ಮಯಾಂಕ್ ಕಣಕ್ಕಿಳಿದರೆ ತಂಡದಲ್ಲಿರುವ ಇಬ್ಬರಿಗೆ ಕೊಕ್ ನೀಡಬೇಕಾಗುತ್ತದೆ!


ಹೌದು ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಅಭ್ಯಾಸವನ್ನು ಆರಂಭಿಸಿರುವ ಇಶಾಂತ್ ಶರ್ಮಾ ಮತ್ತು ಮಯಾಂಕ್ ಅಗರ್ವಾಲ್ ಎರಡನೇ ಟೆಸ್ಟ್ ಪಂದ್ಯದಲ್ಲಿ ತಂಡದಲ್ಲಿ ಸ್ಥಾನ ಪಡೆದುಕೊಳ್ಳಬೇಕೆಂದರೆ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಆಡಿದ್ದ ಇಬ್ಬರು ಆಟಗಾರರಿಗೆ ಕೊಕ್ ನೀಡಬೇಕಾಗುತ್ತದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಬಹುತೇಕ ಎಲ್ಲಾ ಆಟಗಾರರೂ ಸಹ ಉತ್ತಮ ಆಟವನ್ನಾಡಿದ್ದು ಯಾವ ಆಟಗಾರರನ್ನು ತಂಡದಿಂದ ಕೈಬಿಟ್ಟು ಇಶಾಂತ್ ಶರ್ಮಾ ಮತ್ತು ಮಯಾಂಕ್ ಅಗರ್ವಾಲ್‌ಗೆ ತಂಡದಲ್ಲಿ ಸ್ಥಾನ ನೀಡುತ್ತಾರೋ ಎಂಬುದನ್ನು ಕಾದು ನೋಡಬೇಕು.

ಸಿರಾಜ್ ಮತ್ತು ಪೂಜಾರ ತಂಡದಿಂದ ಹೊರಬೀಳುವ ಸಾಧ್ಯತೆ!

ಸಿರಾಜ್ ಮತ್ತು ಪೂಜಾರ ತಂಡದಿಂದ ಹೊರಬೀಳುವ ಸಾಧ್ಯತೆ!

ಇನ್ನು ಮಯಾಂಕ್ ಅಗರ್ವಾಲ್ ಮತ್ತು ಇಶಾಂತ್ ಶರ್ಮಾಗೆ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನಾಡಲು ತಂಡದಲ್ಲಿ ಸ್ಥಾನ ನೀಡಬೇಕೆಂದರೆ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಭಾಗವಹಿಸಿದ್ದ ಓರ್ವ ಬೌಲರ್ ಮತ್ತು ಓರ್ವ ಬ್ಯಾಟ್ಸ್‌ಮನ್‌ನ್ನು ತಂಡದಿಂದ ಕೈಬಿಡಲೇಬೇಕಾದ ಅನಿವಾರ್ಯತೆಯಿದೆ. ಇನ್ನು ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಬಹುತೇಕ ಎಲ್ಲರೂ ಉತ್ತಮ ಪ್ರದರ್ಶನವನ್ನು ನೀಡಿದ್ದಾರೆ, ಹೀಗಾಗಿ ಎರಡನೇ ಟೆಸ್ಟ್ ಪಂದ್ಯದಲ್ಲಿ ತಂಡದಿಂದ ಮೊಹಮ್ಮದ್ ಸಿರಾಜ್ ಮತ್ತು ಚೇತೇಶ್ವರ್ ಪೂಜಾರಾರನ್ನು ಕೈ ಬಿಡುವ ಸಾಧ್ಯತೆಗಳು ಹೆಚ್ಚಿವೆ. ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅತೀ ಕಡಿಮೆ ವಿಕೆಟ್ ಪಡೆದುಕೊಂಡ ಬೌಲರ್ ಎಂದರೆ ಅದು ಮೊಹಮ್ಮದ್ ಸಿರಾಜ್ ಮತ್ತು ಬ್ಯಾಟಿಂಗ್ ವಿಭಾಗದಲ್ಲಿ ಮಂಕಾದದ್ದು ಚೇತೇಶ್ವರ್ ಪೂಜಾರ. ಹೀಗಾಗಿ ಈ ಇಬ್ಬರು ಆಟಗಾರರನ್ನು ತಂಡದಿಂದ ಕೈಬಿಟ್ಟು ಮಯಾಂಕ್ ಅಗರ್ವಾಲ್ ಮತ್ತು ಇಶಾಂತ್ ಶರ್ಮಾಗೆ ಅವಕಾಶ ನೀಡುವ ಸಾಧ್ಯತೆಗಳು ಹೆಚ್ಚಿವೆ. ಇನ್ನುಳಿದಂತೆ ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ ಪ್ರೀತ್ ಬುಮ್ರಾ ಉತ್ತಮ ಪ್ರದರ್ಶನಗಳನ್ನು ನೀಡಿದ್ದು ಎರಡನೇ ಪಂದ್ಯದಲ್ಲಿ ತಮ್ಮ ಸ್ಥಾನವನ್ನು ಗಟ್ಟಿಗೊಳಿಸಿಕೊಂಡಿದ್ದಾರೆ ಹಾಗೂ ಬ್ಯಾಟಿಂಗ್ ವಿಭಾಗದಲ್ಲಿ ಚೇತೇಶ್ವರ್ ಪೂಜಾರ ಬಿಟ್ಟರೆ ಬೇರೆ ಯಾವ ಆಟಗಾರನನ್ನೂ ಕೈ ಬಿಡುವ ಸಾಧ್ಯತೆಗಳು ಕಡಿಮೆ. ಇನ್ನು ಗಾಯದ ಸಮಸ್ಯೆಯಿಂದ ಮೊದಲನೇ ಪಂದ್ಯದಿಂದ ಹೊರಗುಳಿದಿದ್ದ ಮಯಾಂಕ್ ಅಗರ್ವಾಲ್ ಜಾಗದಲ್ಲಿ ಕೆಎಲ್ ರಾಹುಲ್ ಕಣಕ್ಕಿಳಿದಿದ್ದರು, ಹೀಗೆ ಅಗರ್ವಾಲ್ ಬದಲು ಮೊದಲನೇ ಪಂದ್ಯದಲ್ಲಿ ಕಣಕ್ಕಿಳಿದ ರಾಹುಲ್ ಉತ್ತಮ ಪ್ರದರ್ಶನವನ್ನು ನೀಡಿದ್ದು ಎರಡನೇ ಪಂದ್ಯದಿಂದ ರಾಹುಲ್ ಅವರನ್ನು ಕೈಬಿಡುವಂತಹ ಕೆಟ್ಟ ನಿರ್ಧಾರವನ್ನು ಟೀಮ್ ಇಂಡಿಯಾ ತೆಗೆದುಕೊಳ್ಳುವ ಸಾಧ್ಯತೆ ತೀರಾ ಕಡಿಮೆ. ಹೀಗಾಗಿ ಎರಡನೇ ಟೆಸ್ಟ್ ಪಂದ್ಯದಿಂದ ಮೊಹಮ್ಮದ್ ಸಿರಾಜ್ ಮತ್ತು ಚೇತೇಶ್ವರ್ ಪೂಜಾರ ಹೊರಗುಳಿಯುವ ಸಾಧ್ಯತೆಗಳು ಸಾಕಷ್ಟು ಹೆಚ್ಚಿವೆ..

Story first published: Tuesday, August 10, 2021, 21:14 [IST]
Other articles published on Aug 10, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X