For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: 3 ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡ ಪ್ರಕಟ

India vs England ODI Series : Team India squad for Paytm ODI series against England announced

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿ ಈಗ ಅಂತಿಮ ಘಟ್ಟಕ್ಕೆ ಬಂದಿದೆ. ಈ ಟಿ20 ಸರಣಿಯ ಅಂತ್ಯದ ಬಳಿಕ ಭಾರತ ಇಂಗ್ಲೆಂಡ್ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾಗಿಯಾಗಲಿದ್ದು ಈ ಸರಣಿಗೆ 18 ಸದಸ್ಯರ ಭಾರತ ತಂಡವನ್ನು ಇಂದು ಬಿಸಿಸಿಐ ಪ್ರಕಟಿಸಿದೆ.

ಇಂಗ್ಲೆಂಡ್ ವಿರುದ್ಧದ ಈ ತಂಡದಲ್ಲಿ ಕನ್ನಡಿದ ಪ್ರಸಿದ್ಧ್ ಕೃಷ್ಣಗೆ ಸ್ಥಾನ ದೊರೆತಿದೆ. ಈ ಮೂಲಕ ಕರ್ನಾಟಕದ ವೇಗಿ ಪ್ರಸಿದ್ಧ್ ಕೃಷ್ಣ ಚೊಚ್ಚಲ ಬಾರಿಗೆ ಭಾರತ ತಂಡದ ಜರ್ಸಿ ತೊಡಲಿದ್ದಾರೆ. ಆದರೆ ಮತ್ತೋರ್ವ ಕನ್ನಡಿಗ ಮನೀಶ್ ಪಾಂಡೆಗೆ ಅವಕಾಶ ದೊರೆತಿಲ್ಲ.

ಟಿ20 ಸ್ಕ್ವಾಡ್‌ನಲ್ಲಿ ಅವಕಾಶವನ್ನು ಪಡೆದುಕೊಂಡಿದ್ದ ಸೂರ್ಯಕುಮಾರ್ ಯಾದವ್ ಏಕದಿನ ತಂಡದಲ್ಲೂ ಅವಕಾಶವನ್ನು ಗಿಟ್ಟಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ. ಕೃಣಾಲ್ ಪಾಂಡ್ಯ ಏಕದಿನ ಸ್ಕ್ವಾಡ್‌ಗೆ ಮರಳುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನು ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಜಸ್‌ಪ್ರೀತ್ ಬೂಮ್ರಾ ಟಿ20 ಸರಣಿಯ ಬಳಿಕ ಏಕದಿನ ಸರಣಿಯಿಂದಲೂ ಹೊರಗುಳಿದಿದ್ದಾರೆ. ಆಲ್‌ರೌಮಡರ್ ರವೀಂದ್ರ ಜಡೇಜಾ ಏಕದಿನ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿಲ್ಲ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಜಡೇಜಾ ಬೆರಳಿಗೆ ಗಾಯವಾಗಿತ್ತು. ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿಯಲ್ಲಿದ್ದಾರೆ.

ಟೀಮ್ ಇಂಡಿಯಾ ಸ್ಕ್ವಾಡ್ ಹೀಗಿದೆ:

T 20 ಯಲ್ಲಿ ವಿಶೇಷ ದಾಖಲೆ ಮಾಡಿದ ಸ್ಟಾರ್ ಆಟಗಾರ !! | Oneindia Kannada

ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಶಿಖರ್ ಧವನ್, ಶುಬ್ಮನ್ ಗಿಲ್, ಶ್ರೇಯಸ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಯುಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಕೃನಾಲ್ ಪಾಂಡ್ಯ, ಸುಂದರ್, ಟಿ ನಟರಾಜನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಸಿರಾಜ್, ಪ್ರಸಿದ್ ಕೃಷ್ಣ, ಶಾರ್ದುಲ್ ಠಾಕೂರ್.

class="embed_photos_container">

Story first published: Friday, March 19, 2021, 12:29 [IST]
Other articles published on Mar 19, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+