ಮಹಿಳಾ ಟಿ20 ವಿಶ್ವಕಪ್‌ಗೂ ಮುನ್ನ ಭಾರತದ ಅಬ್ಬರ; ನಂದೀನಿ ಶರ್ಮಾ ದಾಖಲೆ
ಇನ್ನೇನು ಕೆಲವೇ ದಿನಗಳಲ್ಲಿ ಮಹಿಳಾ ವಿಶ್ವಕಪ್ ಇಂಗ್ಲೆಂಡ್‌ನಲ್ಲಿ ನಡೆಯಲಿದೆ. ಈ ವಿಶ್ವಕಪ್‌ಗೆ ಪೂರ್ವ ತಯಾರಿಯಾಗಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಕಾದಾಟ ನಡೆಸಿದವು. ಈ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 38 ರನ್‌ಗಳಿಂದ ಇಂಗ್ಲೆಂಡ್ ತಂಡವನ್ನು ಮಣಿಸಿ ಅಬ್ಬರಿಸಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತ ಮಹಿಳಾ ತಂಡದ ಆರಂಭ ಭರ್ಜರಿಯಾಗಿತ್ತು. ಆರಂಭಿಕ ಸ್ಮೃತಿ ಮಂಧನಾ ಹಾಗೂ ಶಫಾಲಿ ವರ್ಮಾ ರನ್ ಕಲೆ ಹಾಕುವಲ್ಲಿ ವಿಫಲರಾದರು. ಮೂರನೇ ವಿಕೆಟ್‌ಗೆ ಯಾಸ್ತಿಕಾ ಭಾಟೀಯಾ ಹಾಗೂ ಜೆಮಿಮಾ ರೊಡ್ರಿಗಸ್ ಜೋಡಿ ಅಮೋಘ ಜೊತೆಯಾಟದ ಕಾಣಿಕೆನೀಡಿ ಅಬ್ಬರಿಸಿತು.

ಯಾಸ್ತಿಕಾ ಭಾಟೀಯಾ ಹಾಗೂ ಜೆಮಿಮಾ ರೊಡ್ರಿಗಸ್ ಜೋಡಿ ಪವರ್ ಪ್ಲೇನಲ್ಲಿ 73 ರನ್ ಸೇರಿಸಿತು. ಈ ಜೋಡಿ 76 ಎಸೆತಗಳಲ್ಲಿ 126 ರನ್ ಸೇರಿಸಿತು. ಯಾಸ್ತಿಕಾ 40 ಎಸೆತಗಳಲ್ಲಿ 9 ಬೌಂಡರಿ, 1 ಸಿಕ್ಸರ್ ಸಹಿತ 54 ರನ್ ಬಾರಿಸಿದರು. ಸ್ಟಾರ್ ಆಟಗಾರ್ತಿ ಜೆಮಿಮಾ ರೊಡ್ರಿಗಸ್ 10 ಬೌಂಡರಿ, 1 ಸಿಕ್ಸರ್ ಸಹಾಯದಿಂದ 69 ರನ್ ಸಿಡಿಸಿದರು. ಆಲ್‌ರೌಂಡರ್ ದೀಪ್ತಿ ಶರ್ಮಾ 4 ಬೌಂಡರಿ ನೆರವಿನಿಂದ 22 ರನ್ ಬಾರಿಸಿದರು. ಇಂಗ್ಲೆಂಡ್ ಪರ ಲಾರೆನ್ ಬೆಲ್ 34 ರನ್ ನೀಡಿ 3 ವಿಕೆಟ್ ಪಡೆದರು.
ಇಂಗ್ಲೆಂಡ್ ತಂಡದ ಸೋಫಿಯಾ ಡಂಕ್ಲಿ (16), ಆಲಿಸ್ ಕ್ಯಾಪ್ಸಿ (6) ರನ್ ಕಲೆ ಹಾಕುವಲ್ಲಿ ವಿಫಲರಾದರು. ಮೂರನೇ ವಿಕೆಟ್‌ಗೆ ಆಮಿ ಜೋನ್ಸ್, ಹೀದರ್ ನೈಟ್ ಮೂರನೇ ವಿಕೆಟ್‌ಗೆ 56 ಎಸೆತಗಳಲ್ಲಿ 64 ರನ್ ಸೇರಿಸಿತು. ಆಮಿ ಜೋನ್ಸ್ 9 ಬೌಂಡರಿ ಸಹಿತ 67 ರನ್ ಬಾರಿಸಿ ಔಟ್ ಆದರು. ಹೀದರ್ ನೈಟ್ 21 ರನ್ ಸಿಡಿಸಿದರು. ಅಂತಿಮವಾಗಿ ಇಂಗ್ಲೆಂಡ್ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 150 ರನ್ ಸೇರಿಸಿತು.
ನಂದೀನಿ ಶರ್ಮಾ ಇತಿಹಾಸ
ಈ ಪಂದ್ಯದಲ್ಲಿ ನಂದಿನಿ ಶರ್ಮಾ ಅವರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡುವ ಅವಕಾಶ ಪಡೆದರು. ಈ ವೇಳೆ ನಂದಿನಿ ನಾಲ್ಕು ಓವರ್ ಗಳಲ್ಲಿ 34 ರನ್ ಗಳಿಗೆ ಮೂರು ವಿಕೆಟ್ ಗಳನ್ನು ಕಬಳಿಸಿದರು. ಈ ಮೂಲಕ ನಂದಿನಿ ಶರ್ಮಾ ಈಗ ಭಾರತದ ಪರ ಟಿ 20 ಐ ಚೊಚ್ಚಲ ಪಂದ್ಯದಲ್ಲಿ ಮೂರು ವಿಕೆಟ್ ಪಡೆದ ಎರಡನೇ ವೇಗಿಯಾಗಿದ್ದಾರೆ. ಇದಕ್ಕೂ ಮೊದಲು, 2010 ರಲ್ಲಿ ಇಂಗ್ಲೆಂಡ್ ವಿರುದ್ಧ ಟಿ 20 ಐ ಚೊಚ್ಚಲ ಪಂದ್ಯ ಆಡಿದ ಸೋನಿಯಾ ದಬೀರ್ 23 ರನ್ ಗಳಿಗೆ ಮೂರು ವಿಕೆಟ್ ಕಬಳಿಸಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications