ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ಅಂತಿಮ ಎರಡು ಪಂದ್ಯಗಳಲ್ಲಿ ಆಡಲು ಉಮೇಶ್ ಯಾದವ್ ಫಿಟ್

India vs England: pacer Umesh Yadav fit to play 3rd and 4th test against england

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಅಂತಿಮ ಎರಡು ಪಂದ್ಯಗಳಲ್ಲಿ ಆಡಲು ಟೀಮ್ ಇಂಡಿಯಾದ ವೇಗಿ ಉಮೇಶ್ ಯಾದವ್ ಸಮರ್ಥರಾಗಿದ್ದಾರೆ ಎಂದು ಬಿಸಿಸಿಐ ಘೋಷಿಸಿದೆ. ಆಸ್ಟ್ರೇಲಿಯಾ ಪ್ರವಾಸದ ಟೆಸ್ಟ್ ಸರಣಿಯ ಸಂದರ್ಭದಲ್ಲಿ ಉಮೇಶ್ ಯಾದವ್ ಗಾಯಗೊಂಡು ತವರಿಗೆ ಮರಳಿದ್ದರು. ಈಗ ಅವರು ಫಿಟ್‌ನೆಸ್ ಪರೀಕ್ಷೆಯಲ್ಲಿ ತಮ್ಮ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ.

ಹೀಗಾಗಿ ಉಮೇಶ್ ಯಾದವ್ ಅಂತಿಮ ಎರಡು ಟೆಸ್ಟ್ ಪಂದ್ಯಗಳ ತಂಡವನ್ನು ಸೇರಿಕೊಂಡಿದ್ದಾರೆ. ಅಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿ ಉಮೇಶ್ ಯಾದವ್ ಗಾಯಗೊಂಡಿದ್ದರು. ಹೀಗಾಗಿ ಗಾಬಾದಲ್ಲಿ ನಡೆದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಉಮೇಶ್ ಯಾದವ್ ಕಣಕ್ಕಿಳಿದಿರಲಿಲ್ಲ. ಉಮೇಶ್ ಯಾದವ್‌ಗಾಗಿ ಟೀಮ್ ಇಂಡಿಯಾ ಟೆಸ್ಟ್ ತಂಡದಲ್ಲಿ ಇದ್ದ ಶಾರ್ದೂಲ್ ಠಾಕೂರ್ ತಂಡದಿಂದ ಬಿಡುಗಡೆಗೊಂಡಿದ್ದಾರೆ.

ಚುಟುಕು ಕ್ರಿಕೆಟ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು ಕಂಡ ಆಸ್ಟ್ರೇಲಿಯಾಚುಟುಕು ಕ್ರಿಕೆಟ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು ಕಂಡ ಆಸ್ಟ್ರೇಲಿಯಾ

ಶಾರ್ದೂಲ್ ಠಾಕೂರ್ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್‌ನಲ್ಲಿ ನಿರ್ಣಾಯಕ ಪ್ರದರ್ಶನ ನೀಡಿ ಗಮನಸೆಳೆದಿದ್ದರು. ವಾಶಿಂಗ್ಟನ್ ಸುಂದರ್ ಜೊತೆಗೆ ಅಮೂಲ್ಯ ಜೊತೆಯಾಟವನ್ನು ನೀಡಿ ತಂಡದ ಗೆಲುವಿನಲ್ಲಿ ಪಾತ್ರವಹಿಸಿದ್ದರು. ಹೀಗಾಗಿ ತವರಿನಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಪಂದ್ಯಗಳಿಗೆ ಆಯ್ಕೆಯಾಗಿದ್ದರು.

ಈಗ ಶಾರ್ದೂಲ್ ಠಾಕೂರ್ ಅವರನ್ನು ಬಿಸಿಸಿಐ ತಂಡದಿಂದ ಬಿಡುಗಡೆಗೊಳಿಸಿದ್ದು ವಿಜಯ್ ಹಜಾರೆ ಟೂರ್ನಿಯಲ್ಲಿ ಆಡಲು ಅವರಿಗೆ ಅವಕಾಶವನ್ನು ಮಾಡಿಕೊಟ್ಟಿದೆ. ಮುಂಬೈ ತಂಡದ ಪರವಾಗಿ ಶಾರ್ದೂಲ್ ಮುಂದಿನ ಪಂದ್ಯಗಳಲ್ಲಿ ಕಣಕ್ಕಿಳಿಯಲಿದ್ದಾರೆ.

ವಿಜಯ್ ಹಜಾರೆ ಟ್ರೋಫಿ: ಕೇರಳ ವೇಗಿ ಶ್ರೀಶಾಂತ್ ಅಪರೂಪದ ದಾಖಲೆವಿಜಯ್ ಹಜಾರೆ ಟ್ರೋಫಿ: ಕೇರಳ ವೇಗಿ ಶ್ರೀಶಾಂತ್ ಅಪರೂಪದ ದಾಖಲೆ

3 ಹಾಗೂ 4ನೇ ಟೆಸ್ಟ್‌ಗೆ ಪ್ರಕಟವಾಗಿರುವ ಭಾರತ ತಂಡ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಮಾಯಾಂಕ್ ಅಗರ್ವಾಲ್, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ಉಪನಾಯಕ), ರಾಹುಲ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್ ಅಶ್ವಿನ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಇಶಾಂತ್ ಶರ್ಮಾ, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್

Story first published: Tuesday, February 23, 2021, 8:16 [IST]
Other articles published on Feb 23, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X