ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ರವೀಂದ್ರ ಜಡೇಜಾ ಸಂಪೂರ್ಣ ಟೆಸ್ಟ್ ಸರಣಿಯಿಂದ ಹೊರಗುಳಿಯುವ ಸಾಧ್ಯತೆ

India vs England: Ravindra Jadeja likely to miss the whole series

ಟೀಮ್ ಇಂಡಿಯಾ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎಲ್ಲಾ ಪಂದ್ಯಗಳಿಂದಲೂ ಹೊರಗುಳೀಯುವ ಸಾಧ್ಯತೆ ಕಂಡು ಬರುತ್ತಿದೆ. ಗಾಯದಿಂದಾಗಿ ಬೆರಳು ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಜಡೇಜಾ ಅವರ ಚೇತರಿಕೆಗೆ ನಿರೀಕ್ಷೆಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ಅಹ್ಮದಾಬಾದ್‌ನಲ್ಲಿ ನಡೆಯುವ ಮೂರು ಹಾಗೂ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಪಾಲ್ಗೊಳ್ಳುವ ದೃಷ್ಟಿಯಲ್ಲಿ ರವೀಂದ್ರ ಜಡೇಜಾ ಅವರನ್ನು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(ಎನ್‌ಸಿಎ)ಯ ವೈದ್ಯಕೀಯ ಸಿಬ್ಬಂದಿಗಳು ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

ರವೀಂದ್ರ ಜಡೇಜಾ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಸಿಡ್ನಿಯಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಕೈ ಬೆರಳಿಗೆ ಕಾಯವಾಗಿತ್ತು. ಹೀಗಾಗಿ ಬ್ರಿಸ್ಬೇನ್‌ನಲ್ಲಿ ನಡೆದ ನಿರ್ಣಾಯ ಟೆಸ್ಟ್ ಪಂದ್ಯದಿಂದಲೂ ಅವರು ಹೊರಗುಳಿದಿದ್ದರು. ಆಸ್ಟ್ರೇಲಿಯಾದಲ್ಲೇ ಶಸ್ತ್ರಚಿಕಿತ್ಸೆಗೆ ಒಳಗಾಗಿ ಭಾರತಕ್ಕೆ ಮರಳಿದ್ದರು ರವೀಂದ್ರ ಜಡೇಜಾ.

ಕಿಂಗ್ಸ್ XI ಪಂಜಾಬ್ ತಂಡದ ಹೆಸರು ಹಾಗೂ ಲೋಗೋ ಬದಲಾವಣೆ ಸಾಧ್ಯತೆಕಿಂಗ್ಸ್ XI ಪಂಜಾಬ್ ತಂಡದ ಹೆಸರು ಹಾಗೂ ಲೋಗೋ ಬದಲಾವಣೆ ಸಾಧ್ಯತೆ

ರವೀಂದ್ರ ಜಡೇಜಾ ಟೆಸ್ಟ್ ಸರಣಿಯ ಅಂತಿಮ ಎರಡು ಪಂದ್ಯಗಳಿಗೆ ಲಭ್ಯತೆಯ ಬಗ್ಗೆ ಅನುಮಾನಗಳು ಉಳಿದಿರುವಂತೆಯೇ ಸೀಮಿತ ಓವರ್‌ಗಳ ಸರಣಿಯಲ್ಲಿ ಪಾಲ್ಗೊಳ್ಳುವ ಬಗ್ಗೆಯೂ ಸ್ಪಷ್ಟತೆಯಿಲ್ಲ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಅಂತಿಮವಾದ ಬಳಿಕ ಐದು ಪಂದ್ಯಗಳ ಟಿ20 ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ.

ರವೀಂದ್ರ ಜಡೇಜಾ ಅವರ ಅಲಭ್ಯರಾಗುಗುವುದು ಖಚಿತವಾದರೆ ಮೂರು ಹಾಗೂ ನಾಲ್ಕನೇ ಟೆಸ್ಟ್ ಪಂದ್ಯದಲ್ಲೂ ಟೀಮ್ ಇಂಡಿಯಾಗೆ ತಂಡದ ಸಂಯೋಜನೆ ಕಠಿಣವೆನಿಸಲಿದೆ. ಮೊದಲ ಪಂದ್ಯದಲ್ಲಿ ನದೀಮ್ ಅವಕಾಶವನ್ನು ಪಡೆದು ಎರಡು ಇನ್ನಿಂಗ್ಸ್‌ಗಳಲ್ಲಿ ನಾಲ್ಕು ವಿಕೆಟ್ ಪಡೆದರಾದರೂ ರನ್‌ ಬಿಟ್ಟುಕೊಡುವುದರಲ್ಲಿ ನಿಯಂತ್ರಣ ಸಾಧಿಸಲು ವಿಫಲರಾದರು. 3.8ರ ಸರಾಸರಿಯಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ರನ್ ಬಿಟ್ಟುಕೊಟ್ಟರೆ ಎರಡನೇ ಇನ್ನಿಂಗ್ಸ್‌ನಲ್ಲಿ 4.4ರ ಸರಾಸರಿಯಲ್ಲಿ ರನ್ ಬಿಟ್ಟುಕೊಟ್ಟರು.

2ನೇ ಟೆಸ್ಟ್ ಪಂದ್ಯದ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾಗೆ ಆತಂಕ ಮೂಡಿಸಿದ ನಾಲ್ಕು ಸಂಗತಿಗಳು2ನೇ ಟೆಸ್ಟ್ ಪಂದ್ಯದ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾಗೆ ಆತಂಕ ಮೂಡಿಸಿದ ನಾಲ್ಕು ಸಂಗತಿಗಳು

ಎರಡನೇ ಟೆಸ್ಟ್ ಪಂದ್ಯ ಶನಿವಾರ ಆರಂಭವಾಗಲಿದ್ದು ಟೀಮ್ ಇಂಡಿಯಾಗೆ ತಂಡದ ಆಯ್ಕೆ ಸವಾಲಾಗಿದೆ. ಮೊದಲ ಪಂದ್ಯದಲ್ಲಿನ ಸೋಲು ತಂಡಕ್ಕೆ ಹಿನ್ನಡೆಯನ್ನುಂಟು ಮಾಡಿದ್ದರೆ ಇಂಗ್ಲೆಂಡ್‌ಗೆ ಸಹಜವಾಗಿಯೇ ಇದು ದೊಡ್ಡ ಉತ್ಸಾಹವನ್ನು ತುಂಬಿದೆ.

Story first published: Thursday, February 11, 2021, 10:50 [IST]
Other articles published on Feb 11, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X