ಭಾರತ vs ಇಂಗ್ಲೆಂಡ್: ಇನ್ನುಳಿದ ಪಂದ್ಯಗಳಿಗೆ ಪ್ರೇಕ್ಷಕರಿಗೆ ಪ್ರವೇಶವಿಲ್ಲ!

ಅಹ್ಮದಾಬಾದ್: ಭಾರತಕ್ಕೆ ಪ್ರವಾಸ ಬಂದಿರುವ ಇಂಗ್ಲೆಂಡ್ ಕ್ರಿಕೆಟ್ ತಂಡ ಸದ್ಯ ಆತಿಥೇಯ ಭಾರತದ ವಿರುದ್ಧ ಟಿ20ಐ ಸರಣಿ ಆಡುತ್ತಿದೆ. ಐದು ಪಂದ್ಯಗಳ ಟಿ20 ಸರಣಿಯ ಆರಂಭಿಕ ಎರಡು ಪಂದ್ಯಗಳಿಗೆ ಅಭಿಮಾನಿಗಳಿಗೆ ಮೈದಾನದಲ್ಲಿ ಪಂದ್ಯ ವೀಕ್ಷಿಸಲು ಅವಕಾಶ ನೀಡಲಾಗಿತ್ತು. ಆದರೆ ಇನ್ನುಳಿದ ಪಂದ್ಯಗಳಿಗೆ ಅಭಿಮಾನಿಗಳಿಗೆ ಪ್ರವೇಶ ಇಲ್ಲವಾಗಿದೆ.
ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಕೊನೇ ಎರಡು ಟೆಸ್ಟ್ ಪಂದ್ಯಗಳು ಮತ್ತು ಆರಂಭಿಕ ಎರಡು ಟಿ20ಐ ಪಂದ್ಯಗಳಿಗೆ ಅಭಿಮಾನಿಗಳಿಗೆ ಮೈದಾನದಲ್ಲಿ ಪಂದ್ಯ ವೀಕ್ಷಿಸಲು, ತಮ್ಮ ನೆಚ್ಚಿನ ತಂಡವನ್ನು ಹುರಿದುಂಬಿಸಲು ಅವಕಾಶ ನೀಡಲಾಗಿತ್ತು. ಆದರೆ ಮುಂಬರುವ ಪಂದ್ಯಗಳು ಖಾಲಿ ಮೈದಾನದಲ್ಲಿ ನಡೆಯಲಿವೆ.
ಹೆಚ್ಚುತ್ತಿರುವ ಕೊರೊನಾವೈರಸ್ ಪ್ರಕರಣಗಳ ಭೀತಿಯಿಂದಾಗಿ ಮೈದಾನಕ್ಕೆ ಪ್ರೇಕ್ಷಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಗುಜರಾತ್‌ನಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವೀಕ್ಷಕರಿಲ್ಲದೆ ಇನ್ನುಳಿದ ಪಂದ್ಯಗಳು ನಡೆಯಲಿವೆ.
ವಿಶ್ವದ ಬೃಹತ್ ಸ್ಟೇಡಿಯಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರಂಭಿಕ ಪಂದ್ಯಗಳಲ್ಲಿ ಸುಮಾರು ಮುಕ್ಕಾಲು ಭಾಗದಷ್ಟು ಅಭಿಮಾನಿಗಳಿಗೆ ಅವಕಾಶ ನೀಡಲಾಗಿತ್ತು. ಆದರೆ ಇನ್ನುಳಿದ ಪಂದ್ಯಗಳಲ್ಲಿ ಅಭಿಮಾನಿಗಳಿಗೆ ಪ್ರವೇಶವಿಲ್ಲ ಎಂದು ಗುಜರಾತ್ ಕ್ರಿಕೆಟ್ ಅಸೋಸಿಯೇಶನ್ ಹೇಳಿದೆ. ತೃತೀಯ ಟಿ20ಐ ಮಾರ್ಚ್ 16ರ ಮಂಗಳವಾರ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications