Breaking News: ಎರಡನೇ ಏಕದಿನ ಪಂದ್ಯದಲ್ಲಿಯೂ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಅನುಮಾನ!

ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಗಾಯದ ಕಾರಣದಿಂದಾಗಿ ವಿರಾಟ್ ಕೊಹ್ಲಿ ಆಡಲು ಲಭ್ಯವಿರಲಿಲ್ಲ. ಇದೀಗ ಎರಡನೇ ಪಂದ್ಯಕ್ಕೂ ಕೊಹ್ಲಿ ಲಭ್ಯವಾಗುವುದು ಅನುಮಾನ ಎನ್ನಲಾಗಿದೆ. ಮಾಜಿ ನಾಯಕ ವಿರಾಟ್ ಕೊಹ್ಲಿ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲವಾದ್ದರಿಂದ ಎರಡನೇ ಪಂದ್ಯದಲ್ಲಿಯೂ ಕೊಹ್ಲಿ ಆಡುವುದು ಅನುಮಾನವಾಗಿದೆ.
ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತೊಡೆ ನೋವಿಗೆ ಒಳಗಾಗಿದ್ದರು. ಹೀಗಾಗಿ ಮಂಗಳವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಕೊಹ್ಲಿ ಆಡಿರಲಿಲ್ಲ. ಕೊಹ್ಲಿ ಬದಲಿಗೆ ಶ್ರೇಯಸ್ ಐಯ್ಯರ್ ಓವಲ್‌ನಲ್ಲಿ ನಡೆದ ಪಂದ್ಯದಲ್ಲಿ ಸ್ಥಾನ ಪಡೆದುಕೊಂಡಿದ್ದರು. ಎಎನ್‌ಐ ವರದಿಯ ಪ್ರಕಾರ ವಿರಾಟ್ ಕೊಹ್ಲಿ ಇನ್ನೂ ಚೇತರಿಕೆ ಕಂಡಿಲ್ಲವಾದ್ದರಿಂದ ಎರಡನೇ ಪಂದ್ಯದಲ್ಲಿಯೂ ಆಡುವ ಸಾಧ್ಯತೆಯಿಲ್ಲ ಎನ್ನಲಾಗಿದೆ.

ಕಳಪೆ ಪಾರ್ಮ್‌ನಲ್ಲಿ ಕೊಹ್ಲಿ
ವಿರಾಟ್ ಕೊಹ್ಲಿ ಸದ್ಯ ತಮ್ಮ ವೃತ್ತಿ ಜೀವನದ ಅತ್ಯಂತ ಕಳಪೆ ಫಾರ್ಮ್‌ನಲ್ಲಿದ್ದಾರೆ. 2019ರಲ್ಲಿ ಬಾಂಗ್ಲಾದೇಶದ ವಿರುದ್ಧ ಕೊಲ್ಕತ್ತಾದಲ್ಲಿ ನಡೆದ ಪಿಂಕ್‌ಬಾಲ್ ಟೆಸ್ಟ್‌ನಲ್ಲಿ ಕೊಹ್ಲಿ ತಮ್ಮ ಕೊನೆಯ ಶತಕವನ್ನು ಬಾರಿಸಿದ್ದು ಬಳಿಕ ಆ ಸಾಧನೆ ಮಾಡಲು ಯಾವ ಮಾದರಿಯಲ್ಲಿಯೂ ಸಾಧ್ಯವಾಗಿಲ್ಲ. ಈ ಬಾರಿಯ ಐಪಿಎಲ್‌ನಲ್ಲಿಯೂ ವೈಫಲ್ಯ ಅನುಭವಿಸಿದ್ದ ಕೊಹ್ಲಿ ಇತ್ತೀಚೆಗೆ ಅಂತ್ಯವಾದ ಇಂಗ್ಲೆಂಡ್ ವಿರುದ್ಧದ ಟಿ20 ಮಾದರಿಯಲ್ಲಿಯೂ ಕಳಪೆ ಪ್ರದರ್ಶನ ನೀಡಿದ್ದರು. ಹೀಗಾಗಿ ಕೊಹ್ಲಿ ಬಗ್ಗೆ ಸಾಕಷ್ಟು ಟೀಕೆಗಳು ಎದುರಾಗಿದೆ.

ಗಾಯದ ಸ್ಥಿತಿಯ ಬಗ್ಗೆ ಮಾಹಿತಿಯಿಲ್ಲ ಎಂದ ಬೂಮ್ರಾ
ಇನ್ನು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಜಸ್ಪ್ರೀತ್ ಬೂಮ್ರಾ ಪ್ರತಿಕ್ರಿಯೆ ನಿಡಿದ್ದಾರೆ. ಈ ಸಂದರ್ಬದಲ್ಲಿ ಕೊಹ್ಲಿ ಗಾಯದ ಬಗ್ಗೆ ಪ್ರಶ್ನೆ ಕೇಳಿದಾಗ ಗಾಯದ ವಿಚಾರವಾಗಿ ತನಗೆ ಹೆಚ್ಚಿನ ಮಾಹಿತಿಯಿಲ್ಲ ಎಂದಿದ್ದಾರೆ. "ನನ್ನಲ್ಲಿ ಗಾಯದ ಈಗಿನ ಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿಯಿಲ್ಲ. ಯಾಕೆಂದರೆ ನಾನು ಕೊನೆಯ ಪಂದ್ಯದಲ್ಲಿ ಆಡಿರಲಿಲ್ಲ. ಅವರು ಚೇತರಿಸಿಕೊಳ್ಳಲಿದ್ದಾರೆ ಎಂಬ ವಿಶ್ವಾಸವಿದೆ. ಆದರೆ ಈಗಿನ ಸ್ಥಿಯ ಬಗ್ಗೆ ನನ್ನಲ್ಲಿ ಮಾಹಿತಿಯಿಲ್ಲ" ಎಂದಿದ್ದಾರೆ ಜಸ್ಪ್ರೀತ್ ಬೂಮ್ರಾ.

ಎರಡನೇ ಪಂದ್ಯದಲ್ಲಿ ಮುಖಾಮುಖಿಯಾಲಿದೆ ಭಾರತ ಇಂಗ್ಲೆಂಡ್
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಏಕದಿನ ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವಿನೊಂದಿಗೆ ಮುಕ್ತಾಯವಾಗಿದೆ. ಇದೀಗ ಎರಡನೇ ಪಂದ್ಯವನ್ನಾಡಲು ಎರಡೂ ತಂಡಗಳು ಸಜ್ಜಾಗಿದೆ. ಮೊದಲ ಪಂದ್ಯದಲ್ಲಿ ಹೀನಾಯ ಪ್ರದರ್ಶನ ನೀಡಿರುವ ಇಂಗ್ಲೆಂಡ್ ತಂಡದ ಆತ್ಮವಿಶ್ವಾಸ ಕುಸಿದಿದ್ದು ಮತ್ತೆ ಪುಟುದೇಳಲು ಹಾತೊರೆಯುತ್ತಿದೆ. ಲಾರ್ಡ್ಸ್‌ನಲ್ಲಿ ಮಂಗಳವಾರ ಎರಡನೇ ಪಂದ್ಯ ನಡೆಯಲಿದ್ದು ಕೊನೆಯ ಪಂದ್ಯ ಭಾನುವಾರ ನಡೆಯಲಿದೆ.
ಕೆಎಲ್ ರಾಹುಲ್, ಅಥಿಯಾ ಶೆಟ್ಟಿ ಮದುವೆ ಗುಸುಗುಸುಗೆ ಸುನೀಲ್ ಶೆಟ್ಟಿ ಪ್ರತಿಕ್ರಿಯೆ ಏನಿದೆ?

ಇತ್ತಂಡಗಳ ಸ್ಕ್ವಾಡ್ ಹೀಗಿದೆ
ಭಾರತ ಸ್ಕ್ವಾಡ್: ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಇಶಾನ್ ಕಿಶನ್, ಯುಜ್ವೇಂದ್ರ ಚಾಹಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ರಿಷಬ್ ಪಂತ್, ಜಸ್ಪ್ರೀತ್ ಬುಮ್ರಾ, ಶಿಖರ್ ಧವನ್, ಶಾರ್ದೂಲ್ ಠಾಕೂರ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್
ಇಂಗ್ಲೆಂಡ್ ಸ್ಕ್ವಾಡ್: ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್ಸ್ಟೋನ್, ಜೇಸನ್ ರಾಯ್, ಮೊಯಿನ್ ಅಲಿ, ಸ್ಯಾಮ್ ಕರನ್, ಡೇವಿಡ್ ವಿಲ್ಲಿ, ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಫಿಲಿಪ್ ಸಾಲ್ಟ್, ಮ್ಯಾಥ್ಯೂ ಪಾರ್ಕಿನ್ಸನ್, ರೀಸ್ ಟೋಪ್ಲಿ, ಜೋ ರೂಟ್, ಬೆನ್ ಸ್ಟೋಕ್ಸ್, ಕ್ರೇಗ್ ಓವರ್ಟನ್, ಜಾನಿ ಬೈರ್‌ಸ್ಟೋ, ಬ್ರೈಡನ್ ಕಾರ್ಸೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications