ಭಾರತ vs ಇಂಗ್ಲೆಂಡ್ 1st ಟೆಸ್ಟ್: ಆರಂಭಿಕರಾಗಿ ರೋಹಿತ್-ರಾಹುಲ್ ವಿಶೇಷ ಸಾಧನೆ

ನಾಟಿಂಗ್‌ಹ್ಯಾಮ್, ಆಗಸ್ಟ್ 5: ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ದಿನದ ಮೊದಲ ಸೆಶನ್‌ನಲ್ಲಿ ಭಾರತ ಉತ್ತಮ ಪ್ರದರ್ಶನ ನೀಡಿದೆ. ಭಾರತದ ಆರಂಭಿಕ ಜೋಡಿಯಾದ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಅದ್ಭುತ ಆರಂಭವನ್ನು ಒದಗಿಸಿದ್ದಾರೆ. ಮೊದಲ ವಿಕೆಟ್‌ಗೆ ಈ ಜೋಡಿ 97 ರನ್‌ಗಳ ಜೊತೆಯಾಟವನ್ನು ನೀಡಿತ್ತು. ಮೊದಲ ಸೆಶನ್ ಅಂತ್ಯಕ್ಕೆ ಕೆಲವೇ ಕ್ಷಣಗಳಿರುವಾಗ ರೋಹಿತ್ ಶರ್ಮಾ ಬೇಡದ ಹೊಡೆತವನ್ನು ಬಾರಿಸಲು ಹೋಗಿ ವಿಕೆಟ್ ಕಳೆದುಕೊಂಡು ನಿರಾಸೆ ಅನುಭವಿಸಿದೆ.
ಇನ್ನು ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಆರಂಭಿಕರಾಗಿ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಇಂಗ್ಲೆಂಡ್ ನೆಲದಲ್ಲಿ 2007ರ ಬಳಿಕ ಇದೇ ಮೊದಲ ಬಾರಿಗೆ ಭಾರತದ ಆರಂಭಿಕ ಜೋಡಿಯೊಂದು 25 ಓವರ್‌ಗಳಿಗೂ ಹೆಚ್ಚು ಕಾಲ ಬ್ಯಾಟಿಂಗ್ ನಡೆಸಿದಂತಾಗಿದೆ. ಇದಕ್ಕೂ ಮುನ್ನ ಭಾರತದ ಮಾಜಿ ಆಟಗಾರ ವಾಸಿಂ ಜಾಫರ್ ಹಾಗೂ ದಿನೇಶ್ ಕಾರ್ತಿಕ್ ಮೊದಲ ವಿಕೆಟ್‌ಗೆ 25ಕ್ಕೂ ಹೆಚ್ಚಿ ಓವರ್‌ಗಳ ಕಾಲ ಬ್ಯಾಟಿಂಗ್ ನಡೆಸಿದ್ದರು.

ಮೊದಲ ಬಾರಿ ಟೆಸ್ಟ್‌ನಲ್ಲಿ ಜೊತೆಯಾಗಿ ಕಣಕ್ಕೆ
ಟೀಮ್ ಇಂಡಿಯಾ ಪರವಾಗಿ ಟೆಸ್ಟ್ ಕ್ರಿಕೆಟ್‌ನಲ್ಲಿ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಇದೇ ಮೊದಲ ಬಾರಿಗೆ ಆರಂಭಿಕರಾಗಿ ಕಣಕ್ಕಿಳಿದಿದ್ದಾರೆ. ಈ ಜೋಡಿ 37.3 ಓವರ್‌ಗಳ ಕಾಲ ಇಂಗ್ಲೆಂಡ್ ಬೌಲರ್‌ಗಳನ್ನು ಕಾಡುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಬಳಿಕ ರೋಹಿತ್ ಶರ್ಮಾ ರಾಬಿನ್ಸನ್ ಎಸೆತದಲ್ಲಿ ಸ್ಯಾಮ್ ಕರನ್‌ಗೆ ಕ್ಯಾಚ್ ನೀಡುವ ಮೂಲಕ ವಿಕೆಟ್ ಕಳೆದುಕೊಂಡು. 97 ರನ್‌ಗಳ ಆರಂಭಿಕ ಜೊತೆಯಾಟವನ್ನು ಈ ಜೋಡಿ ನೀಡುವಲ್ಲಿ ಯಶಸ್ವಿಯಾಯಿತು.

ಪಂದ್ಯದಲ್ಲಿ ಭಾರತದ ಹಿಡಿತ
ಸರಣಿಯ ಪ್ರಥಮ ಪಂದ್ಯದ ಮೊದಲ ದಿನ ಹಾಗೂ ಎರಡನೇ ದಿನದ ಮೊದಲ ಸೆಶನ್‌ನಲ್ಲಿ ಭಾರತ ಸಂಪೂರ್ಣ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಮೊದಲಿಗೆ ಬೌಲಿಂಗ್‌ನಲ್ಲಿ ಉತ್ತಮ ಯಶಸ್ಸು ಪಡೆದ ಭಾರತ ಬಳಿಕ ಬ್ಯಾಟಿಂಗ್‌ನಲ್ಲಿ ಆರಂಭಿಕರಿಂದ ಅದ್ಭುತ ಪ್ರದರ್ಶನ ಹೊರಹೊಮ್ಮುವ ಮೂಲಕ ಬ್ಯಾಟಿಂಗ್‌ನಲ್ಲಿಯೂ ಮೇಲುಗೈ ಸಾಧಿಸುವತ್ತ ಸಾಗಿದೆ. ರೋಹಿತ್ ಶರ್ಮಾ 36 ರನ್‌ಗಳಿಸಿದರೆ ಕೆಎಲ್ ರಾಹುಲ್ ಭೊಜನ ವಿರಾಮದ ವೇಳೆಗೆ 48 ರನ್‌ಗಳಿಸಿ ವಿಕೆಟ್ ಕಾಯ್ದುಕೊಂಡಿದ್ದಾರೆ.

ಬೌಲಿಂಗ್‌ನಲ್ಲಿ ಭಾರತಕ್ಕೆ ಯಶಸ್ಸು
ಟಾಸ್ ಸೋತರು ಭಾರತ ಮೊದಲ ಟೆಸ್ಟ್ ಪಂದ್ಯದಲ್ಲಿ ಬೌಲಿಂಗ್‌ನಲ್ಲಿ ನೀಡಿದ ಪ್ರದರ್ಶನದಿಂದಾಗಿ ಮೊದಲ ದಿನದಿಂದಲೇ ಪಂದ್ಯದ ಮೇಲೆ ಹಿಡಿತ ಸಾಧಿಸಿದೆ. ಇಂಗ್ಲೆಂಡ್ ತಂಡವನ್ನು ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 183 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಭಾರತ ಯಶಸ್ವಿಯಾಗಿತ್ತು. ಭಾರತದ ವೇಗಿಗಳಾದ ಜಸ್ಪ್ರೀತ್ ಬೂಮ್ರಾ 4 ವಿಕೆಟ್ ಪಡೆದರೆ ಮೊಹಮ್ಮದ್ ಶಮಿ ಮೂರು ವಿಕೆಟ್ ಕಿತ್ತರು. ಶಾರ್ದೂಲ್ ಠಾಕೂರ್ ಎರಡು ಹಾಗೂ ಮೊಹಮ್ಮದ್ ಸಿರಾಜ್ ಒಂದು ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು.

ಭಾರತ ಹಾಗೂ ಇಂಗ್ಲೆಂಡ್ ಆಡುವ ಬಳಗ
ಇಂಗ್ಲೆಂಡ್ ತಂಡ: ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಝಾಕ್ ಕ್ರಾವ್ಲಿ, ಜೋ ರೂಟ್ (ನಾಯಕ), ಜಾನಿ ಬೈರ್‌ಸ್ಟೊ, ಡೇನಿಯಲ್ ಲಾರೆನ್ಸ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸ್ಯಾಮ್ ಕರನ್, ಒಲ್ಲಿ ರಾಬಿನ್ಸನ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್
ಭಾರತ ತಂಡ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬೂಮ್ರಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications