For Quick Alerts
ALLOW NOTIFICATIONS  
For Daily Alerts
 

ವಿಶ್ವಕಪ್ 2019: ಸೌರವ್ ಗಂಗೂಲಿ ದಾಖಲೆ ಸರಿದೂಗಿಸಿದ ರೋಹಿತ್ ಶರ್ಮಾ

ICC World Cup 2019 : ದಾದಾ ದಾಖಲೆ ಧೂಳೀಪಟ | Rohit Sharma | Oneindia Kannada
India vs England: Rohit Sharma joins elite list with third World Cup ton

ಬರ್ಮಿಂಗ್‌ಹ್ಯಾಮ್, ಜುಲೈ 1: ಬರ್ಮಿಂಗ್‌ಹ್ಯಾಮ್‌ನ ಎಜ್‌ಬಾಸ್ಟನ್‌ನಲ್ಲಿ ಭಾನುವಾರ (ಜೂನ್ 30) ನಡೆದ ಐಸಿಸಿ ವಿಶ್ವಕಪ್ ಪಂದ್ಯದಲ್ಲಿ ಭಾರತದ ಉಪನಾಯಕ ರೋಹಿತ್ ಶರ್ಮಾ 25ನೇ ಏಕದಿನ ಶತಕ ಬಾರಿಸಿದರು. ಈ ವಿಶ್ವಕಪ್‌ನಲ್ಲಿ ಶರ್ಮಾ ಬಾರಿಸಿದ 3ನೇ ಶತಕವಿದು. ಈ ಸಾಧನೆಯೊಂದಿಗೆ ರೋಹಿತ್ ದಾಖಲೆಯೊಂದನ್ನೂ ಸರಿದೂಗಿಸಿಕೊಂಡಿದ್ದಾರೆ.

ಕುತೂಹಲಕಾರಿ ಸ್ಟೋರಿಗಳು, ಅಂಕಿ-ಅಂಶಗಳು 'ಐಸಿಸಿ ಕ್ರಿಕೆಟ್ ವಿಶ್ವಕಪ್ 2019' ವಿಶೇಷ ಮುಖಪುಟದಲ್ಲಿವೆ

ಇಂಗ್ಲೆಂಡ್ ವಿರುದ್ಧ ರೋಹಿತ್ 109 ಎಸೆತಗಳಿಗೆ 102 ರನ್ ಕಲೆ ಹಾಕಿದರು. ಇದೊಂದಿಗೆ ಹಿಟ್ ಮ್ಯಾನ್ ರೋಹಿತ್ ಒಂದೇ ವಿಶ್ವಕಪ್ ಆವೃತ್ತಿಯಲ್ಲಿ 3 ಶತಕ ಬಾರಿಸಿದ ಭಾರತದ ಎರಡನೇ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ 2003ರ ವಿಶ್ವಕಪ್‌ನಲ್ಲಿ 3 ಶತಕಗಳನ್ನು ಬಾರಿಸಿದ್ದರು.

ಐಸಿಸಿ ವಿಶ್ವಕಪ್ 2019ರಲ್ಲಿ ಶರ್ಮಾ ದಕ್ಷಿಣ ಆಫ್ರಿಕಾ ವಿರುದ್ಧ 123, ಪಾಕಿಸ್ತಾನ ಎದುರು 140 ಮತ್ತು ಇಂಗ್ಲೆಂಡ್ ವಿರುದ್ಧ 102 ರನ್ ಗಳಿಸಿದ್ದಾರೆ. ಭಾನುವಾರದ ಪಂದ್ಯದಲ್ಲಿ ಶರ್ಮಾ ಅವರು ಕ್ರಿಸ್ ವೋಕ್ಸ್ ಓವರ್‌ನಲ್ಲಿ ಜೋಸ್ ಬಟ್ಲರ್‌ಗೆ ಕ್ಯಾಚಿತ್ತು ನಿರ್ಗಮಿಸಿದರು.

ವಿಶ್ವಕಪ್‌ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧ ಶತಕ ಬಾರಿಸಿದ ಎರಡನೇ ಭಾರತೀಯ ಹಿರಿಮೆಗೂ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. 2011ರಲ್ಲಿ ಭಾರತದ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಇಂಗ್ಲೆಂಡ್ ವಿರುದ್ಧ ಶತಕ ಬಾರಿಸಿ ಗಮನ ಸೆಳೆದಿದ್ದರು. ಅಂದ್ಹಾಗೆ ಒಟ್ಟಾರೆ ವಿಶ್ವಕಪ್‌ನಲ್ಲಿ ಶರ್ಮಾ 4 ಶತಕಗಳನ್ನು ಬಾರಿಸಿದ್ದಾರೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್, ಜಾನಿ ಬೇಸ್ಟೋವ್ ಶತಕ, ಜೇಸನ್ ರಾಯ್, ಬೆನ್ ಸ್ಟೋಕ್ಸ್ ಅರ್ಧಶತಕದೊಂದಿಗೆ 7 ವಿಕೆಟ್ ನಷ್ಟದಲ್ಲಿ 337 ರನ್ ಬಾರಿಸಿತು. ಗುರಿ ಬೆನ್ನತ್ತಿದ ಭಾರತ ಶರ್ಮಾ ಶತಕ, ವಿರಾಟ್ ಕೊಹ್ಲಿ ಅರ್ಧ ಶತಕದೊಂದಿಗೆ ಗೆಲುವಿನ ಆಸೆ ಮೂಡಿಸಿತ್ತಾದರೂ 5 ವಿಕೆಟ್ ಕಳೆದು 305 ರನ್ ಬಾರಿಸಿ 31 ರನ್ ನಿಂದ ಸೋಲೊಪ್ಪಿಕೊಂಡಿತು. ಇದು ಟೂರ್ನಿಯಲ್ಲಿ ಭಾರತಕ್ಕೆ ಲಭಿಸಿದ ಮೊದಲ ಸೋಲು.

Story first published: Monday, July 1, 2019, 10:09 [IST]
Other articles published on Jul 1, 2019
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+