
ಭಾರತ ಹಾಗೂ ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ ಮೂರನೇ ಪಂದ್ಯದಲ್ಲಿ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದರು. ಆದರೆ ರೋಹಿತ್ ಶರ್ಮಾ ಬ್ಯಾಟ್‌ನಿಂದ ನಿರೀಕ್ಷಿತ ಪ್ರದರ್ಶನ ಬಂದಿರಲಿಲ್ಲ. ಆದರೆ ಮುಂದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಬ್ಯಾಟಿಂಗ್ ಮಾಡುವಲ್ಲಿ ಯಶಸ್ವಿಯಾದರೆ ಮೈಲಿಗಲ್ಲೊಂದನ್ನು ದಾಟುವ ಅವಕಾಶವಿದೆ.
ಈ ವರ್ಷದಲ್ಲಿ ರೋಹಿತ್ ಶರ್ಮಾ ಅದ್ಭುತ ಟೆಸ್ಟ್ ಋತುವನ್ನು ಹೊಂದಿದ್ದರು. 6 ಪಂದ್ಯಗಳಲ್ಲಿ 474 ರನ್‌ಗಳಿಸಿದ್ದ ರೋಹಿತ್ ಒಂದು ಶತಕ ಹಾಗೂ ಎರಡು ಶರ್ಧ ಶತಕ ದಾಖಲಿಸಿ ಮಿಂಚಿದ್ದರು. ಈ ಇನ್ನಿಂಗ್ಸ್‌ನ ಬಳಿಕ ರೋಹಿತ್ ಈ ವರ್ಷದಲ್ಲಿ ಮೊದಲ ಟಿ20 ಪಂದ್ಯವನ್ನು ಆಡಿದ್ದು ಈ ಪಂದ್ಯದಲ್ಲಿ 17 ಎಸೆತ ಎದುರಿಸಿದ ಶರ್ಮಾ 15 ರನ್‌ಗಳಿಸಲಷ್ಟೇ ಶಕ್ತರಾಗಿದ್ದರು.
ಈಗ ಟಿ20 ಕ್ರಿಕೆಟ್‌ನಲ್ಲಿ ಅತ್ಯಂತ ಹೆಚ್ಚು ರನ್‌ಗಳಿಸಿದ ಎರಡನೇ ಆಟಗಾರ ಸ್ಥಾನವನ್ನು ಪಡೆಯಲು ರೋಹಿತ್‌ಗೆ ಉತ್ತಮ ಅವಕಾಶವಿದೆ. ಸದ್ಯ ಮೂರನೇ ಸ್ಥಾನದಲ್ಲಿರುವ ರೋಹಿತ್ ಶರ್ಮಾ ಎರಡನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್‌ನ ಮಾರ್ಟಿನ್ ಗಪ್ಟಿಲ್ ಅವರಿಗಿಂತ 62 ರನ್‌ಗಳಷ್ಟು ಹಿಂದಿದ್ದಾರೆ. ಮಾರ್ಟಿನ್ ಗಪ್ಟಿಲ್ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 2839 ರನ್‌ಗಳನ್ನು ಗಳಿಸಿದ್ದಾರೆ.
ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರರ ಈ ಪಟ್ಟಿಯಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದು 88 ಪಂದ್ಯಗಳಲ್ಲಿ 3078 ರನ್‌ಗಳಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ದ್ವಿತೀಯ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಮಾದರಿಯಲ್ಲಿ 3000 ರನ್‌ಗಳಿಸಿದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಎರಡು ಪಂದ್ಯಗಳನ್ನು ಕಳೆದುಕೊಂಡು ಹಿನ್ನಡೆಯಲ್ಲಿದೆ. ಐದು ಪಂದ್ಯಗಳ ಟಿ0 ಸರಣಿಯಲ್ಲಿ ಎರಡು ಪಂದ್ಯಗಳು ಮಾತ್ರವೇ ಬಾಕಿಯಿದ್ದು ಭಾರತ ಟಿ20 ಸರಣಿಯನ್ನು ವಶಕ್ಕೆ ಪಡೆಯಲು ಉಳಿದ ಎರಡು ಪಂದ್ಯಗಳನ್ನು ಕೂಡ ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದೆ.