ವಿದೇಶಿ ನೆಲದಲ್ಲಿ ಚೊಚ್ಚಲ ಟೆಸ್ಟ್ ಶತಕ ಬಾರಿಸಿದ 'ಹಿಟ್‌ಮ್ಯಾನ್' ರೋಹಿತ್

ಲಂಡನ್: ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮ ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶಿಷ್ಠ ದಾಖಲೆ ನಿರ್ಮಿಸಿದ್ದಾರೆ. ವಿದೇಶದಲ್ಲಿ ನಡೆದ ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಶತಕ ಬಾರಿಸಿದ ದಾಖಲೆಗೆ ಶರ್ಮಾ ಕಾರಣರಾಗಿದ್ದಾರೆ. ಲಂಡನ್‌ನ ಕೆನ್ನಿಂಗ್ಟನ್ ಓವಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಶರ್ಮಾ ಶತಕ ದಾಖಲಿಸಿದ್ದಾರೆ.
ನಾಲ್ಕನೇ ಟೆಸ್ಟ್ ಪಂದ್ಯದ 3ನೇ ದಿನದಾಟದಲ್ಲಿ ಭಾರತದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ 127 ರನ್ ಬಾರಿಸಿದ್ದಾರೆ. ಚೇತೇಶ್ವರ್ ಪೂಜಾರ ಜೊತೆ ಉತ್ತಮ ಜೊತೆಯಾಟವೂ ನೀಡಿದ ಶರ್ಮಾ ತಂಡದ ಮೊತ್ತ ಹೆಚ್ಚಿಸುವಲ್ಲಿ ಪ್ರಮುಖ ಕೊಡುಗೆ ನೀಡಿದರು.

ಟೆಸ್ಟ್ ಕ್ರಿಕೆಟ್‌ನಲ್ಲಿ ರೋಹಿತ್ 3000 ರನ್ ಮೈಲಿಗಲ್ಲು
40ನೇ ಟೆಸ್ಟ್ ಪಂದ್ಯಕ್ಕಾಗಿ ಮೈದಾನಕ್ಕಿಳಿದಿದ್ದ ರೋಹಿತ್ ವಿದೇಶದಲ್ಲಿ ಮೊದಲ ಟೆಸ್ಟ್ ಶತಕ ಬಾರಿಸಿದ್ದಲ್ಲದೆ, ಟೆಸ್ಟ್ ಕ್ರಿಕೆಟ್‌ನಲ್ಲಿ 3000 ರನ್ ಕೂಡ ಪೂರೈಸಿದ್ದಾರೆ. 34ರ ಹರೆಯದ ಶರ್ಮಾ ಟೆಸ್ಟ್ ಕ್ರಿಕೆಟ್‌ನಲ್ಲಿ 8 ಶತಕ, 1 ಅರ್ಧ ಶತಕ ಮತ್ತು 14 ಅರ್ಧ ಶತಕಗಳ ದಾಖಲೆ ಹೊಂದಿದ್ದಾರೆ.
ಭಾರತದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಭಾರತದ ಟಾಪ್ ಬ್ಯಾಟಿಂಗ್ ಆರ್ಡರ್‌ನಿಂದ ಉತ್ತಮ ರನ್ ಕೊಡುಗೆ ದೊರೆತಿದೆ. 80.1 ನೇ ಓವರ್ ಮುಕ್ತಾಯಕ್ಕೆ ಭಾರತ 2 ವಿಕೆಟ್ ಕಳೆದು 236 ರನ್ ಗಳಿಸಿತ್ತು. ಕೆಎಲ್ ರಾಹುಲ್ 46 ರನ್, ರೋಹಿತ್ ಶರ್ಮಾ 127 ರನ್ ಬಾರಿಸಿ ಔಟ್ ಆಗಿದ್ದರು. ಚೇತೇಶ್ವರ್ ಪೂಜಾರ 61 ರನ್ ಬಾರಿಸಿ ಆಡುತ್ತಿದ್ದರು.

ಭಾರತ vs ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ ಸ್ಕೋರ್
ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತ, ರೋಹಿತ್ ಶರ್ಮಾ 11, ಕೆಎಲ್ ರಾಹುಲ್ 17, ಚೇತೇಶ್ವರ ಪೂಜಾರ 4, ವಿರಾಟ್ ಕೊಹ್ಲಿ 50, ಅಜಿಂಕ್ಯ ರಹಾನೆ 14, ರಿಷಭ್ ಪಂತ್ 9, ರವೀಂದ್ರ ಜಡೇಜಾ 10, ಶಾರ್ದೂಲ್ ಠಾಕೂರ್ 57, ಉಮೇಶ್ ಯಾದವ್ 10, ಮೊಹಮ್ಮದ್ ಸಿರಾಜ್ 1 ರನ್‌ನೊಂದಿಗೆ 61.3 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 191 ರನ್ ಗಳಿಸಿತ್ತು.
ಮೊದಲ ಇನ್ನಿಂಗ್ಸ್‌ಗೆ ಇಳಿದ ಇಂಗ್ಲೆಂಡ್, ರೋರಿ ಬರ್ನ್ಸ್ 5, ಹಸೀಬ್ ಹಮೀದ್ 0, ಡೇವಿಡ್ ಮಲನ್ 31, ಜೋ ರೂಟ್ 21, ಆಲಿ ಪೋಪ್ 81, ಜಾನಿ ಬೈರ್‌ಸ್ಟೋ 37, ಮೊಯೀನ್ ಅಲಿ 35, ಕ್ರಿಸ್ ವೋಕ್ಸ್ 50, ಕ್ರೇಗ್ ಓವರ್‌ಟನ್ 1, ಆಲಿ ರಾಬಿನ್ಸನ್ 5, ಜೇಮ್ಸ್ ಆಂಡರ್ಸನ್ 1 ರನ್‌ನೊಂದಿಗೆ 84 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 290 ರನ್ ಗಳಿಸಿ 99 ರನ್ ಮುನ್ನಡೆ ಸಾಧಿಸಿತ್ತು.

ಇತ್ತಂಡಗಳ ಆಡುವ ಬಳಗ
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ಡಬ್ಲ್ಯೂ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.
ಇಂಗ್ಲೆಂಡ್ ಪ್ಲೇಯಿಂಗ್ XI: ರೋರಿ ಬರ್ನ್ಸ್, ಹಸೀಬ್ ಹಮೀದ್, ಡೇವಿಡ್ ಮಲನ್, ಜೋ ರೂಟ್ (ಸಿ), ಆಲ್ಲಿ ಪೋಪ್, ಜಾನಿ ಬೈರ್‌ಸ್ಟೊ (ಡಬ್ಲ್ಯೂ), ಮೊಯೀನ್ ಅಲಿ, ಕ್ರಿಸ್ ವೋಕ್ಸ್, ಕ್ರೇಗ್ ಓವರ್‌ಟನ್, ಒಲ್ಲಿ ರಾಬಿನ್ಸನ್, ಜೇಮ್ಸ್ ಆಂಡರ್ಸನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications