IND vs ENG 2nd T20: ಟಾಸ್ ಗೆದ್ದು ಭಾರತ ಫಿಲ್ಡೀಂಗ್; ರಿಂಕು, ನಿತೀಶ್ ರೆಡ್ಡಿ ಔಟ್
ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟಿ20 ಅಂತಾರಾಷ್ಟ್ರೀಯ ಪಂದ್ಯ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆರಂಭವಾಗಿದೆ. ಮೊದಲ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಗೆದ್ದಿರುವ ಭಾರತ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ. ಮತ್ತೊಂದೆ ಇಂಗ್ಲೆಂಡ್ ತಂಡ ಎರಡನೇ ಟಿ20 ಪಂದ್ಯವನ್ನು ಗೆದ್ದು ಸರಣಿಯನ್ನು 1-1 ಅಂತರದಲ್ಲಿ ಸಮಬಲ ಮಾಡಲು ಯೋಜನೆ ರೂಪಿಸಿದೆ. ಈ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿದೆ. ಕಳೆದ ಪಂದ್ಯದಂತೆ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡಲಿದೆ.
ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ತಂಡದಲ್ಲಿ ಎರಡು ಬದಲಾವಣೆ ಮಾಡಿದ್ದಾರೆ. ರಿಂಕು ಸಿಂಗ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದಾರೆ. ಇವರಿಬ್ಬರ ಸ್ಥಾನಕ್ಕೆ ವಾಷಿಂಗ್ಟನ್ ಸುಂದರ್ ಮತ್ತು ಧ್ರುವ್ ಜುರೆಲ್ ಸ್ಥಾನ ಪಡೆದಿದ್ದಾರೆ. ಈ ಪಂದ್ಯದಲ್ಲಿಯೂ ವೇಗಿ ಮೊಹಮ್ಮದ್ ಶಮಿ ಅವರಿಗೆ ಆಡುವ ಅವಕಾಶ ಸಿಕ್ಕಿಲ್ಲ.

ಎರಡನೇ ಟಿ20 ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ದೊಡ್ಡ ಆಘಾತ ಅನುಭವಿಸಿದೆ. ಇಬ್ಬರು ಸ್ಟಾರ್ ಆಟಗಾರರು ಪಂದ್ಯದಿಂದ ಹೊರಗುಳಿದಿದ್ದಾರೆ. ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರು ಗಾಯದ ಸಮಸ್ಯೆಯಿಂದ ಇಡೀ ಸರಣಿಯಿಂದ ಹೊರಗುಳಿದಿದ್ದಾರೆ. ಮತ್ತೊಂದೆಡೆ ಸ್ಟಾರ್ ಬ್ಯಾಟರ್ ರಿಂಕು ಸಿಂಗ್ ಮುಂದಿನ ಎರಡು ಪಂದ್ಯಗಳಲ್ಲಿ ಆಲಭ್ಯರಾಗಿದ್ದಾರೆ. ಈ ಇಬ್ಬರ ಬದಲಿಗೆ ಶಿವಂ ದುಬೆ ಮತ್ತು ರಮಣದೀಪ್ ಸಿಂಗ್ ಸೇರ್ಪಡೆಯಾಗಿದ್ದಾರೆ.
ಇಂಗ್ಲೆಂಡ್ ತಂಡ ಜಾಕೋಬ್ ಬೆಥೆಲ್ ಮತ್ತು ಗಸ್ ಅಟ್ಕಿನ್ಸನ್ ಅವರನ್ನು ಆಡುವ ಹನ್ನೊಂದರ ಬಳಗದಿಂದ ಕೈಬಿಟ್ಟಿದೆ. ಅವರ ಸ್ಥಾನಕ್ಕೆ ಜೇಮಿ ಸ್ಮಿತ್ ಮತ್ತು ಬ್ರೇಡನ್ ಕಾರ್ಸೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆದ ತನ್ನ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 7 ವಿಕೆಟ್‌ಗಳ ಜಯ ಸಾಧಿಸಿತ್ತು.
ಉಭಯ ತಂಡಗಳ ಪ್ಲೇಯಿಂಗ್-11
ಇಂಗ್ಲೆಂಡ್: ಬೆನ್ ಡಕೆಟ್, ಫಿಲಿಪ್ ಸಾಲ್ಟ್ (ವಿಕೆಟ್‌ಕೀಪರ್), ಜೋಸ್ ಬಟ್ಲರ್ (ನಾಯಕ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜೇಮೀ ಸ್ಮಿತ್, ಜೇಮೀ ಓವರ್‌ಟನ್, ಬ್ರೈಡನ್ ಕಾರ್ಸೆ, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್.
ಭಾರತ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಧ್ರುವ್ ಜುರೆಲ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications