ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ಸ್ಪೋಟಕ ಅರ್ಧಶತಕ ಸಿಡಿಸಿದ ಶಾರ್ದೂಲ್ ಠಾಕೂರ್

India vs England: Shardul thakur play t20 style batting hit 50

ಲಂಡನ್, ಸೆಪ್ಟೆಂಬರ್ 2: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಮಿಂಚಿದ್ದಾರೆ. ಬ್ಯಾಟ್ಸ್‌ಮನ್‌ಗಳ ವೈಫಲ್ಯದ ಕಾರಣದಿಂದಾಗಿ ಕುಸಿತ ಕಂಡ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ ಮತ್ತೊಮ್ಮೆ ಕನಿಷ್ಠ ಮೊತ್ತಕ್ಕೆ ಕುಸಿಯುವ ಭೀತಿಯನ್ನು ಎದುರಿಸಿತ್ತು. ಆದರೆ ಶಾರ್ದೂಲ್ ಠಾಕೂರ್ ಈ ಕುಸಿತವನ್ನು ಅಲ್ಪ ಪ್ರಮಾಣಕ್ಕೆ ತಡೆಯುವಲ್ಲಿ ಯಶಸ್ವಿಯಾಗಿದ್ದಲ್ಲದೆ ತಂಡದ ಮೊತ್ತವನ್ನು 191ಕ್ಕೆ ಏರಿಸುವಲ್ಲಿ ಯಶಸ್ವಿಯಾದರು.

117 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡಿದ್ದಾಗ ಶಾರ್ದೂಲ್ ಠಾಕೂರ್ ಬ್ಯಾಟಿಂಗ್‌ಗೆ ಇಳಿದರು. ಈ ಸಂದರ್ಭದಲ್ಲಿ ಟೀಮ್ ಇಂಡಿಯಾ 150 ರನ್‌ಗಳ ಗಡು ದಾಟುವುದು ಕಷ್ಟ ಎಂಬ ಪರಿಸ್ಥಿತಿಯಿತ್ತು. ಇಂಗ್ಲೆಂಡ್ ಬೌಲರ್‌ಗಳು ಕೂಡ ಇದೇ ಲೆಕ್ಕಾಚಾರದಲ್ಲಿದ್ದರು. ಆದರೆ ಶಾರ್ದೂಲ್ ಠಾಕೂರ್ ಎಲ್ಲಾ ಲೆಕ್ಕಾಚಾರವನ್ನು ಕೂಡ ಬುಡಮೇಲು ಮಾಡಿದರು. ಇಂಗ್ಲೆಂಡ್ ವೇಗಿಗಳ ದಾಳಿಗೆ ಸ್ಪೋಟಕ ಪ್ರದರ್ಶನ ನೀಡಲು ಮುಂದಾಗುವ ಮೂಲಕ ರನ್‌ಗತಿ ಏರಿಸಿದರು.

ಟೀಮ್ ಇಂಡಿಯಾದ ಸ್ಪೆಶಲಿಸ್ಟ್ ಬ್ಯಾಟ್ಸ್‌ಮನ್‌ಗಳು ಕ್ರೀಸ್‌ನಲ್ಲಿ ನೆಲೆಯೂರಲು ಪರದಾಡಿ ವಿಕೆಟ್ ಕೈಚೆಲ್ಲಿದ್ದರೆ ಶಾರ್ದೂಲ್ ಠಾಕೂರ್ ಬೇರೆಯದ್ದೇ ಲೆಕ್ಕಾಚಾರದೊಂದಿಗೆ ಕಣಕ್ಕಿಳಿದಿದ್ದರು. ಟಿ20 ಮಾದರಿಯಲ್ಲಿ ಬ್ಯಾಟ್ ಬೀಸುವ ಮೂಲಕ ಶಾರ್ದೂಲ್ ಠಾಕೂರ್ ರನ್‌ಗಳಿಸಿದರು. ಈ ಮೂಲಕ ಟೀಮ್ ಇಂಡಿಯಾ ಅಭಿಮಾನಿಗಳಿಗೆ ಭರಪೂರ ಮನರಂಜನೆ ನೀಡಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೊಂದು ಭರ್ಜರಿ ಅರ್ಧ ಶತಕವನ್ನು ಸಿಡಿಸಿದರು.

ಕೇವಲ 36 ಎಎಸೆತಗಳನ್ನು ಎದುರಿಸಿದ ಶಾರ್ದೂಲ್ ಠಾಕೂರ್ 57 ರನ್‌ಗಳ ಕೊಡುಗೆಯನ್ನು ತಂಡಕ್ಕೆ ನೀಡುವಲ್ಲಿ ಯಶಸ್ವಿಯಾದರು. 158.33 ಸ್ಟ್ರೆಐಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಶಾರ್ದೂಲ್ ಏಳು ಬೌಂಡರಿ ಹಾಗೂ ಮೂರು ಭರ್ಜರಿ ಸಿಕ್ಸರ್ ಸಿಡಿಸಿ ಮಿಂಚಿದರು. ಈ ಮೂಲಕ 8ನೇ ವಿಕೆಟ್‌ಗೆ ಉಮೇಶ್ ಯಾದವ್ ಜೊತೆಗೆ ಅರ್ಧ ಶತಕದ ಜೊತೆಯಾಟದಲ್ಲಿ ಭಾಗಿಯಾದರು. ಉಮೇಶ್ ಯಾದವ್ 20 ಎಸೆತಗಳನ್ನು ಎದುರಿಸಿ 10 ರನ್‌ಗಳಿಸಿ ಠಾಕೂರ್‌ಗೆ ಸಾಥ್ ನೀಡಿದರು.

ಆದರೆ ಶಾರ್ದೂಲ್ ಠಾಕೂರ್ ಎಲ್‌ಬಿಡಬ್ಲ್ಯು ಬಲೆಗೆ ಬಿದ್ದ ಕೆಲವೇ ಕ್ಷಣಗಳಲ್ಲಿ ಎಸೆತಗಳಲ್ಲಿ ಟೀಮ್ ಇಂಡಿಯಾ ಉಳಿದ ಎರಡು ವಿಕೆಟ್‌ಗಳನ್ನು ಕೂಡ ಕಳೆದುಕೊಳ್ಳುವ ಮೂಲಕ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 191 ರನ್‌ಗಳನ್ನು ಗಳಿಸಲು ಮಾತ್ರ ಶಕ್ತವಾಯಿತು.

ಇದಕ್ಕೂ ಮುನ್ನ ಟೀಮ್ ಇಂಡಿಯಾ ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯವನ್ನು ಅನುಭವಿಸಿದೆ. ಆರಂಭಿಕರ ಸಹಿತ ಟೀಮ್ ಇಂಡಿಯಾದ ಬ್ಯಾಟಿಂಗ್ ಪಡೆ ಸಂಪೂರ್ಣವಾಗಿ ವೈಫಲ್ಯವನ್ನು ಅನುಭವಿಸಿತು. ಭಾರತದ ಬ್ಯಾಟಿಂಗ್ ವಿಭಾಗದಲ್ಲಿ ನಾಯಕ ವಿರಾಟ್ ಕೊಹ್ಲಿ ಮಾತ್ರವೇ ಮಿಂಚಿವಲ್ಲಿ ವಿಫಲವಾದರು. ಕೊಹ್ಲಿ ಭರ್ತಿ 50 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಸತತವಾಗಿ ವೈಫಲ್ಯವನ್ನು ಅನುಭವಿಸುತ್ತಾ ಬಂದಿರುವ ಅಜಿಂಕ್ಯಾ ರಹಾನೆ ಹಾಗೂ ರಿಷಬ್ ಪಂತ್ ಈ ಪಂದ್ಯದಲ್ಲಿಯೂ ತಮ್ಮ ಕಳಪೆ ಪ್ರದರ್ಶನ ಮುಂದುವರಿಸಿದ್ದಾರೆ.

ಇನ್ನು ಇಂಗ್ಲೆಂಡ್ ತಂಡದ ವೇಗಿಗಳು ಈ ಪಂದ್ಯದಲ್ಲಿಯೂ ಮಿಂಚುವಲ್ಲಿ ಯಶಸ್ವಿಯಾಗಿದ್ದಾರೆ. ಕ್ರಿಸ್ ವೋಕ್ಸ್ ನಾಲ್ಕು ವಿಕೆಟ್ ಪಡೆದು ಟೀಮ್ ಇಂಡಿಯಾಗೆ ಆಘಾತ ನೀಡದರೆ ರಾಬಿನ್ಸನ್ 3 ವಿಕೆಟ್ ಹಾಗೂ ಜೇಮ್ಸ್ ಆಂಡರ್ಸನ್ ಹಾಗೂ ಕ್ರೆಗ್ ಓವರ್ಟನ್ ತಲಾ ಒಂದು ವಿಕೆಟ್ ಪಡೆದುಕೊಂಡಿದ್ದಾರೆ.

ಟೀಮ್ ಇಂಡಿಯಾ ಆಡುವ ಬಳಗ: ಕೆಎಲ್ ರಾಹುಲ್, ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ರವೀಂದ್ರ ಜಡೇಜಾ, ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.

ಕಾಂಗ್ರೆಸ್ ಪಾರ್ಟಿ ಸೇರೋಕೆ ಅಪ್ಪ ಮಗನ ಲಾಬಿ ಜೋರಾಗಿದೆ | Oneindia Kannada

ಇಂಗ್ಲೆಂಡ್ ಆಡುವ ಬಳಗ: ಹಸೀಬ್ ಹಮೀದ್, ರೋರಿ ಬರ್ನ್ಸ್ ಡೇವಿಡ್ ಮಲನ್, ಜೋ ರೂಟ್ (ನಾಯಕ), ಒಲ್ಲಿ ಪೋಪ್, ಜಾನಿ ಬೈರ್‌ಸ್ಟೊವ್ (ವಿಕೆಟ್ ಕೀಪರ್), ಮೊಯೀನ್ ಅಲಿ, ಕ್ರಿಸ್ ವೋಕ್ಸ್, ಕ್ರೇಗ್ ಓವರ್‌ಟನ್, ಜೇಮ್ಸ್ ಆಂಡರ್ಸನ್, ಒಲ್ಲಿ ರಾಬಿನ್ಸನ್

Story first published: Friday, September 3, 2021, 10:02 [IST]
Other articles published on Sep 3, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X