ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: "ಆಡುವ ಬಳಗದಲ್ಲಿ ಸ್ಥಾನ ಪಡೆಯಲು ಸೂರ್ಯಕುಮಾರ್ ಅರ್ಹ"

India vs England: Suryakumar Yadav deserves spot in team india playing XI

ಭಾರತೀಯ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಟೀಮ್ ಇಂಡಿಯಾದ ಟಿ20 ತಂಡಕ್ಕೆ ಇತ್ತೀಚೆಗೆ ಆಯ್ಕೆಯಾದ ಸೂರ್ಯಕುಮಾರ್ ಯಾದವ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆಯಲು ಆತ ಅರ್ಹ ಆಟಗಾರ ಎಂದು ಲಕ್ಷ್ಮಣ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯ ಶುಕ್ರವಾರ ನಡೆದಿತ್ತು. ಈ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆಯಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಮೊದಲ ಪಂದ್ಯದಲ್ಲಿ ಸೂರ್ಯಕುಮಾರ್‌ಗೆ ಆ ಅವಕಾಶ ದೊರೆತಿಲ್ಲ. ಆದರೆ ಮುಂದಿನ ಪಂದ್ಯಗಳಲ್ಲಿ ಸೂರ್ಯಕುಮಾರ್ ಯಾದವ್ ಅವಕಾಶವನ್ನು ಪಡೆದುಕೊಳ್ಳಲಿದ್ದಾರೆ ಎಂದಿದ್ದಾರೆ ಲಕ್ಷ್ಮಣ್.

ಆರ್ಚರ್ ಎಸೆತಕ್ಕೆ ರಿವರ್ಸ್‌ಸ್ವೀಪ್ ಸಿಕ್ಸರ್ ಬಾರಿಸಿದ ರಿಷಭ್ ಪಂತ್: ವಿಡಿಯೋಆರ್ಚರ್ ಎಸೆತಕ್ಕೆ ರಿವರ್ಸ್‌ಸ್ವೀಪ್ ಸಿಕ್ಸರ್ ಬಾರಿಸಿದ ರಿಷಭ್ ಪಂತ್: ವಿಡಿಯೋ

ಸರಣಿಯ ಆರಂಭಕ್ಕೂ ಮುನ್ನ ವಿವಿಎಸ್ ಲಕ್ಷ್ಮಣ್ ಸೂರ್ಯಕುಮಾರ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಸೂರ್ಯಕುಮಾರ್ ಯಾದವ್ ಸುದೀರ್ಘ ಕಾಲದಿಂದ ಟೀಮ್ ಇಂಡಿಯಾ ಪರವಾಗಿ ಆಡುವ ಅವಕಾಶಕ್ಕಾಗಿ ಕಾದು ಈಗ ಗಿಟ್ಟಿಸಿಕೊಂಡಿದ್ದಾರೆ. ಆತನ ತಾಳ್ಮೆ ಯುವ ಆಟಗಾರರಿಗೆ ಪ್ರೇರಣೆ ಎಂದು ಲಕ್ಷ್ಮಣ್ ಪ್ರತಿಕ್ರಿಯಿಸಿದ್ದರು.

ಸೂರ್ಯಕುಮಾರ್ ಯಾದವ್ ದೇಶೀಯ ಕ್ರಿಕೆಟ್‌ನಲಲ್ಇ ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ಸ್ಥಿರ ಪ್ರದರ್ಶನವನ್ನು ನೀಡಿಕೊಂಡು ಬಂದಿದ್ದಾರೆ. ಐಪಿಎಲ್‌ನಲ್ಲಿಯೂ ಸೂರ್ಯಕುಮಾರ್ ಅದ್ಭುತ ಪ್ರದರ್ಶನವನ್ನು ನೀಡಿದ್ದು ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ.

2021ರಲ್ಲಿ 3ನೇ ಶೂನ್ಯ ಸಂಪಾದಿಸಿದ ಕೊಹ್ಲಿ, ಬೇಡದ ಪಟ್ಟಿಯಲ್ಲಿ ಗಂಗೂಲಿಯನ್ನು ಹಿಂದಿಕ್ಕಿದ ವಿರಾಟ್2021ರಲ್ಲಿ 3ನೇ ಶೂನ್ಯ ಸಂಪಾದಿಸಿದ ಕೊಹ್ಲಿ, ಬೇಡದ ಪಟ್ಟಿಯಲ್ಲಿ ಗಂಗೂಲಿಯನ್ನು ಹಿಂದಿಕ್ಕಿದ ವಿರಾಟ್

ಕಳೆದ ಐಪಿಎಲ್ ಟೂರ್ನಿಯಲ್ಲಿ ಸೂರ್ಯಕುಮಾರ್ ಯಾದವ್ ಪ್ರದರ್ಶನ ಶ್ರೇಷ್ಠ ಮಟ್ಟದಲ್ಲಿತ್ತು. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಸೂರ್ಯಕುಮಾರ್ ಯಾದವ್ ಅವರನ್ನು ಆಯ್ಕೆ ಮಾಡಬಹುದು ಎಂಬ ನಿರೀಕ್ಷೆಯಿತ್ತು. ಆದರೆ ಅಲ್ಲೂ ಸೂರ್ಯಕುಮಾರ್‌ಗೆ ನಿರಾಸೆ ಕಾದಿತ್ತು. ಆದರೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಸೂರ್ಯಕುಮಾರ್ ಯದವ್ ಅವಕಾಶವನ್ನು ಪಡೆದುಕೊಂಡಿದ್ದಾರೆ. ಸರಣಿಯಲ್ಲಿ ನಾಲ್ಕು ಪಂದ್ಯಗಳು ಉಳಿದಿದ್ದು ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವ ಮೂಲಕ ಟೀಮ್ ಇಂಡಿಯಾ ಜರ್ಸಿ ತೊಡಲು ಕಾತುರರಾಗಿದ್ದಾರೆ

Story first published: Saturday, March 13, 2021, 14:46 [IST]
Other articles published on Mar 13, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X