For Quick Alerts
ALLOW NOTIFICATIONS  
For Daily Alerts
 

ಆಂಗ್ಲರೆದುರಿನ 2ನೇ ಏಕದಿನಕ್ಕೆ ಸೂರ್ಯಕುಮಾರ್ ಪಾದಾರ್ಪಣೆ ಸಾಧ್ಯತೆ

India vs England: Suryakumar Yadav may debut as India eye series victory against England

ಪೂಣೆ: ಮುಂಬೈ ಇಂಡಿಯನ್ಸ್ ಕ್ರಿಕೆಟ್ ತಂಡದ ಪ್ರತಿಭಾವಂತ ಬ್ಯಾಟ್ಸ್‌ಮನ್‌, ಇತ್ತೀಚೆಗಷ್ಟೇ ಟೀಮ್ ಇಂಡಿಯಾ ಪರ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯ ಆಡಿದ್ದ ಸೂರ್ಯಕುಮಾರ್ ಯಾದವ್ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡುವ ನಿರೀಕ್ಷೆಯಿದೆ.

ದೇಶಿ ಕ್ರಿಕೆಟ್‌ನಲ್ಲಿ ಮುಂಬೈ ಪರ, ಐಪಿಎಲ್‌ನಲ್ಲಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಪರ ಆಡುವ ಸೂರ್ಯಕುಮಾರ್ ಯಾದವ್ ಇಂಗ್ಲೆಂಡ್ ವಿರುದ್ಧದ 4ನೇ ಟಿ20ಐ ಪಂದ್ಯದಲ್ಲಿ ಚೊಚ್ಚಲ ಅಂತಾರಾಷ್ಟ್ರೀಯ ಇನ್ನಿಂಗ್ಸ್‌ ಆಡಿದ್ದರು. 31 ಎಸೆತಗಳಿಗೆ 57 ರನ್ ಬಾರಿಸಿ ಗಮನ ಸೆಳೆದಿದ್ದರು.

ಆಡಿದ ಚೊಚ್ಚಲ ಅಂತಾರಾಷ್ಟ್ರೀಯ ಇನ್ನಿಂಗ್ಸ್‌ನಲ್ಲೇ ಯಾದವ್ ಅವರ 360 ಡಿಗ್ರೀ ಬ್ಯಾಟಿಂಗ್ ಶೈಲಿ ಎಲ್ಲರ ಮೆಚ್ಚುಗೆ ಪಾತ್ರವಾಗಿತ್ತು. ತಂಡದಲ್ಲಿ ಈಗಾಗಲೇ ಶ್ರೇಯಸ್ ಅಯ್ಯರ್ ಕೂಡ ಗಾಯಗೊಂಡು ಹೊರ ಬಿದ್ದಿರುವುದರಿಂದ ಅಯ್ಯರ್ ಜಾಗಕ್ಕೆ ಯಾದವ್ ಬರುವ ಸಾಧ್ಯತೆಯಿದೆ.

ಏಕದಿನ ಸರಣಿಯಲ್ಲಿ ಮುಂಬೈ ಇಂಡಿಯನ್ಸ್ ಮತ್ತೊಬ್ಬ ಆಲ್ ರೌಂಡರ್ ಕೃನಾಲ್ ಪಾಂಡ್ಯ ಕೂಡ ಹಿಂದಿನ ಏಕದಿನದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಅರ್ಧ ಶತಕ ಬಾರಿಸಿ ತಂಡದ ಗೆಲುವಿಗೂ ಕಾರಣರಾಗಿದ್ದರು. ಭಾರತ-ಇಂಗ್ಲೆಂಡ್ ದ್ವಿತೀಯ ಏಕದಿನ ಪಂದ್ಯ ಮಾರ್ಚ್ 26ರಂದು ಪೂಣೆಯಲ್ಲಿ 1.30 pmಗೆ ಆರಂಭಗೊಳ್ಳಲಿದೆ.

Story first published: Thursday, March 25, 2021, 16:15 [IST]
Other articles published on Mar 25, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+