IND vs ENG T20: ಹೇಗಿರಲಿದೆ ಪ್ಲೇಯಿಂಗ್ ಇಲೆವೆನ್? ಟಿ20 ವಿಶ್ವಕಪ್‌ಗೆ ಈಗಿನಿಂದಲೇ ತಯಾರಿ
ಭಾರತ ಆಸ್ಟ್ರೇಲಿಯಾ ಪ್ರವಾಸದಲ್ಲಿ ನಿರಾಸೆಯನ್ನು ಅನುಭವಿಸಿದೆ. ಈಗ ತವರಿನತ್ತ ಮುಖ ಮಾಡಿದೆ. ಇನ್ನೇನು ಕೆಲವೇ ದಿನಗಳಲ್ಲಿ ಇಂಗ್ಲೆಂಡ್ ವಿರುದ್ಧ ಟಿ20 ಹಾಗೂ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಬೇಕಿದೆ. ಬಿಸಿಸಿಐ ಆಯ್ಕೆ ಸಮಿತಿ ಹಲವು ಮಾನದಂಡಗಳನ್ನು ಬಳಸಿ ಟಿ20ಗೆ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ. ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಹೇಗಿರಲಿದೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಎಂಬ ಬಗ್ಗೆ ವರದಿ ಇಲ್ಲಿದೆ.
2026ರಲ್ಲಿ ಟಿ20 ವಿಶ್ವಕಪ್ ಆಯೋಜಿಸಲಾಗುತ್ತಿದೆ. ಹೀಗಾಗಿ 2025 ಎಲ್ಲ ತಂಡಗಳಿಗೂ ತಮ್ಮ ಬಲಿಷ್ಠ ತಂಡವನ್ನು ಕಟ್ಟುವುದು ಸವಾಲಾಗಿದೆ. ಭಾರತ ಸಹ ಈ ವರ್ಷದ ಅಂತ್ಯದಲ್ಲಿ ತನ್ನ ಸಧೃಡ ತಂಡವನ್ನು ಕಟ್ಟಿ ಮುಂದಿನ ವರ್ಷದ ವಿಶ್ವಕಪ್‌ಗೆ ತಯಾರಿ ನಡೆಸಲಿದೆ. ಈ ನಿಟ್ಟಿನಲ್ಲಿ ಇಂಗ್ಲೆಂಡ್ ವಿರುದ್ಧ ಸರಣಿ ಮಹತ್ವ ಪಡೆದಿದೆ. ಹೀಗಾಗಿ ತಂಡದಲ್ಲಿ ಯಾರಿಗೆಲ್ಲಾ ಅವಕಾಶ ಸಿಗಬಹುದು ಎಂಬ ಇಂಟ್ರಸ್ಟಿಂಗ್ ಮಾಹಿತಿ ಇಲ್ಲಿದೆ.

ಓಪನರ್ ಯಾರು?
ಭಾರತ ತಂಡದ ಪರ ಅಮೋಘ ಪ್ರದರ್ಶನ ನೀಡಿರುವ ಅಭಿಷೇಕ್ ಶರ್ಮಾ ದೇಶೀಯ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ್ದಾರೆ. ಇವರಿಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ. ಇನ್ನು ಸಂಜು ಸ್ಯಾಮ್ಸನ್ ತಂಡದಲ್ಲಿ ಸ್ಥಾನ ಪಡೆಯುವುದು ಪಕ್ಕಾ. ದೇಶೀಯ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿರುವ ರುತುರಾಜ್ ಗಾಯಕ್ವಾಡ್ ಅವಕಾಶ ಪಡೆಯಹುದು. ಇವರು ತಂಡಕ್ಕೆ ಎಂಟ್ರಿ ನೀಡಿದರೆ, ಸಂಜು ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಬಹುದು.
ಮಿಡ್ಲ್ ಆರ್ಡರ್‌ನಲ್ಲಿ ಯಾರು?
ಮಿಡ್ಲ್ ಆರ್ಡರ್‌ನಲ್ಲಿ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಕಾಣಿಸಿಕೊಳ್ಳಲಿದ್ದಾರೆ. ಇವರೊಂದಿಗೆ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಸ್ಥಿರ ಪ್ರದರ್ಶನ ನೀಡಿದ ತಿಲಕ್ ವರ್ಮಾ ಸ್ಥಾನ ಉಳಿಸಿಕೊಳ್ಳಬಹುದು. ಅಲ್ಲದೆ ಇವರು ದೇಶೀಯ ಟೂರ್ನಿಯಲ್ಲೂ ಸ್ಥಿರ ಪ್ರದರ್ಶನ ನೀಡಿದ್ದಾರೆ.
ಆಲ್‌ರೌಂಡರ್ಸ್
ಟೀಮ್ ಇಂಡಿಯಾದ ಪರ ಕಣಕ್ಕೆ ಇಳಿಯುವ ಆಲ್‌ರೌಂಡರ್‌ಗಳಲ್ಲಿ ಹಾರ್ದಿಕ್ ಪಾಂಡ್ಯ, ಆಸ್ಟ್ರೇಲಿಯಾ ಪ್ರವಾಸದಲ್ಲಿ ಎಲ್ಲರ ಗಮನ ಸೆಳೆದ ನಿತೀಶ್ ಕುಮಾರ್ ರೆಡ್ಡಿ ಸೇರಿದ್ದಾರೆ. ಅಕ್ಷರ್ ಪಟೇಲ್ ತಮ್ಮ ಜವಾಬ್ದಾರಿಯೊಂದಿಗೆ ಫಿನಿಷರ್ ಪಾತ್ರದಲ್ಲೂ ಕಾಣಿಸಿಕೊಳ್ಳಬಹುದು.
ಫಿನಿಷರ್ ಯಾರು?
ಈ ಬಾರಿ ಫಿನಿಷರ್ ಪಾತ್ರವನ್ನು ಯಾರು ವಹಿಸಿಕೊಳ್ಳಲಿದ್ದಾರೆ ಎಂಬ ಬಗ್ಗೆ ಹಲವು ಪ್ರಶ್ನೆಗಳು ಮೂಡಿವೆ. ಈ ಸ್ಥಾನಕ್ಕೆ ಫಿಟ್ ಆಗುವ ಮೂರು ಆಟಗಾರರು ಇದ್ದಾರೆ. ರಿಂಕು ಸಿಂಗ್, ರಿಯಾನ್ ಪರಾಗ್, ಶಿವಂ ದುಬೆ, ಈ ಆಟಗಾರರು ಸ್ಥಿರ ಪ್ರದರ್ಶನ ನೀಡಿ ತಂಡದ ಗೆಲುವಿನಲ್ಲಿ ಮಿಂಚಬೇಕಿದೆ.

ನುರಿತ ಸ್ಪಿನ್ ಬೌಲರ್‌ಗಾಳಾಗಿ ರವಿ ಬಿಷ್ಣೋಯಿ, ವರುಣ್ ಚಕ್ರವರ್ತಿ ಸ್ಥಾನ ಪಡೆಯಲಿದ್ದಾರೆ. ಇವರು ಈ ಹಿಂದಿನ ಸರಣಿಗಳಲ್ಲಿ ಸ್ಥಿರ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದ್ದರು. ಇನ್ನು ವೇಗದ ಬೌಲರ್‌ಗಳ ಪಟ್ಟಿಯಲ್ಲಿ ಅರ್ಷದೀಪ್ ಸಿಂಗ್ ಅವರಿಗೆ ಸ್ಥಾನ ಫಿಕ್ಸ್. ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೆಸ್ಟ್ ಆಡುವ ಅವಕಾಶವನ್ನು ಪಡೆದ ಹರ್ಷಿತ್ ರಾಣ ಸಹ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೂರನೇ ವೇಗದ ಬೌಲರ್ ಆಗಿ ಯಾರು ಆಯ್ಕೆ ಆಗುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications