ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್ t20I: ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಇಂಗ್ಲೆಂಡ್

India vs England, t20 series, 1st match Ahmedabad Live score

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲ ಪಂದ್ಯವನ್ನು ಭಾರತ ಸೋತಿದೆ. ಟಿ20 ಮಾದರಿಯಲ್ಲಿ ನಂಬರ್ 1 ತಂಡವಾಗಿರುವ ಇಂಗ್ಲೆಂಡ್ ಟೀಮ್ ಇಂಡಿಯಾಗೆ 8 ವಿಕೆಟ್‌ಗಳ ಅಂತರದ ಸೋಲಿನ ರುಚಿಯನ್ನು ತೋರಿಸಿದೆ.

ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿದ ಇಂಗ್ಲೆಂಡ್ ಭಾರತ ತಂಡವನ್ನು ಕೇವಲ 124 ರನ್‌ಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಯಿತು. ಇಂಗ್ಲೆಂಡ್ ತಂಡದ ಬೌಲರ್‌ಗಳ ಶಿಸ್ತಿನ ದಾಳಿಗೆ ಭಾರತೀಯ ಬ್ಯಾಟಿಂಗ್ ಪಡೆ ಸಾಮರ್ಥ್ಯಕ್ಕೆ ತಕ್ಕ ಆಟ ಪ್ರದರ್ಶಿಸುವಲ್ಲಿ ವಿಫಲವಾಯಿತು. ಶ್ರೇಯಸ್ ಐಯ್ಯರ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿ 67 ರನ್‌ಗಳ ಕೊಡುಗೆಯನ್ನು ನೀಡಿದರು.

ಭಾರತ ನೀಡಿದ 125 ರನ್‌ಗಳ ಗುರಿಯನ್ನು ಇಂಗ್ಲೆಂಡ್ ಸುಲಭವಾಗಿ ಬೆನ್ನಟ್ಟಿ ಗೆಲುವು ಸಾಧಿಸಿದೆ. 15.3 ಎಸೆತಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು ಈ ಭರ್ಜರಿಯಾಗಿ ಗೆಲುವು ಸಾಧಿಸಿದೆ.

ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ಬೌಲರ್‌ಗಳ ದಾಳಿಗೆ ಭಾರತದ ಬಲಿಷ್ಠ ಬ್ಯಾಟಿಂಗ್ ಪಡೆ ನೀರಸ ಪ್ರದರ್ಶನವನ್ನು ನೀಡಿದೆ. ಶ್ರೇಯಸ್ ಐಯ್ಯರ್ ಏಕಾಂಗಿ ಹೋರಾಟದ ಫಲವಾಗಿ ಭಾರತ 124/7 ರನ್‌ಗಳನ್ನು ಗಳಿಸಲು ಶಕ್ತವಾಯಿತು.

ಭಾರತ ತಂಡದ ಆಡುವ ಬಳಗ ಕುತೂಹಲಕಾರಿಯಾಗಿದೆ. ಆರಂಭಿಕರಾಗಿ ಕೆಎಲ್ ರಾಹುಲ್‌ ಮತ್ತು ಶಿಖರ್ ಧವನ್ ಆಡುವ ಬಳಗದಲ್ಲಿದ್ದಾರೆ. ರೋಹಿತ್ ಶರ್ಮಾಗೆ ಅಚ್ಚರಿ ಎಂಬಂತೆ ವಿಶ್ರಾಂತಿಯನ್ನು ನೀಡಲಾಗಿದೆ. ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಐಯ್ಯರ್ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ರಿಷಭ್ ಪಂತ್ ಮತ್ತೆ ಟಿ20ಯ ಆಡುವ ಬಳಗದಲ್ಲಿ ಸ್ಥಾನವನ್ನು ಸಂಪಾದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಟೀಮ್ ಇಂಡಿಯಾ ಆಡುವ ಬಳಗ
ಕೆ.ಎಲ್. ರಾಹುಲ್, ಶಿಖರ್ ಧವನ್, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಆಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಶಾರ್ದುಲ್ ಠಾಕೂರ್, ಯುಜ್ವೇಂದ್ರ ಚಾಹಲ್

ಇಂಗ್ಲೆಂಡ್ ಆಡುವ ಬಳಗ
ಜೇಸನ್ ರಾಯ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಡೇವಿಡ್ ಮಲನ್, ಜಾನಿ ಬೈರ್‌ಸ್ಟೋವ್, ಇಯೊನ್ ಮೋರ್ಗಾನ್ (ನಾಯಕ), ಬೆನ್ ಸ್ಟೋಕ್ಸ್, ಸ್ಯಾಮ್ ಕುರ್ರನ್, ಜೋಫ್ರಾ ಆರ್ಚರ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್, ಮಾರ್ಕ್ ವುಡ್

Story first published: Friday, March 12, 2021, 22:50 [IST]
Other articles published on Mar 12, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X