ಭಾರತ vs ಇಂಗ್ಲೆಂಡ್: ಟಿ20 ಸರಣಿಯ ಮೊದಲ ಪಂದ್ಯ: ಪ್ರಿವ್ಯೂ, ಸ್ಕ್ವಾಡ್‌ಗಳು ಹಾಗೂ ಪಂದ್ಯದ ಸಮಯ

ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಟಿ20 ಸರಣಿಯ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೊದಲ ಪಂದ್ಯ ಗುರುವಾರ ಆರಂಭವಾಗಲಿದ್ದು ಭಾರತ ಹಾಗೂ ಇಂಗ್ಲೆಂಡ್ ಎರಡು ತಂಡಗಳು ಕೂಡ ಸಜ್ಜಾಗಿದೆ. ಈ ಎರಡು ತಂಡಗಳು ಕೂಡ ಟಿ20 ಮಾದರಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದು ಸರಣಿ ತೀವ್ರ ಪೈಪೋಟಿಯಿಂದ ಕೂಡಿರುವುದರಲ್ಲಿ ಅನುಮಾನವಿಲ್ಲ.
ಈ ಟಿ20 ಸರಣಿಯ ಮೊದಲ ಪಂದ್ಯಕ್ಕೆ ಭಾರತ ತಂಡ ಟೆಸ್ಟ್ ಸರಣಿಯಲ್ಲಿ ಭಾಗಿಯಾಗದ ಆಟಗಾರರ ಪ್ರತ್ಯೇಕ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ತಂಡಕ್ಕೆ ಮರಳಿದ್ದು ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಮೊದಲ ಪಂದ್ಯದಲ್ಲಿ ಯುವ ಆಟಗಾರರನ್ನು ಒಳಗೊಂಡ ಭಾರತದ ಪಡೆ ಕಣಕ್ಕಿಳಿಯುತ್ತಿದೆ.

ಇತ್ತಂಡಗಳ ಪೈಪೋಟಿಯ ಸರಣಿ
ಈ ಸರಣಿಯಲ್ಲಿ ಎರಡು ತಂಡಗಳು ಕೂಡ ಸಾಕಷ್ಟು ಪೈಪೋಟಿಯಿಂದ ಕಣಕ್ಕಿಳಿಯುವುದರಲ್ಲಿ ಅನುಮಾನವಿಲ್ಲ. ಎರಡು ತಂಡಗಳು ಕೂಡ ಈ ಮಾದರಿಯಲ್ಲಿ ತನ್ನದೇ ಆದ ಸಾಮರ್ಥ್ಯಗಳನ್ನು ಹೊಂದಿದೆ. ಇನ್ನು ಚುಟಕು ಮಾದರಿಯಲ್ಲಿ ಇಂಗ್ಲೆಂಡ್ 2017ರ ಬಳಿಕ ತವರಿನಲ್ಲಿ ನಡೆದ ಟಿ20 ಸರಣಿಯಲ್ಲಿ ಕೇವಲ ಒಂದು ಸರಣಿಯನ್ನು ಮಾತ್ರವೇ ಸೋತಿದೆ. ಕುತೂಹಲಕಾರಿ ಸಂಗತಿಯೆಂದರೆ ಅದಿ 2018ರಲ್ಲಿ ಭಾರತದ ವಿರುದ್ಧ. ಇನ್ನು ಭಾರತದ ವಿಚಾರಕ್ಕೆ ಬಂದರೆ 2021ರ ನಂತರ ನಡೆದ ಟಿ20 ಪಂದ್ಯಗಳ ಪೈಕಿ ಭಾರತ 19-5 ಅಂತರದ ಗೆಲುವು ಸೋಲಿನ ದಾಖಲೆ ಹೊಂದಿದೆ. ಇನ್ನು ಭಾರತ ಹಾಗೂ ಇಂಗ್ಲೆಂಡ್ ನಡುವಿನ ದ್ವಿಪಕ್ಷೀಯ ಟಿ20 ಪಂದ್ಯಗಳ ಮುಖಾಮುಖಿಯಲ್ಲಿ 8-8 ಅಂತರದಿಂದ ಎರಡು ತಂಡಗಳು ಕೂಡ ಸಮಬಲ ಸಾಧಿಸಿರುವುದು ಮತ್ತೊಂದು ಕುತೂಹಲಕಾರಿ ಅಂಶವಾಗಿದೆ. ಹೀಗಾಗಿ ಈ ಸರಣಿ ಕೂಡ ಸಾಕಷ್ಟು ಪೈಪೋಟಿಯಿಂದ ಕೂಡಿರುವುದರಲ್ಲಿ ಅನುಮಾನವಿಲ್ಲ.

ಪಂದ್ಯದ ಸಮಯ ಹಾಗೂ ನೇರಪ್ರಸಾರ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಜುಲೈ 7 ಗುರುವಾರದಂದು ನಡೆಯಲಿದ್ದು ಸೌಥಾಂಪ್ಟನ್‌ನಲ್ಲಿ ಆಯೋಜನೆಯಾಗಲಿದೆ. ಈ ಪಂದ್ಯ ಭಾರತೀಯ ಕಾಲಮಾನ ರಾತ್ರಿ 10:30ಕ್ಕೆ ಆರಂಭವಾಗಲಿದೆ. ಸೋನಿ ನೆಟ್‌ವರ್ಕ್‌ನಲ್ಲಿ ಪಂದ್ಯದ ನೇರಪ್ರಸಾರ ಲಭ್ಯವಾಗಲಿದ್ದು ಸೋನಿ ಲಿವ್‌ನಲ್ಲಿ ಲೈವ್ ಸ್ಟ್ರೀಮಿಂಗ್ ನಡೆಯಲಿದೆ.

ಮೊದಲ ಪಂದ್ಯಕ್ಕೆ ಭಾರತದ ಸ್ಕ್ವಾಡ್
ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ಋತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಾಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶ್‌ದೀಪ್ ಸಿಂಗ್, ಉಮ್ರಾನ್ ಮಲಿಕ್

ಇಂಗ್ಲೆಂಡ್ ಸ್ಕ್ವಾಡ್
ಜೋಸ್ ಬಟ್ಲರ್(ನಾಯಕ), ಮೊಯಿನ್ ಅಲಿ, ಹ್ಯಾರಿ ಬ್ರೂಕ್, ಸ್ಯಾಮ್ ಕರನ್, ರಿಚರ್ಡ್ ಗ್ಲೀಸನ್, ಕ್ರಿಸ್ ಜೋರ್ಡನ್, ಲಿಯಾಮ್ ಲಿವಿಂಗ್‌ಸ್ಟನ್, ಡೇವಿಡ್ ಮಲನ್, ಟೈಮಲ್ ಮಿಲ್ಸ್, ಮ್ಯಾಥ್ಯೂ ಪಾರ್ಕಿನ್ಸನ್, ಜೇಸನ್ ರಾಯ್, ಫಿಲ್ ಸಾಲ್ಟ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications