India vs England: ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಯಾವಾಗ? ನೇರ ಪ್ರಸಾರ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
ಭಾರತೀಯ ಕ್ರಿಕೆಟ್ ತಂಡಕ್ಕೆ ಹೊಸ ಯುಗ ಆರಂಭವಾಗಿದೆ. ಬಹುನಿರೀಕ್ಷಿತ ಐರ್ಲೆಂಡ್ ಹಾಗೂ ಇಂಗ್ಲೆಂಡ್ ಪ್ರವಾಸ ಆರಂಭವಾಗಿದೆ. ಈಗಾಗಲೇ ಟೀಮ್ ಇಂಡಿಯಾ ಐರ್ಲೆಂಡ್ ಪ್ರವಾಸದಲ್ಲಿ ನಡೆದ ಎರಡು ಪಂದ್ಯಗಳ ಟಿ20 ಸರಣಿಯಲ್ಲಿ ಸೋಲು ಕಂಡಿದೆ. ಆಡಿದ ಎರಡೂ ಪಂದ್ಯಗಳಲ್ಲಿ ಸೋಲು ಕಂಡಿರುವ ಭಾರತ ನಿರಾಸೆ ಅನುಭವಿಸಿದೆ. ಈಗ ಶ್ರೇಯಸ್ ಅಯ್ಯರ್ ಮುಂದಾಳತ್ವದ ಭಾರತ ತಂಡ ಇಂಗ್ಲೆಂಡ್ ವಿರುದ್ಧದ ಸರಣಿಗೆ ಸನ್ನದ್ಧವಾಗುತ್ತಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20ಐ ಸರಣಿಯು ಜುಲೈ 1, ಬುಧವಾರರಿಂದ ಪ್ರಾರಂಭವಾಗಲಿದ್ದು, ಜುಲೈ 11ರ ವರೆಗೆ ನಡೆಯಲಿದೆ. ಮೊದಲ ಪಂದ್ಯ ಜುಲೈ 1ರಂದು ಚೆಸ್ಟರ್-ಲೆ-ಸ್ಟ್ರೀಟ್‌ನಲ್ಲಿ ನಡೆಯಲಿದೆ. ಎರಡನೇ ಟಿ20 ಪಂದ್ಯ ಮ್ಯಾಂಚೆಸ್ಟರ್‌ನಲ್ಲಿ, ಮೂರನೇ ಪಂದ್ಯ ಜುಲೈ 7 ನಾಟಿಂಗ್‌ಹ್ಯಾಮ್‌ನಲ್ಲಿ, ನಾಲ್ಕನೇ ಪಂದ್ಯ ಜುಲೈ 9 ಬ್ರಿಸ್ಟಲ್, ಐದನೇ ಮತ್ತು ಅಂತಿಮ ಪಂದ್ಯ ಜುಲೈ 11 ರಂದು ಸೌತಾಂಪ್ಟನ್‌ನಲ್ಲಿ ನಡೆಯಲಿದೆ.

ಈ ಸರಣಿ ಮುಗಿದ ಬಳಿಕ ಟೀಮ್ ಇಂಡಿಯಾ ಏಕದಿನ ಸರಣಿಯಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಮೊದಲ ಪಂದ್ಯ ಜುಲೈ 14 ಬರ್ಮಿಂಗ್‌ಹ್ಯಾಮ್, ಎರಡನೇ ಏಕದಿನ ಪಂದ್ಯ ಜುಲೈ 16 ಕಾರ್ಡಿಫ್‌ನಲ್ಲಿ, ಮೂರನೇ ಮತ್ತು ಅಂತಿಮ ಪಂದ್ಯ ಜುಲೈ 19 ಐತಿಹಾಸಿಕ ಲಾರ್ಡ್ ಅಂಗಳದಲ್ಲಿ ನಡೆಯಲಿದೆ. ಏಕದಿನ ಸರಣಿಯ ಮೊದಲ ಹಾಗೂ ಮೂರನೇ ಪಂದ್ಯ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ. ಎರಡನೇ ಏಕದಿನ ಪಂದ್ಯ 5.30ಕ್ಕೆ ಆರಂಭವಾಗಲಿದೆ.
ಶ್ರೇಯಸ್ ಅಯ್ಯರ್‌ಗೆ ದೊಡ್ಡ ಸವಾಲು
ಐರ್ಲೆಂಡ್ ಹಾಗೂ ಇಂಗ್ಲೆಂಡ್ ಪ್ರವಾಸಕ್ಕೆ ಪ್ರಕಟಿತ ಭಾರತ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದಾರೆ. ಟಿ20 ವಿಶ್ವಕಪ್ ಚಾಂಪಿಯನ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರನ್ನು ಬಿಸಿಸಿಐ ಆಯ್ಕೆ ಸಮಿತಿ ತಂಡದಿಂದ ಹೊರಗಿಟ್ಟು, ಹೊಸ ನಾಯಕನಿಗೆ ಪಟ್ಟ ಕಟ್ಟಿದೆ. ನೂತನ ನಾಯಕ ಶ್ರೇಯಸ್ ಅಯ್ಯರ್ ತಮ್ಮ ಮೊದಲ ಪ್ರಯತ್ನದಲ್ಲಿ ಹೀನಾಯ ಸೋಲು ಕಂಡಿದೆ. ಟೀಮ್ ಇಂಡಿಯಾ ತನ್ನ ಮುಂದಿನ ಸವಾಲಿಗೆ ಈಗ ಸಿದ್ಧತೆ ನಡೆಸಿದೆ. ಟೀಮ್ ಇಂಡಿಯಾ ಬುಧವಾರದಿಂದ ಇಂಗ್ಲೆಂಡ್ ಪ್ರವಾಸದಲ್ಲಿ ನಿರೀಕ್ಷಿತ ಸರಣಿಯಲ್ಲಿ ಕಣಕ್ಕೆ ಇಳಿಯಲಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಣ ಟಿ20 ಸರಣಿಯನ್ನು ನೇರಪ್ರಸಾರ ನೋಡುವುದು ಎಲ್ಲಿ?
ಇಂಗ್ಲೆಂಡ್ ಪ್ರವಾಸದಲ್ಲಿ ನಡೆಯಲಿರುವ ಟಿ20 ಪಂದ್ಯಗಳ ಸರಣಿಯನ್ನು ಸೋನಿ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು. ಅಲ್ಲದೆ ಆನ್‌ಲೈನ್‌ನಲ್ಲಿ ಸೋನಿ ಲಿವ್‌ನಲ್ಲಿ ನೋಡಬಹುದು.
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ; ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ಸೂರ್ಯಂಶ್ ಶೇಡ್ಗೆ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅರ್ಶದೀಪ್ ಸಿಂಗ್, ಶಿವಂ ದುಬೆ, ಪ್ರಿನ್ಸ್ ಯಾದವ್ ಮತ್ತು ವೈಭವ್ ಸೂರ್ಯವಂಶಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications