ಭಾರತ vs ಇಂಗ್ಲೆಂಡ್: ಲಾರ್ಡ್ಸ್ ಟೆಸ್ಟ್‌ಗೆ ವೇಗಿ ಶಾರ್ದೂಲ್ ಠಾಕೂರ್ ಅನುಮಾನ

Shardul Thakur ಎರಡನೇ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ | oneindia kannada

ಲಂಡನ್, ಆಗಸ್ಟ್ 11: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯಕ್ಕೆ ಲಾರ್ಡ್ಸ್ ಅಂಗಳ ಸಜ್ಜಾಗುತ್ತಿದೆ. ಆಟಗಾರರು ಕೂಡ ಈ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಹಿನ್ನೆಲೆಯಲ್ಲಿ ಕಠಿಣ ಅಭ್ಯಾಸವನ್ನು ನಡೆಸುತ್ತಿದ್ದಾರೆ. ಆದರೆ ಈ ಪಂದ್ಯದಕ್ಕೆ ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಶಾರ್ದೂಲ್ ಠಾಕೂರ್ ಅನುಮಾನ ಎನ್ನಲಾಗುತ್ತಿದೆ. ಮಂಡಿರಜ್ಜು ಗಾಯಕ್ಕೊಳಗಾಗಿರುವ ಶಾರ್ದೂಲ್ ಠಾಕೂರ್ ಎರಡನೇ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆಯಿದೆ.

ಶಾರ್ದೂಲ್ ಠಾಕೂರ್ ಇಂಗ್ಲೆಂಡ್ ವಿರುದ್ಧ ನಾಟಿಂಗ್‌ಹ್ಯಾಮ್‌ನಲ್ಲಿ ನಡೆದ ಟೆಸ್ಟ್ ಪಂದ್ಯಕ್ಕೆ ಅಚ್ಚರಿಯ ಆಯ್ಕೆಯಾಗಿದ್ದರು. ಶಾರ್ದೂಲ್ ಆಯ್ಕೆಯನ್ನು ಬಹುತೇಕರು ನಿರೀಕ್ಷಿಸಿರಲಿಲ್ಲ. ಆಡುವ ಅವಕಾಶವನ್ನು ಪಡೆದ ಠಾಕೂರ್ ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಮಿಂಚಿದ್ದಾರೆ. 41 ರನ್‌ಗಳನ್ನು ನೀಡಿ ಮೊದಲ ಇನ್ನಿಂಗ್ಸ್‌ನಲ್ಲಿ 2 ವಿಕೆಟ್ ಪಡೆದರೆ ದ್ವಿತೀಯ ಇನ್ನಿಂಗ್ಸ್‌ನಲ್ಲಿ 37 ರನ್‌ಗಳನ್ನು ನೀಡಿ ಎರಡು ವಿಕೆಟ್ ಪಡೆದುಕೊಂಡರು. ಈ ಮೂಲಕ ಅನುಭವಿಗಳಾದ ಜಸ್ಪ್ರೀತ್ ಬೂಮ್ರಾ ಹಾಘೂ ಮೊಹಮ್ಮದ್ ಶಮಿಗೆ ಅದ್ಭುತವಾದ ಬೆಂಬಲವನ್ನು ನೀಡುವಲ್ಲಿ ಯಶಸ್ವಿಯಾದರು.

29ರ ಹರೆಯದ ಶಾರ್ದೂಲ್ ಠಾಕೂರ್ ಟೆಸ್ಟ್‌ನಲ್ಲಿ ಅದ್ಭುತವಾದ ಆರಂಭವನ್ನು ಪಡೆದುಕೊಂಡಿದ್ದಾರೆ. 11ರ ಸರಾಸರಿಯಲ್ಲಿ 11 ವಿಕೆಟ್ ಪಡೆದು ಯಶಸ್ಸು ಕಂಡಿದ್ದಾರೆ. ಕಳೆದ ಆಸ್ಟ್ರೇಲಿಯಾ ವಿರುದ್ಧಧ ಸರಣಿಯಲ್ಲಿ ಶಾರ್ದೂಲ್ ಠಾಕೂರ್ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ನೀಡಿದ ಪ್ರದರ್ಶನ ಭಾರತೀಯ ಕ್ರಿಕೆಟ್ ಪ್ರೇಮಿಗಳಲ್ಲಿ ಸುದೀರ್ಘ ಕಾಲ ನೆನಪಿನಲ್ಲುಳಿಯುವಂತೆ ಮಾಡಿದೆ.

ಎನ್‌ಸಿಎ ಮುಖ್ಯಸ್ಥರ ಸ್ಥಾನಕ್ಕೆ ಅರ್ಜಿ ಕರೆದ ಬಿಸಿಸಿಐ, ದ್ರಾವಿಡ್ ಮರು ಅರ್ಜಿ ಸಲ್ಲಿಕೆ ನಿರೀಕ್ಷೆಎನ್‌ಸಿಎ ಮುಖ್ಯಸ್ಥರ ಸ್ಥಾನಕ್ಕೆ ಅರ್ಜಿ ಕರೆದ ಬಿಸಿಸಿಐ, ದ್ರಾವಿಡ್ ಮರು ಅರ್ಜಿ ಸಲ್ಲಿಕೆ ನಿರೀಕ್ಷೆ

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಎರಡನೇ ಟೆಸ್ಟ್‌ಗೆ ಶಾರ್ದೂಲ್ ಠಾಕೂರ್ ಆಡಲು ಅಸಮರ್ಥರಾದರೆ ಆಸ್ಥಾನ ಭಾರತದ ಅನುಭವಿ ಸ್ಪಿನ್ನರ್ ಆರ್ ಆಶ್ವಿನ್ ಪಾಲಾಗುವ ಸಾಧ್ಯತೆ ಹೆಚ್ಚಿದೆ. ಮೊದಲ ಟೆಸ್ಟ್‌ನಲ್ಲಿ ಭಾರತದ ಮ್ಯಾನೇಜ್‌ಮೆಂಟ್ ಸ್ಪಿನ್ನರ್ ಆರ್ ಅಶ್ವಿನ್ ಅವರಿಗೆ ವಿಶ್ರಾಂತಿಯನ್ನು ನೀಡಿ ರವೀಂದ್ರ ಜಡೇಜಾ ಅವರನ್ನು ಸ್ಪಿನ್ನರ್ ಆಗಿ ಕಣಕ್ಕಿಳಿಸಲು ನಿರ್ಧರಿಸಿತ್ತು. ಆರ್ ಅಶ್ವಿನ್ ಅವರನ್ನು ಹೊರಗಿಡುವ ಮ್ಯಾನೇಜ್‌ಮೆಂಟ್‌ನ ಈ ನಿರ್ಧಾರ ಸಾಕಷ್ಟು ಅಚ್ಚರಿಯನ್ನು ಮೂಡಿಸಿತ್ತು.

ಈ ಮಧ್ಯೆ ಇಂಗ್ಲೆಂಡ್ ತಂಡಕ್ಕೂ ಗಾಯದ ಆತಂಕ ಕಾಡುತ್ತಿದೆ. ಮಂಗಳವಾರ ಅಭ್ಯಾಸದ ಸಂದರ್ಭದಲ್ಲಿ ಇಂಗ್ಲೆಂಡ್ ತಂಡದ ಅನುಭವಿ ವೇಗಿ ಸ್ಟುವರ್ಟ್ ಬ್ರಾಡ್ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ದ್ವಿತೀಯ ಪಂದ್ಯಕ್ಕೆ ಸಜ್ಜಾಗುತ್ತಿದ್ದ ವೇಲೆ ಗಾಯಗೊಂಡಿರುವುದು ಇಂಗ್ಲೆಂಡ್‌ಗೂ ಹಿನ್ನೆಡೆಯಾಗಿದೆ. ಮೂಲಗಳ ಮಾಹಿತಿಯ ಪ್ರಕಾರ ಮಂಗಳವಾರ ಮಧ್ಯಾಹ್ನದ ಬಳಿಕ ಸ್ಟುವರ್ಟ್ ಬ್ರಾಡ್ ತಂಡದ ಜೊತೆಗೆ ಅಭ್ಯಾಸವನ್ನು ನಡೆಸಲಿ ಸಾಧ್ಯವಾಗಿರಲಿಲ್ಲ. ಬುಧವಾರ ಸ್ಕ್ಯಾನಿಂಗ್‌ಗೆ ಅವರು ಒಳಗಾಗಲಿದ್ದು ಈ ಮೂಲಕ ಗಾಯದ ತೀವ್ರತೆಯನ್ನು ಕಂಡುಕೊಳ್ಳಲಾಗುತ್ತದೆ.

35ರ ಹರೆಯದ ಸ್ಟುವರ್ಟ್ ಬ್ರಾಡ್ ಲಾರ್ಡ್ಸ್ ಅಂಗಳದಲ್ಲಿ ಅತ್ಯುತ್ತಮ ಬೌಲಿಂಗ್ ದಾಖಲೆಯನ್ನು ಹೊಂದಿದ್ದಾರೆ. ಐತಿಹಾಸಿಕ ಅಂಗಳದಲ್ಲಿ ಬ್ರಾಡ್ 24 ಟೆಸ್ಟ್ ಪಂದ್ಯಗಳನ್ನು ಆಡಿದ್ದು 95 ವಿಕೆಟ್‌ಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅವರ ಸರಾಸರಿ 28ಕ್ಕಿಂತ ಕೆಳಗಿದ್ದು ಎರಡು ಬಾರಿ ಐದು ವಿಕೆಟ್‌ಗಳ ಗೊಂಚಲು ಪಡೆದಿದ್ದಾರೆ. ಲಾರ್ಡ್ಸ್ ಅಂಗಳದಲಲ್ಇ ಆಡಲು ಸ್ಟುವರ್ಟ್ ಬ್ರಾಡ್ ಸಮರ್ಥರಾದರೆ ಅದು ಟೆಸ್ಟ್ ಕ್ರಿಕೆಟ್‌ನಲ್ಲಿ ಬ್ತಾಡ್ ಅವರ 150ನೇ ಪಂದ್ಯವಾಗಿರಲಿದೆ. ಈವರೆಗೆ ಬ್ರಾಡ್ ಸುದೀರ್ಘ ಮಾದರಿಯ ಕ್ರಿಕೆಟ್‌ನಲ್ಲಿ 524 ವಿಕೆಟ್ ಕಬಳಿಸಿದ್ದು 27.84ರ ಸರಾಸರಿಯನ್ನು ಹೊಂದಿದ್ದಾರೆ.

ಐತಿಹಾಸಿಕ ಹಿನ್ನೆಲೆಯುಳ್ಳ ಲಾರ್ಡ್ಸ್ ಅಂಗಳ ವೇಗಿಗಳ ಪಾಲಿಗೆ ಹೆಚ್ಚಿನ ನೆರವು ನೀಡುತ್ತದೆ. ಪಂದ್ಯ ಮುಂದುವರಿದಂತೆಯೇ ಬ್ಯಾಟ್ಸ್‌ಮನ್‌ಗಳ ಪಾಲಿಗೆ ಪಿಚ್ ಮತ್ತಷ್ಟು ಕಠಿಣವಾಗುತ್ತಾ ಸಾಗುತ್ತದೆ. ಮೊದಲ ಇನ್ನಿಂಗ್ಸ್‌ನ ಸರಾಸರಿ ಈ ಅಂಗಳದಲ್ಲಿ 312 ರನ್ ಇದ್ದು ಮೊದಲ ಇನ್ನಿಂಗ್ಸ್ ಬ್ಯಾಟ್ಸ್‌ಮನ್‌ಗಳ ಪಾಲಿಗೆ ಸುಲಭವಾಗಿರಲಿದೆ. ಆದರೆ ಬಳಿಕ ಬ್ಯಾಟ್ಸ್‌ಮನ್‌ಗಳಿಗೆ ಸಾಕಷ್ಟು ಸವಾಲಾಗಲಿದೆ ಎಂಬುದು ಈ ಹಿಂದಿನ ದಾಖಲೆಗಳಿಂದ ತಿಳಿಯುತ್ತದೆ. ಹೀಗಾಗಿ ಟಾಸ್ ಗೆದ್ದ ತಂಡ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಳ್ಳುವ ಸಾಧ್ಯತೆ ಹೆಚ್ಚಿದ್ದು ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆಯನ್ನು ಪಡೆಯುವ ಗುರಿಯನ್ನು ಹೊಂದಿರಲಿದೆ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Wednesday, August 11, 2021, 8:46 [IST]
Other articles published on Aug 11, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X