ಭಾರತ vs ಇಂಗ್ಲೆಂಡ್: ಭಾರತ ತಂಡದ ಆಡುವ ಬಳಗದಲ್ಲಿ ಎರಡು ಬದಲಾವಣೆ

ಭಾರತ ಹಾಗೂ ಇಂಗ್ಲೆಂಡ್ ನಡುವಿನ ನಾಲ್ಕನೇ ಟಿ20 ಪಂದ್ಯಕ್ಕೆ ಎರಡು ಪಂದ್ಯಗಳು ಸಜ್ಜಾಗಿದೆ. ಈ ಪಂದ್ಯದಲ್ಲಿ ಭಾರತ ತಂಡದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿಕೊಳ್ಳಲಾಗಿದೆ. ಆದರೆ ಕಳೆದ ಮೂರು ಪಂದ್ಯಗಳಲ್ಲಿ ವಿಫಲರಾಗಿದ್ದ ಕೆಎಲ್ ರಾಹುಲ್ ಈ ಪಂದ್ಯದಲ್ಲಿ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಚೊಚ್ಚಲ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಅರ್ಧ ಶತಕ ಸಿಡಿಸಿ ಮಿಂಚಿದ್ದ ಇಶಾನ್ ಕಿಶನ್ ಕಳೆದ ಪಂದ್ಯದಲ್ಲಿ ಶೀಘ್ರವಾಗಿ ವಿಕೆಟ್ ಒಪ್ಪಿಸಿದ್ದರು. ನಾಲ್ಕನೇ ಪಂದ್ಯದಲ್ಲಿ ಇಶಾನ್ ಕಿಶನ್ ತಂಡದಿಂದ ಹೊರಗುಳಿದಿದ್ದಾರೆ. ದ್ವಿತೀಯ ಪಂದ್ಯದಲ್ಲಿ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದರೂ ಬ್ಯಾಟಿಂಗ್ ಮಾಡುವ ಅವಕಾಶ ದೊರೆಯದ ಸೂರ್ಯಕುಮಾರ್ ಯಾದವ್ ನಾಲ್ಕನೇ ಟಿ20 ಪಂದ್ಯದಲ್ಲಿ ಇಶಾನ್ ಕಿಶನ್ ಸ್ಥಾನದಲ್ಲಿ ಆಡಲಿದ್ದಾರೆ.
ಇನ್ನು ಬೌಲಿಂಗ್ ವಿಭಾಗದಲ್ಲಿ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಮಿಂಚಿವಲ್ಲಿ ವಿಫಲವಾಗಿರುವ ಯುಜುವೇಂದ್ರ ಚಾಹಲ್ ಆಡುವ ಬಳಗದಿಂದ ಹೊರಗುಳಿದಿದ್ದಾರೆ. ಯುವ ಸ್ಪಿನ್ನರ್ ರಾಹುಲ್ ಚಾಹರ್ ಈ ಪಂದ್ಯದಲ್ಲಿ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆಯಲು ಸಫಲರಾಗಿದ್ದಾರೆ.
ಇನ್ನು ಇಂಗ್ಲೆಂಡ್ ತಂಡ ತನ್ನ ಆಡುವ ಬಳಗದಲ್ಲಿ ಯಾವುದೇ ಬದಲಾವಣೆಯನ್ನು ಮಾಡಿಕೊಂಡಿಲ್ಲ. ಮೂರನೇ ಪಂದ್ಯದಲ್ಲಿ ಆಡಲಿಳಿದ ಪಂದ್ಯವನ್ನೇ ನಾಯಕ ಇಯಾನ್ ಮಾರ್ಗನ್ ಉಳಿಸಿಕೊಂಡಿದ್ದಾರೆ.
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ (ನಾಯಕ), ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್, ರಾಹುಲ್ ಚಾಹರ್.
ಇಂಗ್ಲೆಂಡ್ ಪ್ಲೇಯಿಂಗ್ XI: ಜೇಸನ್ ರಾಯ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಡೇವಿಡ್ ಮಲನ್, ಜಾನಿ ಬೈರ್‌ಸ್ಟೋವ್, ಇಯಾನ್ ಮಾರ್ಗನ್ (ನಾಯಕ), ಬೆನ್ ಸ್ಟೋಕ್ಸ್, ಸ್ಯಾಮ್ ಕರ್ರನ್, ಕ್ರಿಸ್ ಜೋರ್ಡನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications