ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ಮಹತ್ವದ ಟೆಸ್ಟ್ ಪಂದ್ಯದಲ್ಲಿ ಆಡಲಿದ್ದಾರಾ ರೋಹಿತ್? ಇಂದು ಅಂತಿಮ ನಿರ್ಧಾರ

India vs England Test: Final decision about skipper Rohit Sharma availability taken by today evening

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಕಳೆದ ವರ್ಷದ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಜುಲೈ 1ರಂದು ಮರುನಿಗದಿಯಾಗಿದೆ. ಈ ಪಂದ್ಯದಲ್ಲಿ ಆಡಲು ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಸಜ್ಜಾಗುತ್ತಿದೆ. ಆದರೆ ಕೊರೊನಾವೈರಸ್‌ನ ಕಾರಣದಿಂದಾಗಿ ಭಾರತದ ನಾಯಕ ರೋಹಿತ್ ಶರ್ಮಾ ಲಭ್ಯತೆ ಬಗ್ಗೆ ಇನ್ನೂ ಸ್ಪಷ್ಟತೆಗಳು ದೊರೆತಿಲ್ಲ.

ಈ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತ ಅಬ್ಯಾಸ ಪಂದ್ಯದಲ್ಲಿ ಭಾಗಿಯಾಗಿತ್ತು. ಈ ಪಂದ್ಯದ ಸಂದರ್ಭದಲ್ಲಿ ರೋಹಿತ್ ಶರ್ಮಾಗೆ ಕೊರೊನಾವೈರಸ್ ದೃಢಪಟ್ಟಿತ್ತು. ಹೀಗಾಗಿ ರೋಹಿತ್ ಶರ್ಮಾ ಹೋಟೆಲ್‌ನಲ್ಲಿ ಪ್ರತ್ಯೇಕವಾಗಿದ್ದಾರೆ. ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಆಡಲಿದ್ದಾರಾ ಎಂಬ ಬಗ್ಗೆ ಬುಧವಾರವೇ ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ನಿರ್ಧಾರವನ್ನು ತೆಗೆದುಕೊಳ್ಳಲಿದೆ.

Ind vs Eng 5ನೇ ಟೆಸ್ಟ್: ಭಾರತದ ಆಡುವ 11ರ ಬಳಗದಲ್ಲಿ ಈ ಇಬ್ಬರು ವೇಗಿಗಳಿರಬೇಕು; ಅಜಿತ್ ಅಗರ್ಕರ್Ind vs Eng 5ನೇ ಟೆಸ್ಟ್: ಭಾರತದ ಆಡುವ 11ರ ಬಳಗದಲ್ಲಿ ಈ ಇಬ್ಬರು ವೇಗಿಗಳಿರಬೇಕು; ಅಜಿತ್ ಅಗರ್ಕರ್

ಮತ್ತೊಮ್ಮೆ ಕೋವಿಡ್ ಪರೀಕ್ಷೆಗೆ ಒಳಗಾಗಲಿದ್ದಾರೆ ರೋಹಿತ್

ಮತ್ತೊಮ್ಮೆ ಕೋವಿಡ್ ಪರೀಕ್ಷೆಗೆ ಒಳಗಾಗಲಿದ್ದಾರೆ ರೋಹಿತ್

ರೋಹಿತ್ ಶರ್ಮಾ ಕೊರೊನಾವೈರಸ್‌ಗೆ ತುತ್ತಾಗಿರುವ ಕಾರಣ ಸದ್ಯ ಪ್ರತ್ಯೇಕವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಸಿಸಿಐನ ವೈದ್ಯಕೀಯ ಸಿಬ್ಬಂದಿಗಳು ರೋಹಿತ್ ಶರ್ಮಾ ಆರೋಗ್ಯವನ್ನು ಗಮನಿಸುತ್ತಿದ್ದಾರೆ. ಇನ್ನು ಬುಧವಾರ ರೋಹಿತ್ ಮತ್ತೊಂದು ಬಾರಿ ಕೋವಿಡ್ ಪರೀಕ್ಷೆಗೆ ಒಳಗಾಗಲಿದ್ದಾರೆ. ಈ ಸಂದರ್ಭದಲ್ಲಿ ನೆಗೆಟಿವ್ ವರದಿ ಬಂದಲ್ಲಿ ಶುಕ್ರವಾರ ನಡೆಯಲಿರುವ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನು ಮುನ್ನಡೆಸುವ ಸಾಧ್ಯತೆಯಿದೆ.

ಚರ್ಚೆ ನಡೆಸಲಿದ್ದಾರೆ ದ್ರಾವಿಡ್ ಹಾಗೂ ಚೇತನ್ ಶರ್ಮಾ

ಚರ್ಚೆ ನಡೆಸಲಿದ್ದಾರೆ ದ್ರಾವಿಡ್ ಹಾಗೂ ಚೇತನ್ ಶರ್ಮಾ

ಇನ್ನು ಬಿಸಿಸಿಐನ ಆಯ್ಕೆ ಸಮಿತಿಯ ಮುಖ್ಯಸ್ಥ ಚೇತನ್ ಶರ್ಮಾ ಬುಧವಾರ ಬರ್ಮಿಂಗ್‌ಹ್ಯಾಮ್‌ಗೆ ತೆರಳಿದ್ದಾರೆ. ಭಾರತೀಯ ತಂಡದ ಕೋಚ್ ರಾಹುಲ್ ದ್ರಾವಿಡ್ ಹಾಗೂ ಚೇತನ್ ಶರ್ಮಾ ಚರ್ಚೆಯನ್ನು ನಡೆಸಲಿದ್ದು ರೋಹಿತ್ ಶರ್ಮಾ ವಿಚಾರವಾಗಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.

ನಾಯಕನಾಗಲಿದ್ದಾರಾ ಜಸ್ಪ್ರೀತ್ ಬೂಮ್ರಾ

ನಾಯಕನಾಗಲಿದ್ದಾರಾ ಜಸ್ಪ್ರೀತ್ ಬೂಮ್ರಾ

ಇನ್ನು ರೋಹಿತ್ ಶರ್ಮಾ ಅಂತಿಮ ಟೆಸ್ಟ್ ಪಂದ್ಯಕ್ಕೆ ಅಲಭ್ಯವಾಗುವುದು ಅನಿವಾರ್ಯವಾದರೆ ಭಾರತ ತಂಡವನ್ನು ಮುನ್ನಡೆಸುವವರು ಯಾರು ಎಂಬುದು ಪ್ರಶ್ನೆಯಾಗಿದೆ. ಯಾಕೆಂದರೆ ಇಂಗ್ಲೆಂಡ್ ವಿರುದ್ಧದ ಈ ಟೆಸ್ಟ್ ಪಂದ್ಯಕ್ಕೆ ಭಾರತ ಅಧಿಕೃತವಾಗಿ ಉಪನಾಯಕನನ್ನು ಹೆಸರಿಸಿಲ್ಲ. ಆದರೆ ಸದ್ಯದ ಮಾಹಿತಿಗಳ ಪ್ರಕಾರ ಜಸ್ಪ್ರಿತ್ ಬೂಮ್ರಾಗೆ ನಾಯಕತ್ವದ ಜವಾಬ್ಧಾರಿ ದೊರೆಯಲಿದೆ ಎನ್ನಲಾಗಿದೆ. ಇಂದು ಸಂಜೆಯ ವೇಲೆಗೆ ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಹೊರಬೀಳುವ ಸಾಧ್ಯತೆಯಿದೆ.

ಯುಜುವೇಂದ್ರ ಚಹಾಲ್ ಗೆ ಚಳಿ ಆಗಿದ್ದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಈಗ ಫುಲ್ ಟ್ರೋಲ್ | Oneindia Kannada
ಭಾರತ ಟೆಸ್ಟ್ ಸ್ಕ್ವಾಡ್

ಭಾರತ ಟೆಸ್ಟ್ ಸ್ಕ್ವಾಡ್

ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಪ್ರಸಿದ್ಧ್ ಕೃಷ್ಣ

Story first published: Wednesday, June 29, 2022, 14:32 [IST]
Other articles published on Jun 29, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X