ಭಾರತ vs ಇಂಗ್ಲೆಂಡ್ 5ನೇ ಟೆಸ್ಟ್: ಕೆಎಲ್ ರಾಹುಲ್ ಇಲ್ಲದೆ ಯುಕೆಗೆ ಪ್ರಯಾಣ ಬೆಳೆಸಿದ ಭಾರತೀಯ ಟೆಸ್ಟ್ ತಂಡ

ಕಳೆದ ವರ್ಷ ಅಪೂರ್ಣವಾಗಿ ಉಳಿದಿದ್ದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅಂತಿಮ ಪಂದ್ಯವನ್ನಾಡಲು ಭಾರತ ತಂಡ ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಿದೆ. ಜುಲೈ 1ರಿಂದ 5ರವರೆಗೆ ಈ ಅಂತಿಮ ಟೆಸ್ಟ್ ಪಂದ್ಯ ನಡೆಯಲಿದೆ. ಕಳೆದ ವರ್ಷ ನಡೆದ ಟೆಸ್ಟ್ ಸರಣಿಯ ಸಂದರ್ಭದಲ್ಲಿ ಭಾರತೀಯ ತಂಡದಲ್ಲಿ ಕೊರೊನಾವೈರಸ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಂತಿಮ ಪಂದ್ಯವನ್ನು ಮುಂದೂಡಲಾಗಿತ್ತು.

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಐದನೇ ಪಂದ್ಯವನ್ನು ಮೊದಲು ಮ್ಯಾಂಚೆಸ್ಟರ್‌ನ ಓಲ್ಡ್ ಟ್ರೆಫಾರ್ಡ್‌ನಲ್ಲಿ ಆಯೋಜಿಸಲು ನಿರ್ಧರಿಸಲಾಗಿತ್ತು. ಆದರೆ ಅದನ್ನು ನಂತರ ಬರ್ಮಿಂಗ್‌ಹ್ಯಾಮ್‌ಗೆ ಸ್ಥಳಾಂತರಿಸಲಾಗಿದೆ. ಸರಣಿಯಲ್ಲಿ ಮುನ್ನಡೆ ಸಾಧಿಸಿರುವ ಭಾರತ ಈ ಪಂದ್ಯವನ್ನು ಗೆಲ್ಲುವ ಆತ್ಮವಿಶ್ವಾಸದಲ್ಲಿದೆ.

ಐದು ಪಂದ್ಯಗಳ ಟಿ20 ಸರಣಿಯಲ್ಲಿ ನಾಲ್ಕು ಪಂದ್ಯಗಳು ಈಗಾಗಲೇ ಮುಕ್ತಾಯವಾಗಿದೆ. ಇದರಲ್ಲಿ ಭಾರತ 2-1 ಅಂತರದಿಂದ ಮುನ್ನಡೆ ಸಾಧಿಸಿಕೊಂಡಿದೆ. ಅಂತಿಮ ಪಂದ್ಯದಲ್ಲಿ ಭಾರತ ಡ್ರಾ ಸಾಧಿಸಿದರೂ ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಳ್ಳಲಿದೆ. ಆದರೆ ಇಂಗ್ಲೆಂಡ್ ತಂಡ ಗೆದ್ದರೆ ಸರಣಿ ಸಮಬಲಗೊಳಿಸುವಲ್ಲಿ ಯಶಸ್ವಿಯಾಗಲಿದೆ.

ಆತ್ಮವಿಶ್ವಾಸದಲ್ಲಿದೆ ಇಂಗ್ಲೆಂಡ್ ಪಡೆ

ಆತ್ಮವಿಶ್ವಾಸದಲ್ಲಿದೆ ಇಂಗ್ಲೆಂಡ್ ಪಡೆ

ಆದರೆ ಪ್ರಸ್ತುತ ಇಂಗ್ಲೆಂಡ್ ತಂಡ ಅದ್ಭುತ ಪ್ರದರ್ಶನ ನೀಡುತ್ತಿದ್ದು ಸಾಕಷ್ಟು ಆತ್ಮವಿಶ್ವಾಸದಿಂದ ಇದೆ. ಅದರಲ್ಲೂ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ಟೆಸ್ಟ್ ಸರಣಿಯ ನಡೆಯುತ್ತಿದ್ದು ಮೂರು ಪಂದ್ಯಗಳ ಈ ಸರಣಿಯಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸಿ ಈಗಾಗಲೇ ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ. ಹೀಗಾಗಿ ತಂಡದ ಆಟಗಾರರು ಕೂಡ ಸಾಕಷ್ಟು ಆತ್ಮವಿಶ್ವಾಸದಲ್ಲಿದ್ದಾರೆ.

ಭಾರತ ತಂಡದಲ್ಲಿ ಭಾರೀ ಬದಲಾವಣೆ

ಭಾರತ ತಂಡದಲ್ಲಿ ಭಾರೀ ಬದಲಾವಣೆ

ಇನ್ನು ಭಾರತ ತಂಡಕ್ಕೆ ಈ ಸರಣಿ ಸಾಕಷ್ಟು ದೊಡ್ಡ ಮಟ್ಟದ ಸವಾಲಿನಿಂದ ಕೂಡಿರಲಿದೆ ಎಂಬುದರಲ್ಲಿ ಅನುಮಾನವಿಲ್ಲ. 2021ರ ಸರಣಿಯ ಬಳಿಕ ಭಾರತೀಯ ಕ್ರಿಕೆಟ್ ತಂಡದಲ್ಲಿ ಸಾಕಷ್ಟು ಬದಲಾವಣೆಗಳಾಗಿದೆ. ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವದಿಂದ ಕೆಳಗಿಳಿದಿದ್ದರೆ ಕೋಚ್ ರವಿ ಶಾಸ್ತ್ರಿ ಕೂಡ ತಮ್ಮ ಅವಧಿಯನ್ನು ಮುಗಿಸಿದ್ದಾರೆ. ಈ ಸರಣಿಯಲ್ಲಿ ಭಾರತೀಯ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು ರಾಹುಲ್ ದ್ರಾವಿಡ್ ಕೋಚ್ ಆಗಿ ತಂಡಕ್ಕೆ ಮಾರ್ಗದರ್ಶನ ನೀಡಲಿದ್ದಾರೆ. ಇನ್ನು ಅನುಭವಿ ಆಟಗಾರ ಅಜಿಂಕ್ಯಾ ರಹಾನೆ ಭಾರತ ತಂಡದಲ್ಲಿ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಇನ್ನು ಕಳೆದ ಶ್ರೀಲಂಕಾ ವಿರುದ್ಧಧ ಸರಣಿಯಲ್ಲಿ ಚೇತೇಶ್ವರ್ ಪೂಜಾರ ಕೂಡ ಸ್ಥಾನವನ್ನು ಕಳೆದುಕೊಂಡಿದ್ದರು. ಆದರೆ ಕೌಂಟಿ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಪೂಜಾರ ಮತ್ತೆ ಸ್ಥಾನವನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಂಡದೊಂದಿಗೆ ತೆರಳದ ಕೆಎಲ್ ರಾಹುಲ್

ತಂಡದೊಂದಿಗೆ ತೆರಳದ ಕೆಎಲ್ ರಾಹುಲ್

ಇನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಆರಂಭಕ್ಕೂ ಮುನ್ನ ಗಾಯಕ್ಕೆ ತುತ್ತಾಗಿರುವ ಕೆಎಲ್ ರಾಹುಲ್ ಟಿ20 ಸರಣಿಯಿಂದ ಹೊರಗುಳಿದಿದ್ದರು. ಇದೀಗ ಇಂಗ್ಲೆಂಡ್‌ಗೆ ತೆರಳಿರುವ ಭಾರತ ತಂಡದ ಜೊತೆಗೂ ಅವರು ಪ್ರಯಾಣವನ್ನು ಬೆಳೆಸಿಲ್ಲ. ಈ ಬಗ್ಗೆ ಬಿಸಿಸಿಐ ಅಧಿಕಾರಿಯೊಬ್ಬರು ಮಾಧಯಮಗಳಿಗೆ ಮಾಹಿತಿ ನೀಡಿದ್ದು "ಕೆಎಲ್ ರಾಹುಲ್ ಗಾಯದಿಂದ ಸಂಪೂರ್ಣವಾಗಿ ಚೇತರಿಕೆ ಕಂಡಿಲ್ಲ. ರಾಹುಲ್ ತಂಡದ ಜೊತೆಗೆ ಪ್ರಯಾಣವನ್ನು ಬೆಳೆಸುತ್ತಿಲ್ಲ. ಚೇತರಿಕೆಗಾಗಿ ಮತ್ತಷ್ಟು ಸಮಯವನ್ನು ತೆಗೆದುಕೊಳ್ಳಲಿದ್ದು ಈ ವಾರಾಂತ್ಯದಲ್ಲಿ ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಲಿದ್ದಾರೆ. ಆದರೆ ಅವರು ಈ ಸಂದರ್ಭದಲ್ಲಿ ಚೇತರಿಸಿಕೊಳ್ಳುವ ಸಾಧ್ಯತೆ ಬಹಳ ಕಡಿಮೆಯಿದೆ" ಎಂದಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್‌ಗೆ ಭಾರತ ತಂಡ

ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್‌ಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್(ಗಾಯಗೊಂಡಿದ್ದು ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಬೇಕಿದೆ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ , ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಪ್ರಸಿದ್ಧ್ ಕೃಷ್ಣ

For Quick Alerts
ALLOW NOTIFICATIONS
For Daily Alerts
Story first published: Thursday, June 16, 2022, 13:33 [IST]
Other articles published on Jun 16, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X