
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಚಾಲನೆ ದೊರೆತಿದೆ. ಚೆನ್ನೈ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಎರಡು ತಂಡಗಳು ಕೂಡ ಗೆಲುವಿಗಾಗಿ ತೀವ್ರ ಪೈಪೋಟಿಯನ್ನು ನಡೆಲಿದೆ.
ಇಂಗ್ಲೆಂಡ್ ತಂಡ ಎರಡು ವಿಕೆಟ್‌ಗಳನ್ನು ಕಳೆದುಕೊಂಡಿದ್ದು ಬಳಿಕ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದೆ. ಆರಂಬಿಕ ಆಟಗಾರ ಡಾಮಿನಿಕ್ ಸಿಬ್ಲಿ ಹಾಗೂ ನಾಯಕ ಜೋ ರೂಟ್ ಇಂಗ್ಲೆಂಡ್ ಪಡೆಗೆ ಅತ್ಯುತ್ತಮ ಜೊತೆಯಾಟ ನೀಡುತ್ತಿದ್ದು ತಂಡದ ಮೊತ್ತವನ್ನು ಹಿಗ್ಗಿಸುತ್ತಿದ್ದಾರೆ.
ಅಕ್ಷರ್ ಪಟೇಲ್ ಗಾಯಗೊಂಡು ತಂಡದಿಂದ ಹೊರಬಿದ್ದಿದ್ದಾರೆ. ಹೀಗಾಗಿ ತಂಡದೊಳಗೆ ಸೇರಿಕೊಂಡಿರುವ ಸ್ಪಿನ್ನರ್ ನದೀಮ್ ಆಡುವ ಬಳಗದಲ್ಲಿ ಅವಕಾಶವನ್ನು ಪಡೆದುಕೊಂಡಿದ್ದರೆ. ವಾಶಿಂಗ್ಟನ್ ಸುಂದರ್ ಹಾಗೂ ಆರ್ ಅಶ್ವಿನ್ ಕೂಡ ತಂಡದಲ್ಲಿದ್ದಾರೆ.
ಇನ್ನು ಇಂಗ್ಲೆಂಡ್ ತಂಡದಲ್ಲಿ ಒಲ್ಲಿ ಪೋಪ್ ಆಡುವ ಬಳಗದಲ್ಲಿ ಸುದೀರ್ಘ ಸಮಯದ ಬಳಿಕ ಕಾಣಿಸಿಕೊಂಡಿದ್ದಾರೆ. ಜೋಫ್ರಾ ಆರ್ಚರ್, ಜಾಕ್ ಲೀಚ್, ಡಾಮಿನಿಕ್ಸ್ ಬೆಸ್, ಜೇಮ್ಸ್ ಆಂಡರ್ಸನ್ ಬೌಲಿಂಗ್ ವಿಭಾಗದಲ್ಲಿ ದಾಳಿಗಿಳಿದಿದ್ದಾರೆ.
Live ಸ್ಕೋರ್ ಪಟ್ಟಿ ಹೀಗಿದೆ:
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಶಹಬಾಜ್ ನದೀಮ್, ಜಸ್ಪ್ರೀತ್ ಬೂಮ್ರಾ
ಇಂಗ್ಲೆಂಡ್ ಆಡುವ ಬಳಗ: ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಡೇನಿಯಲ್ ಲಾರೆನ್ಸ್, ಜೋ ರೂಟ್(ನಾಯಕ), ಬೆನ್ ಸ್ಟೋಕ್ಸ್, ಆಲ್ಲಿ ಪೋಪ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಡೊಮಿನಿಕ್ ಬೆಸ್, ಜೋಫ್ರಾ ಆರ್ಚರ್, ಜ್ಯಾಕ್ ಲೀಚ್, ಜೇಮ್ಸ್ ಆಂಡರ್ಸನ್