IND vs ENG 3rd T20: ಟಾಸ್ ಗೆದ್ದ ಸೂರ್ಯ ಬೌಲಿಂಗ್ ಆಯ್ಕೆ; ಕೊನೆಗೂ ಶಮಿಗೆ ಸ್ಥಾನ
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟಿ20 ರಾಜ್‌ಕೋಟ್‌ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಈ ಪಂದ್ಯ ಇಂಗ್ಲೆಂಡ್ ತಂಡದ ಪಾಲಿಗೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಸದ್ಯ ಭಾರತ 5 ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಮೊದಲಿಗೆ ಕೋಲ್ಕತ್ತಾದಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ತಂಡವನ್ನು ಸೋಲಿಸಿದರೆ. ನಂತರ, ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಗೆಲುವು ಸಾಧಿಸಿದೆ. ಈಗ ರಾಜ್‌ಕೋಟ್‌ನಲ್ಲಿ ಆಂಗ್ಲರ ಪಡೆಗೆ ಮಾಡು ಇಲ್ಲವೇ ಮಡಿ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಈ ಬಾರಿಯೂ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಪರಿಣಾಮ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡಲಿದೆ. ರಾಜ್ ಕೋಟ್‌ನಲ್ಲಿ ಇಂಗ್ಲೆಂಡ್ ಬ್ಯಾಟರ್‌ಗಳು ಅಬ್ಬರಿಸುವ ಮೂಲಕ ಬಿಗ್ ಸ್ಕೋರ್ ಕಲೆ ಹಾಕುವ ನಿರೀಕ್ಷೆಯಿದೆ.

ರಾಜ್ ಕೋಟ್‌ನಲ್ಲೂ ಟೀಮ್ ಇಂಡಿಯಾ ಮೇಲುಗೈ ಸಾಧಿಸಿದೆ. ಈ ಮೈದಾನದಲ್ಲಿ ಭಾರತ ತಂಡ ಇದುವರೆಗೆ ಒಟ್ಟು 5 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಟೀಮ್ ಇಂಡಿಯಾ 4 ಬಾರಿ ಗೆದ್ದಿದೆ. ಈ ಪಂದ್ಯದಲ್ಲಿ ಭಾರತ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆಗಳನ್ನು ಕಾಣಬಹುದು. ಸ್ಟಾರ್ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಮೊಹಮ್ಮದ್ ಶಮಿ ಟೀಮ್ ಇಂಡಿಯಾಗೆ ಮರಳಿದ್ದಾರೆ. ಕಳೆದೆರಡು ಟಿ20 ಪಂದ್ಯಗಳಲ್ಲಿ ಶಮಿಗೆ ಆಡಲು ಅವಕಾಶ ಸಿಕ್ಕಿರಲಿಲ್ಲ.
ಧ್ರುವ್ ಜುರೆಲ್ ಮತ್ತು ವಾಷಿಂಗ್ಟನ್ ಸುಂದರ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲಾಗಿದೆ. ಈ ಪಂದ್ಯದಲ್ಲಿ ಭಾರತ ತಂಡ 4 ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿದೆ. ಇಂಗ್ಲೆಂಡ್ ತನ್ನ ಆಡುವ ಹನ್ನೊಂದರ ಬಳಗದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ.
ಉಭಯ ತಂಡಗಳ ಪ್ಲೇಯಿಂಗ್-11
ಭಾರತ: ಸಂಜು ಸ್ಯಾಮ್ಸನ್(ವಿಕೆಟ್‌ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್(ನಾಯಕ), ಧ್ರುವ ಜುರೆಲ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ.
ಇಂಗ್ಲೆಂಡ್: ಫಿಲಿಪ್ ಸಾಲ್ಟ್, ಬೆನ್ ಡಕೆಟ್, ಜೋಸ್ ಬಟ್ಲರ್ (ನಾಯಕ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜೇಮೀ ಸ್ಮಿತ್ (ವಿಕೆಟ್ ಕೀಪರ್), ಜೇಮೀ ಓವರ್ಟನ್, ಬ್ರೈಡನ್ ಕಾರ್ಸ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications