For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್ ಹೆಡಿಂಗ್ಲೆ ಟೆಸ್ಟ್‌ಗೆ ಮಳೆ ಅಡ್ಡಿಯುಂಟುಮಾಡುತ್ತಾ?

India vs England Third Test: Day 1 Headingley weather report

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯ ಬುಧವಾರದಂದು ( ಆಗಸ್ಟ್ 25 ) ಲೀಡ್ಸ್ ನಗರದ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ 5 ಪಂದ್ಯಗಳ ಟೆಸ್ಟ್ ಸರಣಿಯ ಪೈಕಿ ಈಗಾಗಲೇ ಮೊದಲೆರಡು ಪಂದ್ಯಗಳು ಮುಗಿದಿದ್ದು ಇಂಗ್ಲೆಂಡ್ ವಿರುದ್ಧ ಭಾರತ ತಂಡ 1-0 ಅಂತರದಿಂದ ಮುನ್ನಡೆಯನ್ನು ಸಾಧಿಸಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವೆ ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಮಳೆ ಅಡ್ಡಿಯುಂಟು ಮಾಡಿದ ಕಾರಣ ಯಾವುದೇ ಫಲಿತಾಂಶವಿಲ್ಲದೆ ಪಂದ್ಯ ನೀರಸ ಡ್ರಾನಲ್ಲಿ ಅಂತ್ಯಗೊಂಡಿತ್ತು. ತದನಂತರ ಕ್ರಿಕೆಟ್ ಕಾಶಿ ಎಂದೇ ಖ್ಯಾತಿಯನ್ನು ಹೊಂದಿರುವ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಭಾರತ ತಂಡ 151 ರನ್‌ಗಳಿಂದ ಸದೆ ಬಡಿಯುವುದರ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುನ್ನಡೆಯನ್ನು ಸಾಧಿಸಿತು.

ವಿರಾಟ್ ಅಂದ್ರೆ ಮಲಾನ್ ಗೆ ತುಂಬಾ ಇಷ್ಟ! | Oneindia Kannada

ಹೀಗೆ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳು ಮುಗಿದಿದ್ದು, ಮೂರನೇ ಟೆಸ್ಟ್ ಪಂದ್ಯ ಬುಧವಾರದಂದು (ಆಗಸ್ಟ್ 25 ) ಲೀಡ್ಸ್ ನಗರದ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನವನ್ನು ನೀಡುವುದರ ಮೂಲಕ ಇಂಗ್ಲೆಂಡ್ ತಂಡವನ್ನು ಸೋಲಿಸಿ ಸರಣಿಯನ್ನು ತನ್ನ ಕೈವಶ ಮಾಡಿಕೊಳ್ಳುವತ್ತ ಟೀಮ್ ಇಂಡಿಯಾ ಕಣ್ಣಿಟ್ಟಿದೆ. ಅತ್ತ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲೆರಡು ಪಂದ್ಯಗಳು ಮುಗಿದಿದ್ದರೂ ಸಹ ಇದುವರೆಗೂ ಗೆಲುವಿನ ಖಾತೆಯನ್ನೇ ತೆರೆಯದ ಇಂಗ್ಲೆಂಡ್ ತಂಡ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ಟೀಮ್ ಇಂಡಿಯಾ ವಿರುದ್ಧ ಜಯ ಸಾಧಿಸುವುದರ ಮೂಲಕ ಗೆಲುವಿನ ಖಾತೆ ತೆರೆದು ಸರಣಿಯಲ್ಲಿ ಸಮಬಲ ಸಾಧಿಸುವತ್ತ ಚಿತ್ತ ನೆಟ್ಟಿದೆ.

ಹೀಗಾಗಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ. ಈ ಎಲ್ಲಾ ಕುತೂಹಲ ಮತ್ತು ಕಾತುರತೆ ಗಳ ನಡುವೆ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯಕ್ಕೆ ವರುಣನ ಅಡ್ಡಿ ಮಾಡಲಿದ್ದಾನಾ ಎಂಬ ಆತಂಕ ಕೂಡ ಮನೆ ಮಾಡಿದೆ. ಹೌದು, ಇಂಗ್ಲೆಂಡ್ ನೆಲದಲ್ಲಿ ನಡೆಯುವ ಟೆಸ್ಟ್ ಪಂದ್ಯಗಳೆಂದರೆ ಹಾಗೆ ಪಂದ್ಯ ಆರಂಭಕ್ಕೂ ಮುನ್ನ ಕ್ರಿಕೆಟ್ ವೀಕ್ಷಕರಲ್ಲಿ ಮತ್ತು ಕ್ರಿಕೆಟ್ ಆಟಗಾರರಲ್ಲಿ ಮಳೆಯ ವಿಚಾರವಾಗಿ ಆತಂಕವನ್ನು ಉಂಟು ಮಾಡುವುದು ಸಹಜ. ಈ ಹಿಂದೆ ಇದೇ ಇಂಗ್ಲೆಂಡ್‌ನಲ್ಲಿಯೇ ನಡೆದಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿಯೂ ಸಹ ವರುಣ ಆಟವನ್ನಾಡಿದ್ದ, ನಂತರ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲನೇ ಪಂದ್ಯದಲ್ಲಿಯೂ ಸಹ ವರುಣ ಅವಾಂತರವನ್ನು ಸೃಷ್ಟಿಸಿ ಪಂದ್ಯ ಡ್ರಾ ಆಗುವಂತೆ ಮಾಡಿದ್ದು ನಿಮಗೆಲ್ಲರಿಗೂ ತಿಳಿದೇ ಇದೆ.

ಹೀಗಾಗಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಮಳೆ ಅಡ್ಡಿ ಉಂಟು ಮಾಡಲಿದೆ ಎಂಬ ಆತಂಕ ಎಲ್ಲರಲ್ಲಿಯೂ ಇದೆ. ಅಭಿಮಾನಿಗಳ ಈ ಆತಂಕಕ್ಕೆ ಹವಾಮಾನ ಇಲಾಖೆ ನೀಡಿರುವ ವರದಿ ಕೊಂಚ ಸಮಾಧಾನವನ್ನು ತಂದಿದೆ. ಹೌದು, ಹವಾಮಾನ ವರದಿಯ ಪ್ರಕಾರ ಭಾರತ ಮತ್ತು ಇಂಗ್ಲೆಂಡ್ ನಡುವೆ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದ ಮೊದಲನೇ ದಿನ ಯಾವುದೇ ಮಳೆಯ ಆಗಮನವಾಗುವುದಿಲ್ಲ ಎನ್ನಲಾಗುತ್ತಿದೆ. ಮೊದಲನೇ ದಿನದ ಆರಂಭದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು ತದನಂತರ ಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಕಳೆದ ನಾಲ್ಕೈದು ದಿನಗಳಿಂದಲೂ ಸಹ ಲೀಡ್ಸ್ ನಗರದಲ್ಲಿ ಯಾವುದೇ ಮಳೆಯಾಗಿಲ್ಲ. ಹೀಗಾಗಿ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯಕ್ಕೆ ಮಳೆ ಅವಾಂತರ ಸೃಷ್ಟಿಸಲಿದೆ ಎನ್ನುವ ಆತಂಕ ದೂರ ಸರಿದಿದೆ. ಈ ಪಂದ್ಯ ಭಾರತದ ಕಾಲಮಾನದ ಪ್ರಕಾರ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ.

Story first published: Wednesday, August 25, 2021, 13:01 [IST]
Other articles published on Aug 25, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+