ಭಾರತ vs ಇಂಗ್ಲೆಂಡ್ ತೃತೀಯ ಟೆಸ್ಟ್: ಎರಡನೇ ದಿನದ ಹವಾಮಾನ ವರದಿ

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳು ಈಗಾಗಲೇ ಮುಗಿದಿದ್ದು ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ 1-0 ಅಂತರದಿಂದ ಮುನ್ನಡೆಯನ್ನು ಸಾಧಿಸಿದೆ. ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಮಳೆಯ ಕಾರಣದಿಂದಾಗಿ ಯಾವುದೇ ಫಲಿತಾಂಶವಿಲ್ಲದೆ ನೀರಸ ಡ್ರಾನಲ್ಲಿ ಅಂತ್ಯಗೊಂಡಿತು. ನಂತರ ಕ್ರಿಕೆಟ್ ಕಾಶಿ ಎಂದೇ ಖ್ಯಾತಿಯನ್ನು ಹೊಂದಿರುವ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ 151 ರನ್‌ಗಳ ಗೆಲುವನ್ನು ಸಾಧಿಸಿತು.
ಮೊದಲೆರಡು ಪಂದ್ಯಗಳ ನಂತರ ಇಂಗ್ಲೆಂಡ್ ವಿರುದ್ಧ 1-0 ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದ ಟೀಮ್ ಇಂಡಿಯಾ ಮೂರನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿಯೇ ಕಳಪೆ ಪ್ರದರ್ಶನ ನೀಡುವುದರ ಮೂಲಕ ಮಂಕಾಗಿದೆ. ಲೀಡ್ಸ್ ಅಂಗಳದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ದುಕೊಂಡರು. ಆದರೆ ಮೊದಲನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾ ಆಟಗಾರರು ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿದರು. ಕೇವಲ 40.4 ಓವರ್‌ಗಳ ಬ್ಯಾಟಿಂಗ್ ಮಾಡಿದ ಭಾರತ ತಂಡ ತನ್ನೆಲ್ಲಾ ವಿಕೆಟ್‍ಗಳನ್ನು ಕಳೆದುಕೊಂಡು ಕೇವಲ 78 ರನ್‌ಗೆ ಆಲ್ ಔಟ್ ಆಯಿತು.
ಅತ್ತ ಮೊದಲನೇ ಇನ್ನಿಂಗ್ಸ್‌ನಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಇಂಗ್ಲೆಂಡ್ ತಂಡ ಬ್ಯಾಟಿಂಗ್ ವಿಭಾಗದಲ್ಲಿಯೂ ಮಿಂಚಿದೆ. ಮೊದಲನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ ತಂಡದ ಪರ ಆರಂಭಿಕ ಆಟಗಾರರಾಗಿ ರೊರಿ ಬರ್ನ್ಸ್ ಮತ್ತು ಹಸೀಬ್ ಹಮೀದ್ ಕಣಕ್ಕಿಳಿದಿದ್ದಾರೆ. ಇಂಗ್ಲೆಂಡ್ ಪರ ರೊರಿ ಬರ್ನ್ಸ್ ಅಜೇಯ 52 ಮತ್ತು ಹಸೀಬ್ ಹಮೀದ್ ಅಜೇಯ 60 ರನ್ ಗಳಿಸಿದ್ದು, ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಂತ್ಯಕ್ಕೆ ಇಂಗ್ಲೆಂಡ್ ಯಾವುದೇ ವಿಕೆಟ್ ನಷ್ಟವಿಲ್ಲದೆ 120 ರನ್ ಗಳಿಸಿ ಪಂದ್ಯದ ಮೇಲೆ ಹಿಡಿತವನ್ನು ಸಾಧಿಸಿದೆ.
ಹೀಗೆ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಇಂಗ್ಲೆಂಡ್ ತಂಡ ಸಂಪೂರ್ಣ ಮೇಲುಗೈ ಸಾಧಿಸಿದ್ದು ಎರಡನೇ ದಿನದಾಟ ಆಗಸ್ಟ್ 26ರ ಗುರುವಾರದಂದು ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ.
ಹವಾಮಾನ ವರದಿ: ಇನ್ನು ಭಾರತ ಮತ್ತು ಇಂಗ್ಲೆಂಡ್ ನಡುವೆ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ತೃತೀಯ ಟೆಸ್ಟ್ ಪಂದ್ಯದ ಎರಡನೇ ದಿನದಂದು ಕೂಡ ಮಳೆಯಾಗುವ ಸಂಭವ ತೀರಾ ಕಡಿಮೆ ಇದೆ. ಹೆಡಿಂಗ್ಲೆಯಲ್ಲಿ ಬೆಳಿಗ್ಗೆಯಿಂದಲೇ ಬಿಸಿಲಿನ ವಾತಾವರಣವಿದ್ದು ಮಧ್ಯಾಹ್ನದ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಆದರೆ ಎರಡನೇ ದಿನದಾಟ ಅಂತ್ಯವಾಗುವವರೆಗೂ ಯಾವುದೇ ಮಳೆಯಾಗುವ ಸಂಭವವಿಲ್ಲ ಎಂದು ಹವಾಮಾನ ವರದಿ ಹೇಳುತ್ತಿದೆ.
ನೇರ ಪ್ರಸಾರ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯವನ್ನು ವೀಕ್ಷಕರು ಸೋನಿ ಸಿಕ್ಸ್ ಚಾನೆಲ್‌ನಲ್ಲಿ ವೀಕ್ಷಿಸಬಹುದು. ಅಷ್ಟೇ ಅಲ್ಲದೆ ನಿಮ್ಮ ಮೊಬೈಲ್‌ಗಳಲ್ಲಿ ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿ ಹಾಗೂ ಜಿಯೋ ಟಿವಿ ಅಪ್ಲಿಕೇಶನ್‌ನ ಮುಖಾಂತರ ಸೋನಿ ಚಾನೆಲ್‌ನಲ್ಲಿ ಉಚಿತವಾಗಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯವನ್ನು ವೀಕ್ಷಿಸಬಹುದಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications