For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್ ತೃತೀಯ ಟೆಸ್ಟ್: ಮೂರನೇ ದಿನದ ಹವಾಮಾನ ವರದಿ

India vs England Third Test: Day 3 Headingley weather report

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳು ಈಗಾಗಲೇ ಮುಗಿದಿದ್ದು ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ 1-0 ಅಂತರದಿಂದ ಮುನ್ನಡೆಯನ್ನು ಸಾಧಿಸಿದೆ. ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಮಳೆಯ ಕಾರಣದಿಂದಾಗಿ ಯಾವುದೇ ಫಲಿತಾಂಶವಿಲ್ಲದೆ ನೀರಸ ಡ್ರಾನಲ್ಲಿ ಅಂತ್ಯಗೊಂಡಿತು. ನಂತರ ಕ್ರಿಕೆಟ್ ಕಾಶಿ ಎಂದೇ ಖ್ಯಾತಿಯನ್ನು ಹೊಂದಿರುವ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ 151 ರನ್‌ಗಳ ಗೆಲುವನ್ನು ಸಾಧಿಸಿತು.

ಮೊದಲೆರಡು ಪಂದ್ಯಗಳ ನಂತರ ಇಂಗ್ಲೆಂಡ್ ವಿರುದ್ಧ 1-0 ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದ ಟೀಮ್ ಇಂಡಿಯಾ ಮೂರನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿಯೇ ಕಳಪೆ ಪ್ರದರ್ಶನ ನೀಡುವುದರ ಮೂಲಕ ಮಂಕಾಗಿದೆ. ಲೀಡ್ಸ್ ಅಂಗಳದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ದುಕೊಂಡರು. ಆದರೆ ಮೊದಲನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾ ಆಟಗಾರರು ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿದರು. ಕೇವಲ 40.4 ಓವರ್‌ಗಳ ಬ್ಯಾಟಿಂಗ್ ಮಾಡಿದ ಭಾರತ ತಂಡ ತನ್ನೆಲ್ಲಾ ವಿಕೆಟ್‍ಗಳನ್ನು ಕಳೆದುಕೊಂಡು ಕೇವಲ 78 ರನ್‌ಗೆ ಆಲ್ ಔಟ್ ಆಯಿತು.

ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಬೌಲಿಂಗ್ ದಾಳಿ ನಡೆಸಿ ಮೊದಲನೇ ಇನ್ನಿಂಗ್ಸ್‌ನಲ್ಲಿ ಭಾರತೀಯ ಆಟಗಾರರನ್ನು 78 ರನ್‌ಗಳಿಗೆ ಕಟ್ಟು ಹಾಕಿದ ಇಂಗ್ಲೆಂಡ್ ಮೊದಲನೇ ಇನ್ನಿಂಗ್ಸ್‌ನಲ್ಲಿ ತನ್ನ ಬ್ಯಾಟಿಂಗ್ ಆರಂಭಿಸಿ ಭರ್ಜರಿ ಬ್ಯಾಟಿಂಗ್ ನಡೆಸುವುದರ ಮೂಲಕ ಭಾರತದ ವಿರುದ್ಧ ಮತ್ತಷ್ಟು ಹಿಡಿತವನ್ನು ಸಾಧಿಸಿದೆ. ಇಂಗ್ಲೆಂಡ್ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದಿದ್ದ ರೊರಿ ಬರ್ನ್ಸ್ 61 ಮತ್ತು ಹಸೀಬ್ ಹಮೀದ್ 68 ರನ್ ಗಳಿಸಿ ಇಂಗ್ಲೆಂಡ್ ತಂಡಕ್ಕೆ ಉತ್ತಮ ಆರಂಭವನ್ನು ತಂದುಕೊಟ್ಟರು, ನಂತರ ಬಂದ ಡೇವಿಡ್ ಮಲನ್ 70 ಮತ್ತು ಜೋ ರೂಟ್ 121 ರನ್ ಸಿಡಿಸಿ ಇಂಗ್ಲೆಂಡ್ ತಂಡ ಬೃಹತ್ ಮೊತ್ತದತ್ತ ದಾಪುಗಾಲಿಡುವಂತೆ ಮಾಡಿದರು. ಈ ಇನ್ನಿಂಗ್ಸ್ ಮೂಲಕ ಈ ವರ್ಷದ ಆರನೇ ಶತಕವನ್ನು ಸಿಡಿಸಿದ ಜೋ ರೂಟ್ ಇಂಗ್ಲೆಂಡ್ ತಂಡಕ್ಕೆ ಮತ್ತೊಮ್ಮೆ ಆಸರೆಯಾಗಿದ್ದಾರೆ.

ಹೀಗೆ ಹೇಡಿಂಗ್ಲೆ ಟೆಸ್ಟ್ ಪಂದ್ಯದ ಎರಡನೇ ದಿನದ ಪೂರ್ತಿ ಆಟವಾಡಿದ ಇಂಗ್ಲೆಂಡ್ ದಿನದಾಟದಂತ್ಯಕ್ಕೆ 8 ವಿಕೆಟ್ ನಷ್ಟಕ್ಕೆ 423 ರನ್ ಗಳಿಸುವುದರ ಮೂಲಕ ಬರೋಬ್ಬರಿ 345 ರನ್‌ಗಳ ಮುನ್ನಡೆಯನ್ನು ಸಾಧಿಸಿದೆ.

ಇನ್ನು ಭಾರತ ಮತ್ತು ಇಂಗ್ಲೆಂಡ್ ನಡುವಿನ ಹೇಡಿಂಗ್ಲೆ ಟೆಸ್ಟ್ ಪಂದ್ಯದ ಮೂರನೇ ದಿನದಾಟ ಆಗಸ್ಟ್ 27 ರ ಶುಕ್ರವಾರದಂದು ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದ್ದು, ಈ ದಿನದಾಟಕ್ಕೆ ಮಳೆಯ ಅಡ್ಡಿಯುಂಟಾಗುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗುತ್ತಿದೆ. ದಿನವಿಡೀ ಮೋಡ ಕವಿದ ವಾತಾವರಣ ಇರಲಿದ್ದು, ಬೆಳಕಿನ ಆಟದ ಸಮಯದಲ್ಲಿ ಕೊಂಚ ಮಳೆಯಾಗಬಹುದು ಬಿಟ್ಟರೆ ದಿನವಿಡೀ ಮಳೆಯ ಆಗಮನವಾಗುವುದಿಲ್ಲ ಎಂದು ಹವಾಮಾನ ವರದಿ ಹೇಳುತ್ತಿದೆ.

ನೇರ ಪ್ರಸಾರ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯವನ್ನು ವೀಕ್ಷಕರು ಸೋನಿ ಸಿಕ್ಸ್ ಚಾನೆಲ್‌ನಲ್ಲಿ ವೀಕ್ಷಿಸಬಹುದು. ಅಷ್ಟೇ ಅಲ್ಲದೆ ನಿಮ್ಮ ಮೊಬೈಲ್‌ಗಳಲ್ಲಿ ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿ ಹಾಗೂ ಜಿಯೋ ಟಿವಿ ಅಪ್ಲಿಕೇಶನ್‌ನ ಮುಖಾಂತರ ಸೋನಿ ಚಾನೆಲ್‌ನಲ್ಲಿ ಉಚಿತವಾಗಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

Story first published: Friday, August 27, 2021, 13:47 [IST]
Other articles published on Aug 27, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+