ಭಾರತ vs ಇಂಗ್ಲೆಂಡ್ ತೃತೀಯ ಟೆಸ್ಟ್: ನಾಲ್ಕನೇ ದಿನ ಹೆಡಿಂಗ್ಲೆ ಅಂಗಳದಲ್ಲಿ ಮಳೆಯಾಗುತ್ತಾ?

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳು ಈಗಾಗಲೇ ಮುಗಿದಿದ್ದು ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ 1-0 ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದೆ. ಭಾರತ ಮತ್ತು ಇಂಗ್ಲೆಂಡ್ ನಡುವೆ ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದಿದ್ದ ಮೊದಲನೇ ಪಂದ್ಯ ಮಳೆ ಕಾರಣದಿಂದಾಗಿ ನೀರಸ ಡ್ರಾನಲ್ಲಿ ಅಂತ್ಯಗೊಂಡಿತ್ತು, ನಂತರ ಪ್ರತಿಷ್ಠಿತ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ 151 ರನ್‌ಗಳ ಗೆಲುವನ್ನು ಸಾಧಿಸುವುದರ ಮೂಲಕ ಹೊಸ ಮೈಲಿಗಲ್ಲನ್ನು ನಿರ್ಮಿಸಿತು.
ಮೊದಲೆರಡು ಪಂದ್ಯಗಳ ನಂತರ ಇಂಗ್ಲೆಂಡ್ ವಿರುದ್ಧ 1-0 ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದ ಟೀಮ್ ಇಂಡಿಯಾ ಮೂರನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿಯೇ ಕಳಪೆ ಪ್ರದರ್ಶನ ನೀಡುವುದರ ಮೂಲಕ ಮಂಕಾಗಿದೆ. ಲೀಡ್ಸ್ ಅಂಗಳದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ದುಕೊಂಡರು. ಆದರೆ ಮೊದಲನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾ ಆಟಗಾರರು ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿದರು. ಕೇವಲ 40.4 ಓವರ್‌ಗಳ ಬ್ಯಾಟಿಂಗ್ ಮಾಡಿದ ಭಾರತ ತಂಡ ತನ್ನೆಲ್ಲಾ ವಿಕೆಟ್‍ಗಳನ್ನು ಕಳೆದುಕೊಂಡು ಕೇವಲ 78 ರನ್‌ಗೆ ಆಲ್ ಔಟ್ ಆಯಿತು.
ಇನ್ನು ಮೊದಲನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ 432 ರನ್ ಬಾರಿಸಿ ಭಾರತದ ವಿರುದ್ಧ 354 ರನ್‌ಗಳ ಮುನ್ನಡೆಯನ್ನು ಸಾಧಿಸಿತ್ತು. ಮೂರನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ ಪರ ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ ಮತ್ತು ವಿರಾಟ್ ಕೊಹ್ಲಿ ಜವಾಬ್ದಾರಿಯುತ ಆಟವನ್ನು ಆಡುವುದರ ಮೂಲಕ ಹಿಂದಿನ ಪಂದ್ಯಗಳಲ್ಲಿ ಮಾಡಿದ ತಮ್ಮ ತಪ್ಪುಗಳನ್ನು ತಿದ್ದಿಕೊಂಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ತೃತೀಯ ಟೆಸ್ಟ್ ಪಂದ್ಯದ ಮೂರನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ 59 ರನ್ ಬಾರಿಸಿದರೆ, ಮೂರನೇ ದಿನದಾಟದಂತ್ಯಕ್ಕೆ ಚೇತೇಶ್ವರ್ ಪೂಜಾರ ಅಜೇಯ 91 ರನ್ ಮತ್ತು ವಿರಾಟ್ ಕೊಹ್ಲಿ ಅಜೇಯ 45 ರನ್ ಬಾರಿಸಿ ನಾಲ್ಕನೇ ದಿನದಾಟವನ್ನು ಆರಂಭಿಸಲು ಕಾಯುತ್ತಿದ್ದಾರೆ.
ಹೀಗೆ ಮೂರನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ ಕಳಪೆ ಪ್ರದರ್ಶನ ನೀಡುವುದರ ಮೂಲಕ ಮಂಕಾಗಿದ್ದ ಟೀಮ್ ಇಂಡಿಯಾ ಆಟಗಾರರು ಎರಡನೇ ಇನ್ನಿಂಗ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡುವುದರ ಮೂಲಕ ಪುಟಿದೆದ್ದಿದ್ದಾರೆ. ಇನ್ನು ಭಾರತ ಮತ್ತು ಇಂಗ್ಲೆಂಡ್ ನಡುವಿನ ತೃತೀಯ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟ ಆಗಸ್ಟ್ 28, ಶನಿವಾರದಂದು ನಡೆಯಲಿದ್ದು ಹೆಡಿಂಗ್ಲೆ ಕ್ರೀಡಾಂಗಣದ ಹವಾಮಾನ ವರದಿ ಮುಂದೆ ಇದೆ ಓದಿ..
ಭಾರತ ಮತ್ತು ಇಂಗ್ಲೆಂಡ್ ನಡುವಿನ ತೃತೀಯ ಟೆಸ್ಟ್ ಪಂದ್ಯದ ನಾಲ್ಕನೇ ದಿನದಂದು ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವಾದ ಮೊದಲ 3 ಗಂಟೆಗಳ ಕಾಲ ಮೋಡ ಕವಿದ ವಾತಾವರಣವಿರಲಿದೆ. ನಂತರ ಮೋಡ ಕವಿದ ವಾತಾವರಣ ತೆರವುಗೊಳ್ಳಲಿದ್ದು ದಿನವಿಡೀ ಸೂರ್ಯನ ಬಿಸಿಲು ಇರಲಿದೆ. ಹೀಗಾಗಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ತೃತೀಯ ಟೆಸ್ಟ್ ಪಂದ್ಯದ ನಾಲ್ಕನೇ ದಿನದಂದು ಮಳೆಯಾಗುವುದಿಲ್ಲ ಎಂದು ಹವಾಮಾನ ವರದಿ ಹೇಳುತ್ತಿದೆ. ಕ್ರೀಡಾಂಗಣದಲ್ಲಿ 18 ರಿಂದ 21° ಸೆಲ್ಸಿಯಸ್ ಉಷ್ಣಾಂಶ ಬರಲಿದ್ದು ಗಾಳಿಯ ವೇಗ ಪ್ರತಿ ಗಂಟೆಗೆ 9 ಕಿಲೋ ಮೀಟರ್‌ಗಳಷ್ಟು ಇರಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದ ಬಗ್ಗೆ ಮಾತನಾಡಿರುವ ಇಂಗ್ಲೆಂಡ್ ತಂಡದ ಬೌಲರ್ ಕ್ರೈಗ್ ಓವರ್‌ಟನ್ ನಾಲ್ಕನೆಯ ದಿನದಂದು ಸಿಗಲಿರುವ ಎರಡನೇ ಹೊಸ ಬಾಲ್ ಕುರಿತು ವಿಶ್ವಾಸದ ಮಾತುಗಳನ್ನಾಡಿದ್ದಾರೆ. ನಾಲ್ಕನೇ ದಿನದಾಟ ಆರಂಭವಾಗುತ್ತಾ ಇದ್ದಂತೆ ನೂತನ ಬಾಲ್ ಲಭಿಸಲಿದ್ದು, ಹೊಸ ಬಾಲ್ ಸಿಕ್ಕಿದ ಮೊದಲನೇ ಎಸೆತದಿಂದಲೇ ವಿಕೆಟ್ ಪಡೆಯುವತ್ತ ಕಣ್ಣಿಡುತ್ತೇವೆ ಎಂದು ಕ್ರೈಗ್ ಓವರ್‌ಟನ್ ಹೇಳಿದ್ದಾರೆ. ಅಷ್ಟೇ ಅಲ್ಲದೆ ಹೊಸ ಬಾಲ್ ಬಂದ ನಂತರ 2-3 ವಿಕೆಟ್‍ಗಳನ್ನು ವೇಗವಾಗಿ ಪಡೆದುಕೊಳ್ಳಲಿದ್ದೇವೆ ಎಂದು ವಿಶ್ವಾಸ ವ್ಯಕ್ತ ಪಡಿಸುವುದರ ಮೂಲಕ ಭಾರತೀಯ ಆಟಗಾರರಿಗೆ ಕ್ರೈಗ್ ಓವರ್‌ಟನ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications