ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್ ತೃತೀಯ ಟೆಸ್ಟ್: ನಾಲ್ಕನೇ ದಿನದ ಲೈವ್ ಸ್ಕೋರ್

India vs England Third Test: Day 4 Live Score

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯ ಲೀಡ್ಸ್ ನಗರದ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಭಾರತ ಮೊದಲನೇ ಇನ್ನಿಂಗ್ಸ್‌ನಲ್ಲಿ 78 ರನ್ ಗಳಿಸಿ ಆಲ್ ಔಟ್ ಆಗುವುದರ ಮೂಲಕ ಕಳಪೆ ಆರಂಭವನ್ನು ಪಡೆದುಕೊಂಡಿತ್ತು. ಭಾರತದ ಎಲ್ಲಾ ಬ್ಯಾಟ್ಸ್‌ಮನ್‌ಗಳೂ ಸಹ ಕೈಕೊಟ್ಟ ಕಾರಣ ಮೊದಲನೇ ಇನ್ನಿಂಗ್ಸ್‌ನಲ್ಲಿ ಭಾರತ ಅತ್ಯಂತ ಕಡಿಮೆ ಮೊತ್ತವನ್ನು ಕಲೆ ಹಾಕಿತ್ತು.

ಕೇವಲ ಬ್ಯಾಟಿಂಗ್ ವಿಭಾಗದಲ್ಲಿ ಮಾತ್ರವಲ್ಲದೆ ಬೌಲಿಂಗ್ ವಿಭಾಗದಲ್ಲಿಯೂ ಸಹ ಭಾರತ ತಂಡ ಮೊದಲನೇ ಇನ್ನಿಂಗ್ಸ್‌ನಲ್ಲಿ ಮುಗ್ಗರಿಸಿತ್ತು. ಇಂಗ್ಲೆಂಡ್ ತಂಡದ ಆಟಗಾರರ ವಿಕೆಟ್ ಪಡೆಯಲು ಭಾರತೀಯ ಬೌಲರ್‌ಗಳು ಹರಸಾಹಸಪಟ್ಟರು. ಇಂಗ್ಲೆಂಡ್ ತಂಡದ ಅಗ್ರ ಕ್ರಮಾಂಕದ ಆಟಗಾರರು ಉತ್ತಮ ಪ್ರದರ್ಶನ ನೀಡಿದ ಕಾರಣ ಇಂಗ್ಲೆಂಡ್ ತಂಡ 432 ರನ್ ಗಳಿಸಿ 354 ರನ್‌ಗಳ ಮುನ್ನಡೆಯನ್ನು ಕಾಯ್ದುಕೊಂಡಿತು.

ಭಾರತೀಯರ ಆಟ ನಡೆಯುವುದಿಲ್ಲ; ನಾಲ್ಕನೇ ದಿನದಾಟಕ್ಕೂ ಮುನ್ನವೇ ಎಚ್ಚರಿಕೆ ನೀಡಿದ ಇಂಗ್ಲೆಂಡ್ ಆಟಗಾರಭಾರತೀಯರ ಆಟ ನಡೆಯುವುದಿಲ್ಲ; ನಾಲ್ಕನೇ ದಿನದಾಟಕ್ಕೂ ಮುನ್ನವೇ ಎಚ್ಚರಿಕೆ ನೀಡಿದ ಇಂಗ್ಲೆಂಡ್ ಆಟಗಾರ

ಹೀಗೆ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿಯೂ ಕಳಪೆ ಪ್ರದರ್ಶನ ತೋರಿದ ಭಾರತ ತಂಡ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ್ದು ರೋಹಿತ್ ಶರ್ಮಾ ಉತ್ತಮ ಆರಂಭ ನೀಡಿದರು. ಭಾರತ ತಂಡದ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಕೆಎಲ್ ರಾಹುಲ್ 8 ರನ್ ಗಳಿಸಿ ವೇಗವಾಗಿ ಪೆವಿಲಿಯನ್ ಸೇರಿಕೊಂಡರು. ನಂತರ ಜವಾಬ್ದಾರಿಯುತ ಆಟವಾಡಿದ ರೋಹಿತ್ ಶರ್ಮಾ 59 ರನ್ ಗಳಿಸಿದರು. ನಂತರ ಹಲವಾರು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡುವುದರ ಮೂಲಕ ಸಾಕಷ್ಟು ಟೀಕೆಗಳಿಗೆ ಒಳಗಾಗಿರುವ ಚೇತೇಶ್ವರ್ ಪೂಜಾರ ಮೂರನೆ ದಿನದಾಟದಂತ್ಯಕ್ಕೆ ಅಜೇಯ 91 ರನ್ ಮತ್ತು ನಾಯಕ ವಿರಾಟ್ ಕೊಹ್ಲಿ ಅಜೇಯ 45 ರನ್ ಗಳಿಸಿದ್ದಾರೆ. ಹೀಗೆ ರೋಹಿತ್ ಶರ್ಮಾ ಚೇತೇಶ್ವರ್ ಪೂಜಾರ ಮತ್ತು ವಿರಾಟ್ ಕೊಹ್ಲಿ ಅವರ ಜವಾಬ್ದಾರಿಯುತ ಆಟದ ನೆರವಿನಿಂದ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 212 ರನ್ ಗಳಿಸಿದ್ದು 139 ರನ್‌ಗಳ ಹಿನ್ನಡೆಯಲ್ಲಿದೆ.

ಇನ್ನು ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟ ಆಗಸ್ಟ್ 28 ರ ಶನಿವಾರದಂದು ನಡೆಯಲಿದ್ದು ಭಾರತದ ನಾಯಕ ವಿರಾಟ್ ಕೊಹ್ಲಿ ಮತ್ತು ಚೇತೇಶ್ವರ ಪೂಜಾರ ನಾಲ್ಕನೇ ದಿನದಾಟವನ್ನು ಆರಂಭಿಸಲಿದ್ದಾರೆ. ಟೀಮ್ ಇಂಡಿಯಾ ಆಟಗಾರರು ಈ ದಿನ ನೀಡುವ ಪ್ರದರ್ಶನ ಅತಿ ಮುಖ್ಯವಾಗಿದ್ದು ಪಂದ್ಯದಲ್ಲಿ ತಂಡದ ಗೆಲುವು ಮತ್ತು ಸೋಲನ್ನು ಈ ಇನ್ನಿಂಗ್ಸ್ ನಿರ್ಧರಿಸಲಿದೆ.

ಭಾರತ vs ಇಂಗ್ಲೆಂಡ್ ತೃತೀಯ ಟೆಸ್ಟ್: ನಾಲ್ಕನೇ ದಿನದ ಲೈವ್ ಸ್ಕೋರ್:

1
49714


ಭಾರತ ಹಾಗೂ ಇಂಗ್ಲೆಂಡ್ ಆಡುವ ಬಳಗ ಟೀಮ್ ಇಂಡಿಯಾ ಆಡುವ ಬಳಗ:

ಭಾರತ ಆಡುವ ಬಳಗ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್

ರಹಾನೆ ಕೈಬಿಟ್ರೆ ಯಾರಾಗ್ತಾರೆ 4 ನೇ ಟೆಸ್ಟ್ ಪಂದ್ಯದ ಉಪನಾಯಕ? | Oneindia Kannada

ಇಂಗ್ಲೆಂಡ್ ಆಡುವ ಬಳಗ: ಜೋ ರೂಟ್ (ನಾಯಕ), ರೋರಿ ಬರ್ನ್ಸ್, ಹಸೀಬ್ ಹಮೀದ್, ಡೇವಿಡ್ ಮಲನ್, ಜಾನಿ ಬೈರ್‌ಸ್ಟೊವ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಮೊಯೀನ್ ಅಲಿ, ಸ್ಯಾಮ್ ಕರನ್, ಒಲ್ಲಿ ರಾಬಿನ್ಸನ್, ಕ್ರೇಗ್ ಓವರ್‌ಟನ್, ಜೇಮ್ಸ್ ಆಂಡರ್ಸನ್

Story first published: Saturday, August 28, 2021, 15:30 [IST]
Other articles published on Aug 28, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X