For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್ ತೃತೀಯ ಟೆಸ್ಟ್: 2ನೇ ದಿನ ಇಂಗ್ಲೆಂಡ್ ಆಟಗಾರರು ಕಪ್ಪುಪಟ್ಟಿ ಧರಿಸಲು ಕಾರಣವೇನು ಗೊತ್ತಾ?

India vs England Third Test: Here’s why England players are wearing black armbands on second day

ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿ ನಿರತರಾಗಿರುವ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳು ಈಗಾಗಲೇ ಮುಗಿದಿದ್ದು, ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ಲೀಡ್ಸ್ ನಗರದ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ರೋಹಿತ್ ಶರ್ಮಾ ತನಗಾಗಿ ಮಾತ್ರ ಆಡುತ್ತಿದ್ದಾರೆ; ಕಳಪೆ ಪ್ರದರ್ಶನದ ಬೆನ್ನಲ್ಲೇ ಕೇಳಿಬಂತು ಮಹಾ ಆರೋಪ!

ಲೀಡ್ಸ್ ಅಂಗಳದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ದುಕೊಂಡರು. ಆದರೆ ಮೊದಲನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾ ಆಟಗಾರರು ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿದರು. ಕೇವಲ 40.4 ಓವರ್‌ಗಳ ಬ್ಯಾಟಿಂಗ್ ಮಾಡಿದ ಭಾರತ ತಂಡ ತನ್ನೆಲ್ಲಾ ವಿಕೆಟ್‍ಗಳನ್ನು ಕಳೆದುಕೊಂಡು ಕೇವಲ 78 ರನ್‌ಗೆ ಆಲ್ ಔಟ್ ಆಯಿತು.

ಅತ್ತ ಮೊದಲನೇ ಇನ್ನಿಂಗ್ಸ್‌ನಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಇಂಗ್ಲೆಂಡ್ ತಂಡ ಬ್ಯಾಟಿಂಗ್ ವಿಭಾಗದಲ್ಲಿಯೂ ಮಿಂಚಿದೆ. ಮೊದಲನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ ತಂಡದ ಪರ ಆರಂಭಿಕ ಆಟಗಾರರಾಗಿ ರೊರಿ ಬರ್ನ್ಸ್ ಮತ್ತು ಹಸೀಬ್ ಹಮೀದ್ ಕಣಕ್ಕಿಳಿದಿದ್ದಾರೆ. ಇಂಗ್ಲೆಂಡ್ ಪರ ರೊರಿ ಬರ್ನ್ಸ್ ಅಜೇಯ 52 ಮತ್ತು ಹಸೀಬ್ ಹಮೀದ್ ಅಜೇಯ 60 ರನ್ ಗಳಿಸಿದ್ದು, ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಂತ್ಯಕ್ಕೆ ಇಂಗ್ಲೆಂಡ್ ಯಾವುದೇ ವಿಕೆಟ್ ನಷ್ಟವಿಲ್ಲದೆ 120 ರನ್ ಗಳಿಸಿ ಪಂದ್ಯದ ಮೇಲೆ ಹಿಡಿತವನ್ನು ಸಾಧಿಸಿತ್ತು.

ಹೀಗೆ ಮೊದಲನೇ ಇನ್ನಿಂಗ್ಸ್‌ನಲ್ಲಿ ಯಾವುದೇ ವಿಕೆಟ್ ಕಳೆದುಕೊಳ್ಳದೇ ಉತ್ತಮ ಆಟವನ್ನಾಡಿದ್ದ ಇಂಗ್ಲೆಂಡ್ ತಂಡದ ಆಟಗಾರರು ಗುರುವಾರ ನಡೆಯುತ್ತಿರುವ ಎರಡನೇ ದಿನದಾಟದಲ್ಲಿ ಕೈಗೆ ಕಪ್ಪು ಪಟ್ಟಿಯನ್ನು ಧರಿಸಿ ಕಣಕ್ಕಿಳಿದಿದ್ದಾರೆ. ಇಂಗ್ಲೆಂಡ್ ಆಟಗಾರರು ಭಾರತದ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಕಪ್ಪುಪಟ್ಟಿಯನ್ನು ಧರಿಸಿ ಕಣಕ್ಕಿಳಿಯಲು ಕಾರಣ ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ ಟೆಡ್ ಡೆಕ್ಸ್ಟರ್ ನಿಧನರಾಗಿರುವುದು.

ಹೌದು, ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ ಟೆಡ್ ಡೆಕ್ಸ್ಟರ್ ನಿಧನರಾದ ಕಾರಣದಿಂದ ಅವರಿಗೆ ಗೌರವ ಸೂಚಿಸುವ ಸಲುವಾಗಿ ಇಂಗ್ಲೆಂಡ್ ತಂಡದ ಆಟಗಾರರು ಇಂದು ( ಆಗಸ್ಟ್ 26 ) ನಡೆಯುತ್ತಿರುವ ಪಂದ್ಯದಲ್ಲಿ ಕಪ್ಪು ಪಟ್ಟಿಯನ್ನು ಧರಿಸಿ ಕ್ರಿಕೆಟ್ ಆಡುತ್ತಿದ್ದಾರೆ. ಆಲ್ ರೌಂಡರ್ ಆಗಿದ್ದ ಡೆಕ್ಸ್ಟರ್ ಬಲಿಷ್ಠ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಮತ್ತು ಮಧ್ಯಮ ಕ್ರಮಾಂಕದ ವೇಗಿಯಾಗಿದ್ದರು. ಸುಮಾರು 30 ಟೆಸ್ಟ್‌ ಪಂದ್ಯಗಳಲ್ಲಿ ಡೆಕ್ಸ್ಟರ್ ಆಂಗ್ಲ ತಂಡವನ್ನು ಮುನ್ನಡೆಸಿದ್ದಾರೆ.

62 ಟೆಸ್ಟ್ ಪಂದ್ಯಗಳನ್ನಾಡಿರುವ ಟೆಡ್ ಡೆಕ್ಸ್ಟರ್ 4502 ರನ್ ಮತ್ತು 66 ವಿಕೆಟ್ ಪಡೆದಿದ್ದಾರೆ. ಕ್ರಿಕೆಟ್ ಮೈದಾನದ ಹೊರಗಿಯೂ ಡೆಕ್ಸ್ಟರ್ ಉತ್ತಮ ಸ್ವಭಾವ, ಉತ್ತಮ ಗುಣದ ವ್ಯಕ್ತಿಯಾಗಿದ್ದರು. ಡೆಕ್ಸ್ಟರ್ ಜನಿಸಿದ್ದು ಇಟಲಿಯ ಮಿಲನ್‌ನಲ್ಲಿ 1935ರಲ್ಲಿ ಮೇ 15ರಂದು. 1958ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಟೆಡ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಪ್ರಥಮದರ್ಜೆ ಕ್ರಿಕೆಟ್‌ನಲ್ಲಿ ಟೆಡ್ ಅವರು 1956 ರಿಂದ 1968ರ ವರೆಗೆ ಆಡಿದ್ದಾರೆ. ಪ್ರಥಮದರ್ಜೆ ಕ್ರಿಕೆಟ್‌ನಲ್ಲಿ 21000ಕ್ಕೂ ಹೆಚ್ಚು ರನ್, 419 ವಿಕೆಟ್ ದಾಖಲೆ ಹೊಂದಿದ್ದಾರೆ. 1965ರಲ್ಲಿ ಒಮ್ಮೆ ಅಪಘಾತದಲ್ಲಿ ಟೆಡ್ ಕಾಲು ಮುರಿತಕ್ಕೊಳಗಾಗಿ ಸಮಸ್ಯೆ ಅನುಭವಿಸಿದ್ದರು. ಗಾಯದಿಂದ ಚೇತರಿಸಿಕೊಂಡು 1968ರಲ್ಲಿ ಮತ್ತೆ ಟೆಡ್ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಿದ್ದರು. ಗಾಯ ಗುಣವಾದ ಬಳಿಕ ಆ್ಯಷಸ್‌ನಲ್ಲಿ ಡೆಕ್ಸ್ಟರ್ ಆಡಿದ್ದರು. ಆ ಬಳಿಕ ಸಂಡೆ ಲೀಗ್‌ ಗೇಮ್ಸ್‌ಗಳಲ್ಲಿ ಟೆಡ್ 1971 ರಿಂದ 1972ರ ವರೆಗೂ ಆಡಿದ್ದರು. 62 ಟೆಸ್ಟ್ ಪಂದ್ಯಗಳಲ್ಲಿ ಟೆಡ್ 47.89 ಸರಾಸರಿ ಹೊಂದಿದ್ದಾರೆ. 9 ಶತಕ, 1 ಅರ್ಧ ಶತಕ, 27 ಅರ್ಧ ಶತಕಗಳನ್ನು ಬಾರಿಸಿದ್ದಾರೆ.

Story first published: Friday, August 27, 2021, 10:19 [IST]
Other articles published on Aug 27, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+