ರೋಹಿತ್ ಶರ್ಮಾ ತನಗಾಗಿ ಮಾತ್ರ ಆಡುತ್ತಿದ್ದಾರೆ; ಕಳಪೆ ಪ್ರದರ್ಶನದ ಬೆನ್ನಲ್ಲೇ ಕೇಳಿಬಂತು ಮಹಾ ಆರೋಪ!

ಸದ್ಯ ವಿರಾಟ್ ಕೊಹ್ಲಿ ಪಡೆ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡು ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸುತ್ತಿರುವುದು ನಿಮಗೆಲ್ಲರಿಗೂ ತಿಳಿದೇ ಇದೆ. 5 ಟೆಸ್ಟ್ ಪಂದ್ಯಗಳ ಸರಣಿಯ ಮೊದಲೆರಡು ಪಂದ್ಯಗಳು ಈಗಾಗಲೇ ಮುಗಿದಿದ್ದು, ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಮೊದಲನೇ ಪಂದ್ಯ ಯಾವುದೇ ಫಲಿತಾಂಶವಿಲ್ಲದೆ ಮಳೆಯ ಕಾರಣಕ್ಕೆ ನೀರಸ ಡ್ರಾನಲ್ಲಿ ಅಂತ್ಯಗೊಂಡಿತ್ತು. ಇನ್ನು ಭಾರತ ಮತ್ತು ಇಂಗ್ಲೆಂಡ್ ನಡುವೆ ಕ್ರಿಕೆಟ್ ಕಾಶಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ 151 ರನ್‌ಗಳ ಜಯವನ್ನು ಸಾಧಿಸುವುದರ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿತ್ತು.
ಹೀಗೆ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದಿದ್ದ ಎರಡನೇ ಟೆಸ್ಟ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ ಹೆಡಿಂಗ್ಲೆಯಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಮೊದಲನೇ ದಿನದಾಟದಲ್ಲಿಯೇ ಮಂಕಾಗಿದೆ. ಹಾಗೂ ಭಾರತ ಮತ್ತು ಇಂಗ್ಲೆಂಡ್ ನಡುವೆ ಲೀಡ್ಸ್ ನಗರದ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಮೊದಲನೇ ದಿನದಾಟದಲ್ಲಿ ಭಾರತೀಯರು ತೋರಿಸಿದ ಕಳಪೆ ಪ್ರದರ್ಶನ ಸಾಕಷ್ಟು ಚರ್ಚೆಗಳಿಗೆ ಕಾರಣವಾಗಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ದುಕೊಂಡರು. ಆದರೆ ಮೊದಲನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ಭಾರತೀಯ ಆಟಗಾರರು ಅಕ್ಷರಶಃ ಮಂಕಾಗಿ ಇಂಗ್ಲೆಂಡ್ ಬೌಲಿಂಗ್ ದಾಳಿಗೆ ತತ್ತರಿಸಿ 78 ರನ್‌ಗಳಿಗೆ ಆಲ್ ಔಟ್ ಆಗಿದ್ದಾರೆ.
ಹೌದು, ಟಾಸ್ ಗೆದ್ದು ಮೊದಲನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಆರಂಭಿಸಿದ ಭಾರತದ ಆಟಗಾರರು 78 ರನ್‌ಗಳಿಗೆ ಆಲ್ ಔಟ್ ಆಗುವುದರ ಮೂಲಕ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದಾರೆ. ಮೊದಲನೇ ಇನ್ನಿಂಗ್ಸ್‌ನಲ್ಲಿ ಯಾವುದೇ ಆಟಗಾರನೂ ಉತ್ತಮ ಪ್ರದರ್ಶನವನ್ನು ನೀಡದೇ ಸಾಲುಸಾಲಾಗಿ ಪೆವಿಲಿಯನ್ ಪರೇಡ್ ನಡೆಸಿದ ಕುರಿತು ಭಾರತದ ಕ್ರಿಕೆಟ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರಿದ್ದರು. ಇದಾದ ಬೆನ್ನಲ್ಲೇ ಇದೀಗ ಭಾರತ ತಂಡದ ಬ್ಯಾಟ್ಸ್‌ಮನ್‌ಗಳ ಕಳಪೆ ಪ್ರದರ್ಶನದ ಕುರಿತು ಮಾತನಾಡಿರುವ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಈ ಕೆಳಕಂಡಂತೆ ಕಾಲೆಳೆದಿದ್ದಾರೆ..

ರೋಹಿತ್ ಶರ್ಮಾ ರೀತಿಯ ಆಟಗಾರ ತನ್ನ ಉಳಿವಿಗಾಗಿ ಆಡುತ್ತಿರುವುದು ನಿಜಕ್ಕೂ ಬೇಸರದ ಸಂಗತಿ ಎಂದ ವಾನ್
ಭಾರತೀಯ ಆಟಗಾರರ ಕಳಪೆ ಪ್ರದರ್ಶನದ ಕುರಿತು ಮಾತನಾಡಿದ ಮೈಕಲ್ ವಾನ್ ವಿಶೇಷವಾಗಿ ಭಾರತ ತಂಡದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಪ್ರದರ್ಶನದ ಕುರಿತು ಬೇಸರವನ್ನು ವ್ಯಕ್ತಪಡಿಸಿದರು. ರೋಹಿತ್ ಶರ್ಮಾ ಎಂತಹ ಅತ್ಯದ್ಭುತ ಆಟಗಾರ, ಆದರೆ ಇಂತಹ ಅತ್ಯದ್ಭುತ ಆಟಗಾರ ತಂಡಕ್ಕಾಗಿ ಆಡದೆ ತನ್ನ ಉಳಿವಿಗಾಗಿ ಬ್ಯಾಟ್ ಬೀಸಿದ್ದನ್ನು ನೋಡಿದರೆ ನಿಜಕ್ಕೂ ಬೇಸರವಾಗುತ್ತದೆ ಎಂದು ರೋಹಿತ್ ಶರ್ಮಾ ಆಟದ ಕುರಿತು ಮೈಕಲ್ ವಾನ್ ಬೇಸರ ವ್ಯಕ್ತಪಡಿಸಿದರು.

ತಂಡಕ್ಕಾಗಿ ಆಡಬೇಕೆಂಬ ತುಡಿತ ಯಾರಲ್ಲಿಯೂ ಕಾಣಿಸಲಿಲ್ಲ ಎಂದ ಮೈಕಲ್ ವಾನ್
ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಭಾರತದ ಬ್ಯಾಟಿಂಗ್ ಪ್ರದರ್ಶನವನ್ನು ನೋಡಿದ ಮೈಕಲ್ ವಾನ್ ಟೀಮ್ ಇಂಡಿಯಾದ ಯಾವೊಬ್ಬ ಆಟಗಾರನೂ ಸಹ ತನ್ನ ತಂಡಕ್ಕಾಗಿ ಆಡಬೇಕೆಂಬ ತುಡಿತವನ್ನು ಹೊಂದಿರಲಿಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ರೋಹಿತ್ ಶರ್ಮಾ ರೀತಿಯ ಅದ್ಬುತ ಆಟಗಾರ ಉಳಿವಿಗಾಗಿ ಆಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ ಮೈಕಲ್ ವಾನ್ ರವೀಂದ್ರ ಜಡೇಜಾ ಮತ್ತು ರಿಷಭ್ ಪಂತ್ ಕೂಡ ತಂಡಕ್ಕಾಗಿ ಆಡದೇ ತಮ್ಮ ವೈಯಕ್ತಿಕ ಉಳಿವಿಗಾಗಿ ಆಟವನ್ನಾಡಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಒಳ್ಳೆಯ ದಿನ ತಾನಾಗಿಯೇ ಹುಟ್ಟುವುದಿಲ್ಲ ಎಂದು ಭಾರತೀಯ ಆಟಗಾರರನ್ನು ಕುಟುಕಿದ ಮೈಕಲ್ ವಾನ್
ಸುಮ್ಮನೆ ಮೈದಾನಕ್ಕೆ ಬಂದು ಒಳ್ಳೆಯ ದಿನ ಸಿಗಲಿದೆ ಎಂದು ಬ್ಯಾಟ್ ಬೀಸಿದರೆ ಆಗುವುದಿಲ್ಲ, ಉತ್ತಮ ಆಟವನ್ನಾಡಿ ಒಳ್ಳೆಯ ಇನ್ನಿಂಗ್ಸ್ ಕಟ್ಟಿದರೆ ಒಳ್ಳೆಯ ದಿನ ನಿರ್ಮಾಣವಾಗುತ್ತದೆ ಎಂದು ವ್ಯಂಗ್ಯವಾಗಿ ಹೇಳುವುದರ ಮೂಲಕ ಟೀಮ್ ಇಂಡಿಯಾ ಆಟಗಾರರ ಕಳಪೆ ಪ್ರದರ್ಶನದ ಕುರಿತು ಮೈಕಲ್ ವಾನ್ ಕಾಲೆಳೆದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications