For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ಬೂಮ್ರಾ, ಸುಂದರ್ ಸ್ಥಾನಕ್ಕೆ ಉಮೇಶ್, ಕುಲ್‌ದೀಪ್ ಕಣಕ್ಕಿಳಿಯುವ ಸಂಭವ

India vs England: Umesh yadav and kuldeep may replace bumrah and sundar

ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯಕ್ಕಾಗಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಸಿದ್ಧತೆಯನ್ನು ನಡೆಸುತ್ತಿದೆ. ಆದರೆ ನಾಲ್ಕನೇ ಪಂದ್ಯವೂ ಸ್ಪಿನ್ ಟ್ರ್ಯಾಕ್‌ನಲ್ಲಿಯೇ ನಡೆಯುವ ಸಂಭವ ಹೆಚ್ಚಾಗಿದೆ. ಹೀಗಾಗಿ ಇದಕ್ಕೆ ಪೂರಕವಾಗಿ ಭಾರತ ತಂಡದಲ್ಲಿ ಬದಲಾವಣೆಗಳು ನಡೆಯಲಿದೆ ಎನ್ನಲಾಗುತ್ತಿದೆ.

ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬೂಮ್ರಾ ವೈಯಕ್ತಿಕ ಕಾರಣಗಳಿಂದ ಅಂತಿಮ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರ ಸ್ಥಾನಕ್ಕೆ ಇನ್ನೋರ್ವ ವೇಗಿ ಕಣಕ್ಕಿಳಿಯಲಿದ್ದಾರೆ. ಮತ್ತೊಂದೆಡೆ ಸ್ಪಿನ್ನರ್ ವಾಶಿಂಗ್ಟನ್ ಸುಂದರ್ ಅಂತಿಮ ಟೆಸ್ಟ್ ಪಂದ್ಯದಿಂದ ಹೊರಗುಳಿಯುವ ಸಂಭವವಿದೆ ಎನ್ನಲಾಗುತ್ತಿದೆ.

ಇನ್ನು ಜಸ್ಪ್ರೀತ್ ಬೂಮ್ರಾ ಸ್ಥಾನಕ್ಕೆ ಉಮೇಶ್ ಯಾದವ್ ಆಡುವ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆಗಳು ದಟ್ಟವಾಗಿದೆ. ಮತ್ತೊಂದೆಡೆ ವಾಶಿಂಗ್ಟನ್ ಸುಂದರ್ ಬದಲಿಗೆ ಕುಲ್ದೀಪ್ ಯಾದವ್ ಮತ್ತೆ ಆಡುವ ಬಳಗದಲ್ಲಿ ಆವಕಾಶವನ್ನು ಪಡೆದುಕೊಳ್ಳಬಹುದು. ಸುದೀರ್ಘ ಕಾಲದ ನಂತರ ಚೆನ್ನೈನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಕುಲ್‌ದೀಪ್ ಯಾದವ್ ಆಡುವ ಬಳಗದಲ್ಲಿ ಅವಕಾಶವನ್ನು ಪಡೆದಿದ್ದರು. ಆದರೆ ಮೂರನೇ ಪಂದ್ಯದಿಂದ ಹೊರಗುಳಿದಿದ್ದರು.

ಮತ್ತೊಂದೆಡೆ ಹೈದರಾಬಾದ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯ ಎರಡನೇ ದಿನಕ್ಕೆ ಅಂತ್ಯವಾದ ಬಳಿಕ ಪಿಚ್ ವಿಚಾರವಾಗಿ ಇಂಗ್ಲೆಂಡ್ ಮಾಜಿ ಆಟಗಾರರಿಂದ ಸಾಕಷ್ಟು ಟೀಕೆಗಳು ಕೇಳಿ ಬಂದಿದೆ. ಆದರೆ ಇದಕ್ಕೆ ಸಾಕಷ್ಟು ಬೆಂಬಲವನ್ನು ಕೂಡ ಕ್ರಿಕೆಟ್‌ನ ಮಾಜಿ ಆಟಗಾರರು ವ್ಯಕ್ತಡಿಸಿದ್ದಾರೆ.

ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 2-1 ಅಂತರದಿಂದ ಮುನ್ನಡೆಯನ್ನು ಸಾಧಿಸಿದ್ದಾರೆ. ಈ ಮೂಲಕ ಟೆಸ್ಟ್ ಸರಣಿಯನ್ನು ವಶಪಡಿಸಿಕೊಳ್ಳಲು ಭಾರತ ಸನಿಹದಲ್ಲಿದೆ.

Story first published: Monday, March 1, 2021, 14:27 [IST]
Other articles published on Mar 1, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+