ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

3ನೇ ಟೆಸ್ಟ್ ಪಂದ್ಯದಲ್ಲಿ ಧೋನಿ ದಾಖಲೆಯನ್ನು ಮುರಿಯುತ್ತಾರಾ ವಿರಾಟ್ ಕೊಹ್ಲಿ?

India vs England: Virat Kohli can surpass MS Dhonis Test captaincy record in the pink-ball Test

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೂರನೇ ಪಂದ್ಯ ಫೆಬ್ರವರಿ 24ರಿಂದ ಆರಂಭವಾಗಲಿದೆ. ಎರಡನೇ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 317 ರನ್‌ಗಳ ಅಂತರದ ಬೃಹತ್ ಗೆಲುವನ್ನು ಸಾಧಿಸಿದ್ದು ಸರಣಿ ಸಮಬಲಗೊಂಡಿದೆ. ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಗೆದ್ದು ಮುನ್ನಡೆ ಸಾಧಿಸುವ ಹುಮ್ಮಸ್ಸಿನಲ್ಲಿದೆ.

ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಲು ಯಶಸ್ವಿಯಾದರೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಾಯಕನಾಗಿ ದಾಖಲೆಯನ್ನು ಬರೆಯಲಿದ್ದಾರೆ. ಭಾರತ ಕ್ರಿಕೆಟ್ ತಂಡದ ನಾಯಕನಾಗಿ ಭಾರತದ ನೆಲದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ದಾಖಲೆ ವಿರಾಟ್ ಕೊಹ್ಲಿ ಪಾಲಾಗಲಿದೆ. ಕಳೆದ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ವಿರಾಟ್ ಕೊಹ್ಲಿ ಮಾಜಿ ನಾಯಕ ಎಂಎಸ್ ಧೋನಿ ಸಾಧನೆಯನ್ನು ಸರಿಗಟ್ಟಿದ್ದರು.

ಚುಟುಕು ಕ್ರಿಕೆಟ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು ಕಂಡ ಆಸ್ಟ್ರೇಲಿಯಾಚುಟುಕು ಕ್ರಿಕೆಟ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು ಕಂಡ ಆಸ್ಟ್ರೇಲಿಯಾ

ಭಾರತೀಯ ನೆಲದಲ್ಲಿ ನಾಯಕ ವಿರಾಟ್ ಕೊಹ್ಲಿ ಮಾಜಿ ನಾಯಕ ಎಂಎಸ್ ಧೋನಿಯ ಸಾಧನೆಯನ್ನು ಸರಿಗಟ್ಟಿದ್ದಾರೆ. ಟೀಮ್ ಇಂಡಿಯಾ ಪರವಾಗಿ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಭಾರತದಲ್ಲಿ ಗೆದ್ದ ದಾಖಲೆಯಲ್ಲಿ ವಿರಾಟ್ ಕೊಹ್ಲಿ ಹಾಗೂ ಎಂ ಎಸ್ ಧೋನಿ ಈಗ ಸಮನಾಗಿದ್ದಾರೆ. ಎಂಎಸ್ ಧೋನಿ ಹಾಗೂ ವಿರಾಟ್ ಕೊಹ್ಲಿ ಇಬ್ಬರೂ ಭಾರತದಲ್ಲಿ 21 ಗೆಲುವುಗಳನ್ನು ಸಾಧಿಸಿದ್ದಾರೆ.

ಭಾರತದಲ್ಲಿ ನಾಯಕನಾಗಿ ವಿರಾಟ್ ಕೊಹ್ಲಿ 28 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಇದರಲ್ಲಿ 21 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು 2 ಪಂದ್ಯಗಳಲ್ಲಿ ಸೋಲು ಕಂಡಿದ್ದಾರೆ. ಐದು ಪಂದ್ಯಗಳು ಡ್ರಾ ಫಲಿತಾಂಶವನ್ನು ಕಂಡಿದೆ. ಮತ್ತೊಂದೆಡೆ ನಾಯಕನಾಗಿ ಧೋನಿ 30 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದು 21 ಪಂದ್ಯಗಳಲ್ಲಿ ಗೆಲುವು 3 ಸೋಲು ಹಾಗೂ 6 ಡ್ರಾ ಫಲಿತಾಂಶವನ್ನು ಪಡೆದಿದ್ದಾರೆ.

ವಿಜಯ್ ಹಜಾರೆ ಟ್ರೋಫಿ: ಕೇರಳ ವೇಗಿ ಶ್ರೀಶಾಂತ್ ಅಪರೂಪದ ದಾಖಲೆವಿಜಯ್ ಹಜಾರೆ ಟ್ರೋಫಿ: ಕೇರಳ ವೇಗಿ ಶ್ರೀಶಾಂತ್ ಅಪರೂಪದ ದಾಖಲೆ

ಮುಂದಿನ ಎರಡು ಟೆಸ್ಟ್ ಪಂದ್ಯಗಳು ಅಹ್ಮದಾಬಾದ್‌ನ ಮೊಟೆರಾ ಸ್ಟೇಡಿಯಮ್‌ನಲ್ಲಿ ನಡೆಯಲಿದೆ. ಭಾರತ ಹಾಗ ಇಂಗ್ಲೆಂಡ್ ಎರಡು ತಂಡಗಳಿಗೂ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನ ಫೈನಲ್‌ನಲ್ಲಿ ಪಾಲ್ಗೊಳ್ಳಲು ಇದು ನಿರ್ಣಯಕವಾಗಿರಲಿದೆ. ಫೆಬ್ರವರಿ 24ರಿಂದ ಆರಂಭವಾಗುವ ಪಂದ್ಯ ಮೊಟೇರಾ ಸ್ಟೇಡಿಯಮ್‌ನಲ್ಲಿ ನಡೆಯುವ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯ ಎನಿಸಿದೆ.

Story first published: Monday, February 22, 2021, 18:49 [IST]
Other articles published on Feb 22, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X