For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ಎರಡನೇ ಇನ್ನಿಂಗ್ಸ್‌ನಲ್ಲಿಯೂ ಮುಂದುವರಿದ ವಿರಾಟ್ ಕೊಹ್ಲಿ ವೈಫಲ್ಯ

India vs England: Virat Kohli failed again in England tour Team India in trouble
Virat Kohli ಹೀಗೆ DRS ತೆಗೆದುಕೊಂಡಿದ್ದು ಬಹಳ ಒಳ್ಳೆಯದಾಯಿತು | Oneindia Kannada

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಪಂದ್ಯದಲ್ಲಿ ಬಿಗಿ ಹಿಡಿತವನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 27 ರನ್‌ಗಳ ಅಲ್ಪ ಮುನ್ನಡೆಯನ್ನು ಪಡೆಯುವಲ್ಲಿ ಯಶಸ್ವಿಯಾದ ಇಂಗ್ಲೆಂಡ್ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ ಬೌಲಿಂಗ್‌ನಲ್ಲಿ ಆರಂಭಿಕ ಯಶಸ್ಸು ಸಾಧಿಸಿದೆ. ಭಾರತದ ಪ್ರಮುಖ ಮೂವರು ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡುವಲ್ಲಿ ಇಂಗ್ಲೆಂಡ್ ತಂಡದ ಬೌಲರ್‌ಗಳು ಯಶಸ್ವಿಯಾಗಿದ್ದಾರೆ. ಈ ಮೂಲಕ ಭಾರತ ತಂಡಕ್ಕೆ ನಾಲ್ಕನೇ ದಿನ ಆಘಾತವನ್ನು ನೀಡಿದೆ ಆತಿಥೇಯ ಇಂಗ್ಲೆಂಡ್ ತಂಡ.

ಇನ್ನು ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಲಾರ್ಡ್ಸ್ ಅಂಗಳದಲ್ಲಿ ನಡೆದ ಎರಡನೇ ಇನ್ನಿಂಗ್ಸ್‌ನಲ್ಲಿಯೂ ದೊಡ್ಡ ಮೊತ್ತವನ್ನು ಗಳಿಸುವಲ್ಲಿ ವಿಫಲವಾಗಿದ್ದಾರೆ. ಈ ಮೂಲಕ ಇಂಗ್ಲೆಂಡ್ ನೆಲದಲ್ಲಿ ಭಾರತೀಯ ನಾಯಕನ ವೈಫಲ್ಯ ಮತ್ತೆ ಮುಂದುವರಿದಿದೆ. ಸುದೀರ್ಘ ಕಾಲದಿಂದ ಮೂರಂಕಿಯನ್ನು ಗಳಿಸಲು ವಿಫಲವಾಗುತ್ತಿರುವ ವಿರಾಟ್ ಕೊಹ್ಲಿ ಇಂಗ್ಲೆಂಡ್ ನೆಲದಲ್ಲಿ ಆಡಿದ ಪಂದ್ಯಗಳಲ್ಲಿ ಅರ್ಧ ಶತಕವನ್ನು ಗಳಿಸಲು ಕೂಡ ವಿರಾಟ್ ಕೊಹ್ಲಿ ವಿಫಲವಾಗುತ್ತಿದ್ದಾರೆ. ತಂಡದ ಅನುಭವಿ ಆಟಗಾರನಾಗಿರುವ ವಿರಾಟ್ ಕೊಹ್ಲಿ ನೀಡುತ್ತಿರುವ ಈ ಪ್ರದರ್ಶನ ಇಡೀ ತಂಡದ ಮೇಲೆ ಭಾರೀ ಪ್ರಮಾಣದಲ್ಲಿ ಹಿನ್ನಡೆಯನ್ನುಂಟು ಮಾಡುತ್ತಿದೆ.

ಮೊದಲ ಪಂದ್ಯದಲ್ಲಿಯೂ ವಿರಾಟ್ ರನ್‌ಗಳಿಸಲು ವಿಫಲ: ಇನ್ನು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿಯೂ ವಿರಾಟ್ ಕೊಹ್ಲಿ ಭಾರೀ ಹಿನ್ನೆಡೆಯನ್ನು ಅನುಭವಿಸಿದರು. ಕಳೆದ ಇಂಗ್ಲೆಂಡ್ ಪ್ರವಾಸದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಕಾರಣ ಈ ಬಾರಿಯೂ ವಿರಾಟ್ ಕೊಹ್ಲಿ ಮೇಲೆ ಸಾಕಷ್ಟು ನಿರೀಕ್ಷೆಗಳು ಇತ್ತು. ಆದರೆ ಮೊದಲ ಪಂದ್ಯದಲ್ಲಿ ಎದುರಿಸಿದ ಮೊದಲ ಎಸೆತದಲ್ಲಿಯೇ ವಿರಾಟ್ ಕೊಹ್ಲಿ ಅನುಭವು ಜೇಮ್ಸ್ ಆಂಡರ್ಸನ್‌ಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್ ಸೇರಿದರು. ಆಘಾತವನ್ನು ಅನುಭವಿಸಿದರು. ಅಂತಿಮ ದಿನ ಮಳೆ ಸುರಿದ ಕಾರಣ ಈ ಪಂದ್ಯ ಡ್ರಾದಲ್ಲಿ ಅಂತ್ಯವಾಗಿತ್ತು. ಎರಡನೇ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ವಿಕೆಟ್ ಪಡೆಯುವ ಅವಕಾಶ ದೊರೆತಿರಲಿಲ್ಲ.

ಉತ್ತಮ ಪ್ರದರ್ಶನ ನೀಡುವ ಭರವಸೆ ನೀಡಿದ ನಾಯಕ: ಇನ್ನು ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆ ಮೂಡಿಸಿದ್ದರು. 42 ರನ್‌ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು. ಉತ್ತಮ ಲಯದಲ್ಲಿದ್ದಂತೆ ಕಂಡು ಬಂದರೂ ವಿರಾಟ್ ಕೊಹ್ಲಿ ಉತ್ತಮ ಮೊತ್ತವನ್ನು ಗಳಿಸುವಲ್ಲಿ ವಿಫಲವಾದರು. ಇನ್ನು ಎರಡನೇ ಇನ್ನಿಂಗ್ಸ್ ಭಾರತದ ಪಾಲಿಗೆ ನಿರ್ಣಾಯಕವಾಗಿದ್ದು ಟೀಮ್ ಇಂಡಿಯಾ ನಾಯಕನಿಂದ ಜವಾಬ್ಧಾರಿಯ ಪ್ರದರ್ಶನವನ್ನು ನಿರೀಕ್ಷಿಸಲಾಗಿತ್ತು. ಆದರೆ ಈ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ 20 ರನ್‌ಗಳಿಗೆ ಔಟ್ ಆಗುವ ಮೂಲಕ ಟೀಮ್ ಇಂಡಿಯಾವನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ ಪಂದ್ಯದಲ್ಲಿಯೂ ಕೊಹ್ಲಿ ಆಘಾತ: ಇನ್ನು ಇಂಗ್ಲೆಂಡ್ ನೆಲದಲ್ಲಿಯೇ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿಯೂ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ನಿರೀಕ್ಷಿತ ಪ್ರಮಾಣದಲ್ಲಿ ರನ್ ಹರಿದು ಬಾರದಿರುವುದು ತಂಡಕ್ಕೆ ದೊಡ್ಡ ಆಘಾತ ನೀಡಿತ್ತು. ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ 44 ರನ್‌ಗಳಿಸಿದ್ದರೆ ಎರಡನೇ ಇನ್ನಿಂಗ್ಸ್‌ನಲ್ಲಿ 13 ರನ್‌ಗಳಿಗೆ ಆಟ ಮುಗಿಸಿದ್ದರು. ಹೀಗೆ ವಿರಾಟ್ ಕೊಹ್ಲಿ ಸತತವಾಗಿ ವಿಫಲವಾಗುತ್ತಿದ್ದಾರೆ.

ವಿರಾಟ್‌ಗಿಂತಲೂ ಹೀನಾಯ ಪ್ರದರ್ಶನ ನೀಡುತ್ತಿದ್ದಾರೆ ಇನ್ನಿಬ್ಬರು ಅನುಭವಿಗಳು: ಇನ್ನು ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಪ್ರಮುಖ ಬ್ಯಾಟ್ಸ್‌ಮನ್‌ಗಳಾದ ಚೇತೇಶ್ವರ್ ಪೂಜಾರ ಹಾಗೂ ಉಪನಾಯಕ ಅಜಿಂಕ್ಯ ರಹಾನೆ ಪ್ರದರ್ಶನ ಭಾರತದ ಪಾಲಿಗೆ ಅತ್ಯಂತ ದೊಡ್ಡ ಕಳವಳವಾಗಿ ಪರಿಣಮಿಸಿದೆ. ಇಂಗ್ಲೆಂಡ್ ವಿರುದ್ಧದ ಎರಡನೇ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಈ ಇಬ್ಬರು ನೀಡುವ ಪ್ರದರ್ಶನ ತಂಡದ ಫಲಿತಾಂಶ ದೃಷ್ಟಿಯಿಂದ ಹಾಗೂ ಮುಂದಿನ ಪಂದ್ಯಗಳಲ್ಲಿ ಈ ಇಬ್ಬರು ಆಟಗಾರಿರಿಗೆ ದೊರೆಯುವ ಅವಕಾಶದ ದೃಷ್ಟಿಯಿಂದ ಕೂಡ ಬಹಳ ಮುಖ್ಯವಾಗಲಿದೆ.

Story first published: Sunday, August 15, 2021, 18:48 [IST]
Other articles published on Aug 15, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+