ಇಂಗ್ಲೆಂಡ್ ವಿರುದ್ಧ ಗೆಲುವು: ನಾಯಕನಾಗಿ ಧೋನಿ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವನ್ನು ಸಾಧಿಸಿದೆ. ನಾಯಕನಾಗಿ ವಿರಾಟ್ ಕೊಹ್ಲಿ ಸತತ ಸೋಲು ಕಂಡ ಬಳಿಕ ಇದೀಗ ಭರ್ಜರಿ ಗೆಲುವಿನ ರುಚಿ ಕಂಡಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ನಾಯಕನಾಗಿ ವಿಶೇಷ ದಾಖಲೆಯನ್ನು ಭಾರತೀಯ ನೆಲದಲ್ಲಿ ಮಾಡಿದ್ದಾರೆ.
ಭಾರತೀಯ ನೆಲದಲ್ಲಿ ನಾಯಕ ವಿರಾಟ್ ಕೊಹ್ಲಿ ಮಾಜಿ ನಾಯಕ ಎಂಎಸ್ ಧೋನಿಯ ಸಾಧನೆಯನ್ನು ಸರಿಗಟ್ಟಿದ್ದಾರೆ. ಟೀಮ್ ಇಂಡಿಯಾ ಪರವಾಗಿ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಭಾರತದಲ್ಲಿ ಗೆದ್ದ ದಾಖಲೆಯಲ್ಲಿ ವಿರಾಟ್ ಕೊಹ್ಲಿ ಹಾಗೂ ಎಂ ಎಸ್ ಧೋನಿ ಈಗ ಸಮನಾಗಿದ್ದಾರೆ. ಎಂಎಸ್ ಧೋನಿ ಹಾಗೂ ವಿರಾಟ್ ಕೊಹ್ಲಿ ಇಬ್ಬರೂ ಭಾರತದಲ್ಲಿ 21 ಗೆಲುವುಗಳನ್ನು ಸಾಧಿಸಿದ್ದಾರೆ.
ಭಾರತದಲ್ಲಿ ನಾಯಕನಾಗಿ ವಿರಾಟ್ ಕೊಹ್ಲಿ 28 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಇದರಲ್ಲಿ 21 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು 2 ಪಂದ್ಯಗಳಲ್ಲಿ ಸೋಲು ಕಂಡಿದ್ದಾರೆ. ಐದು ಪಂದ್ಯಗಳು ಡ್ರಾ ಫಲಿತಾಂಶವನ್ನು ಕಂಡಿದೆ. ಮತ್ತೊಂದೆಡೆ ನಾಯಕನಾಗಿ ಧೋನಿ 30 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದು 21 ಪಂದ್ಯಗಳಲ್ಲಿ ಗೆಲುವು 3 ಸೋಲು ಹಾಗೂ 6 ಡ್ರಾ ಫಲಿತಾಂಶವನ್ನು ಪಡೆದಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆಲ್‌ರೌಂಡ್ ಪ್ರದರ್ಶನವನ್ನು ನೀಡುವ 317 ರನ್‌ಗಳ ಅಂತರದ ಭಾರೀ ಗೆಲುವನ್ನು ನಾಲ್ಕನೇ ದಿನದಲ್ಲಿ ಸಾಧಿಸಿದೆ. ಈ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಈಗ 1-1 ಅಂತರದಿಂದ ಸಮಬಲ ಸಾಧಿಸಿದೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಇನ್ನು ಎರಡು ಪಂದ್ಯಗಳು ಅಹ್ಮದಾಬಾದ್‌ನಲ್ಲಿ ನಡೆಯಲಿದೆ. ಇದರಲ್ಲಿ ಒಂದು ಗೆಲುವು ಸಾಧಿಸಿದರೆ ವಿರಾಟ್ ಕೊಹ್ಲಿ ಭಾರತದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ನಾಯಕ ಎಂಬ ದಾಖಲೆಯನ್ನು ಸಂಪೂರ್ಣವಾಗಿ ತಮ್ಮ ಹೆಸರಿಗೆ ಬರೆದುಕೊಳ್ಳಲಿದ್ದಾರೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications