ಭಾರತ vs ಇಂಗ್ಲೆಂಡ್: ಮಾಹಿ ನಾಯಕತ್ವದ ದಾಖಲೆ ಮುರಿಯಲು ಕೊಹ್ಲಿ ಸಜ್ಜು

ಕೊರೊನಾ ವೈರಸ್‌ನ ಬಳಿಕ ಭಾರತದಲ್ಲಿ ವರ್ಷಗಳ ನಂತರ ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್ ಆಯೋಜನೆಗೆ ದಿನಗಣನೆ ಆರಂಭವಾಗಿದೆ. ಇಂಗ್ಲೆಮಡ್ ವಿರುದ್ಧ ಫೆಬ್ರವರಿ 5 ರಿಂದ ಟೆಸ್ಟ್ ಸರಣಿಯನ್ನಾಡಲು ಟೀಮ್ ಇಂಡಿಯಾ ಸಜ್ಜಾಗುತ್ತಿದೆ. ಗಾಯದ ಸಮಸ್ಯೆಯಿಂದ ತೀವ್ರವಾಗಿ ಹಿನ್ನಡೆ ಕಂಡಿದ್ದರ ಮಧ್ಯೆಯೂ ಟೀಮ್ ಇಂಡಿಯಾ ಆಸಿಸ್ ವಿರುದ್ಧ ಐತಿಹಾಸಿಕ ಟೆಸ್ಟ್ ಸರಣಿ ಗೆದ್ದು ಬಂದಿದ್ದು ಟೀಮ್ ಇಂಡಿಯಾ ಪಾಲಿಗೆ ಸಾಕಷ್ಟು ಉತ್ಸಾಹ ಮೂಡಿಸಿದೆ.
ಈ ಮಧ್ಯೆ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಮೂರು ಪಂದ್ಯಗಳಿಂದ ಹೊರಗುಳಿದಿದ್ದ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಸರಣಿಗೆ ತಂಡವನ್ನು ಸೇರಿಕೊಂಡಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮಾಜಿ ನಾಯಕ ಎಂಎಸ್ ಧೋನಿ ಹೆಸರಿನಲ್ಲಿದ್ದ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಳ್ಳುವ ಅವಕಾಶವನ್ನು ಹೊಂದಿದ್ದಾರೆ.

ಧೋನಿ ಹೆಸರಿನಲ್ಲಿರುವ ದಾಖಲೆ
ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಈವರೆಗೆ 20 ಟೆಸ್ಟ್ ಪಂದ್ಯಗಳಲ್ಲಿ ಗೆಲುವನ್ನು ಸಾಧಿಸಿದೆ. ಟೀಮ್ ಇಂಡಿಯಾದ ನಾಯಕನಾಗಿ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದಿರುವ ದಾಖಲೆ ಈಗ ಎಂಎಸ್ ಧೋನಿ ಹೆಸರಿನಲ್ಲಿದ್ದು ಧೋನಿ 21 ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾಗೆ ಗೆಲುವನ್ನು ನೀಡಿದ್ದಾರೆ. ಮುಂದಿನ ಸರಣಿಯಲ್ಲಿ ಎರಡು ಪಂದ್ಯಗಳನ್ನು ಗೆದ್ದರೆ ಈ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮ ಹೆಸರಿಗೆ ಬರೆದುಕೊಳ್ಳಲಿದ್ದಾರೆ.

ಸರಣಿ ಗೆಲುವಿನ ದಾಖಲೆಗೆ ಒಂದೇ ಮೆಟ್ಟಿಲು
ವಿರಾಟ್ ಕೊಹ್ಲಿ ಈಗಾಗಲೇ ಭಾರತದಲ್ಲಿ ಅತಿ ಹೆಚ್ಚಿ ಸರಣಿ ಗೆಲುವು ಕಂಡಿರುವ ದಾಖಲೆಯನ್ನು ಮಹೇಂದ್ರ ಸಿಂಗ್ ಧೋನಿಯನ್ನು ಸರಿಗಟ್ಟಿದ್ದು ಇಂಗ್ಲೆಂಡ್ ವಿರುದ್ಧ ಗೆದ್ದರೆ ಆ ದಾಖಲೆಯೂ ಸಂಪೂರ್ಣವಾಗಿ ವಿರಾಟ್ ಕೊಹ್ಲಿ ಪಾಲಾಗಲಿದೆ.

ಇಂಗ್ಲೆಂಡ್ ವಿರುದ್ಧ ಸರಣಿಗೆ ಸಜ್ಜು
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಫೆಬ್ರವರಿ 5 ರಿಂದ ಆರಂಭವಾಗಲಿದ್ದು ಮೊದಲ ಎರಡು ಪಂದ್ಯಗಳು ಚೆನ್ನೈನಲ್ಲಿ ಆಯೋಜನೆಯಾಗಲಿದೆ. ಅದಾದ ಬಳಿಕ ಮುಂದಿನ ಎರಡು ಪಂದ್ಯಗಳು ಹೊಸದಾಗಿ ನಿರ್ಮಾಣವಾಗಿರುವ ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಮ್ ಅಹ್ಮದಾಬಾದ್‌ನ ಮೊಟೆರಾದಲ್ಲಿ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications