ಭಾರತ vs ಇಂಗ್ಲೆಂಡ್: ಈ ಕೆಟ್ಟ ದಾಖಲೆಯಲ್ಲಿ ಧೋನಿಯನ್ನೂ ಹಿಂದಿಕ್ಕಿದ ವಿರಾಟ್ ಕೊಹ್ಲಿ!

ಭಾರತ ಮತ್ತು ಇಂಗ್ಲೆಂಡ್ ನಡುವಿನ ಬಹುನಿರೀಕ್ಷಿತ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲನೇ ಪಂದ್ಯ ಆಗಸ್ಟ್ 4ರ ಬುಧವಾರದಂದು ಆರಂಭವಾಗಿದೆ. ಇಂಗ್ಲೆಂಡ್‌ನ ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದು ಈ ಮೊದಲು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್ ತಂಡ ಹೇಳಿಕೊಳ್ಳುವಂತಹ ಪ್ರದರ್ಶನವನ್ನೇನೂ ನೀಡದೆ 183 ರನ್‌ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಮುಗಿಸಿದೆ. ಹೀಗೆ ಭಾರತದ ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಿದ ನೆರವಿನಿಂದ ಇಂಗ್ಲೆಂಡ್ ತಂಡವನ್ನು 183 ರನ್‌ಗಳಿಗೆ ಕಟ್ಟಿಹಾಕಿದ ಟೀಮ್ ಇಂಡಿಯಾ ಮೊದಲ ದಿನವೇ ತನ್ನ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್‌ನ್ನೂ ಆರಂಭಿಸಿತು.
ಮೊದಲ ದಿನ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮ ಮತ್ತು ಕೆಎಲ್ ರಾಹುಲ್ ಉತ್ತಮ ಆಟ ಆಡಿದರು. ಟೀಮ್ ಇಂಡಿಯಾ ಮೊದಲ ದಿನದಾಟದಂತ್ಯಕ್ಕೆ ಯಾವುದೇ ವಿಕೆಟ್ ಕಳೆದುಕೊಳ್ಳದೆ 21 ರನ್ ಗಳಿಸಿತ್ತು. ನಂತರ ಎರಡನೇ ದಿನದ ಆಟವನ್ನು ಆರಂಭಿಸಿದ ರೋಹಿತ್ ಶರ್ಮ ಮತ್ತು ಕೆಎಲ್ ರಾಹುಲ್ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದರು. ರೋಹಿತ್ ಶರ್ಮಾ 36 ರನ್ ಗಳಿಸಿ ರಾಬಿನ್ಸನ್ ಎಸೆತದಲ್ಲಿ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರು. ರೋಹಿತ್ ಶರ್ಮಾ ಜೊತೆ ಆರಂಭಿಕ ಆಟಗಾರನಾಗಿ ಕಣಕ್ಕಿಳಿದಿದ್ದ ಕೆ ಎಲ್ ರಾಹುಲ್ ಯಶಸ್ವಿ ಅರ್ಧ ಶತಕವನ್ನು ಪೂರೈಸಿ ಮಿಂಚುತ್ತಿದ್ದಾರೆ. ಇನ್ನು ಟೆಸ್ಟ್ ಸ್ಪೆಷಲಿಸ್ಟ್ ಎಂದೇ ಖ್ಯಾತಿಯನ್ನು ಪಡೆದಿರುವ ಚೇತೇಶ್ವರ ಪೂಜಾರ 4 ರನ್ ಗಳಿಸಿ ಔಟ್ ಆದರೆ ನಾಯಕ ವಿರಾಟ್ ಕೊಹ್ಲಿ ಮೊದಲ ಎಸೆತದಲ್ಲಿಯೇ ಜೇಮ್ಸ್ ಆ್ಯಂಡರ್ಸನ್ ಎಸೆತದಲ್ಲಿ ಜೋಸ್ ಬಟ್ಲರ್‌ಗೆ ಕ್ಯಾಚ್ ನೀಡುವ ಮೂಲಕ ಗೋಲ್ಡನ್ ಡಕ್ಔಟ್ ಆದರು. ಹೀಗೆ ಮೊದಲನೇ ಎಸೆತದಲ್ಲಿಯೇ ಔಟ್ ಆಗುವುದರ ಮೂಲಕ ವಿರಾಟ್ ಕೊಹ್ಲಿ ಬೇಡದ ಕೆಟ್ಟ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಟೆಸ್ಟ್ ಇತಿಹಾಸದಲ್ಲಿ ಅತಿಹೆಚ್ಚು ಬಾರಿ ಶೂನ್ಯ ಸುತ್ತಿದ ಭಾರತೀಯ ನಾಯಕ ವಿರಾಟ್ ಕೊಹ್ಲಿ!
ಹೀಗೆ ಆ್ಯಂಡರ್ಸನ್ ಎಸೆತದಲ್ಲಿ ಕ್ಯಾಚ್ ನೀಡುವ ಮೂಲಕ ಮೊದಲ ಎಸೆತದಲ್ಲಿಯೇ ವಿಕೆಟ್ ಒಪ್ಪಿಸಿ ಪೆವಿಲಿಯನ್ ಕಡೆ ನಡೆದ ವಿರಾಟ್ ಕೊಹ್ಲಿ ಬೇಡವಾಗಿದ್ದ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಟೆಸ್ಟ್ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಡಕ್ಔಟ್ ಆಗಿರುವ ಭಾರತ ತಂಡದ ನಾಯಕ ಎಂಬ ಕೆಟ್ಟ ದಾಖಲೆ ಇದೀಗ ವಿರಾಟ್ ಕೊಹ್ಲಿ ಹೆಸರು ಸೇರ್ಪಡೆಯಾಗಿದೆ. ಟೆಸ್ಟ್ ಇತಿಹಾಸದಲ್ಲಿ ಇದುವರೆಗೂ 9 ಬಾರಿ ಶೂನ್ಯ ಸುತ್ತಿರುವ ವಿರಾಟ್ ಕೊಹ್ಲಿ ಈ ಕೆಟ್ಟ ದಾಖಲೆಗೆ ಪಾತ್ರರಾಗಿದ್ದಾರೆ.

ಧೋನಿಯನ್ನು ಹಿಂದಿಕ್ಕಿದ ವಿರಾಟ್ ಕೊಹ್ಲಿ
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ ಡಕ್ಔಟ್ ಆಗುವುದರ ಮೂಲಕ ವಿರಾಟ್ ಕೊಹ್ಲಿ ಒಟ್ಟು 9 ಬಾರಿ ಟೆಸ್ಟ್ ಡಕ್ಔಟ್ ಆಗಿದ್ದಾರೆ. ಈ ಮೂಲಕ ಟೆಸ್ಟ್ ಪಂದ್ಯಗಳಲ್ಲಿ ಅತಿಹೆಚ್ಚು ಬಾರಿ ಡಕ್ ಔಟ್ ಆಗಿರುವ ಭಾರತದ ನಾಯಕ ಎಂಬ ಕೆಟ್ಟ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮ ಹೆಸರಿಗೆ ಬರೆದುಕೊಂಡಿದ್ದು ಈ ಕೆಟ್ಟ ದಾಖಲೆ ಈ ಹಿಂದೆ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೆಸರಲ್ಲಿತ್ತು. ಮಹೇಂದ್ರ ಸಿಂಗ್ ಧೋನಿ ಟೆಸ್ಟ್ ಇತಿಹಾಸದಲ್ಲಿ 8 ಬಾರಿ ಶೂನ್ಯ ಸುತ್ತಿದ್ದರು. ಇದೀಗ 9 ಬಾರಿ ಶೂನ್ಯ ಸುತ್ತುವುದರ ಮೂಲಕ ವಿರಾಟ್ ಕೊಹ್ಲಿ ಈ ಕೆಟ್ಟ ದಾಖಲೆಯಲ್ಲಿ ಮಹೇಂದ್ರ ಸಿಂಗ್ ಧೋನಿಯನ್ನು ಹಿಂದಿಕ್ಕಿದ್ದಾರೆ.

ಟೆಸ್ಟ್ ಇತಿಹಾಸದಲ್ಲಿ ಅತಿ ಹೆಚ್ಚು ಶೂನ್ಯ ಸುತ್ತಿರುವ ಟಾಪ್ 3 ಭಾರತೀಯ ನಾಯಕರು
ಟೆಸ್ಟ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಶೂನ್ಯ ಸುತ್ತಿರುವ ಟಾಪ್ 3 ಭಾರತೀಯ ನಾಯಕರೆಂದರೆ: ವಿರಾಟ್ ಕೊಹ್ಲಿ 9 ಬಾರಿ, ಮಹೇಂದ್ರ ಸಿಂಗ್ ಧೋನಿ 8 ಬಾರಿ ಮತ್ತು ಮನ್ಸೂರ್ ಅಲಿಖಾನ್ ಪಟೌಡಿ 7 ಬಾರಿ..
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications