2021ರಲ್ಲಿ 3ನೇ ಶೂನ್ಯ ಸಂಪಾದಿಸಿದ ಕೊಹ್ಲಿ, ಬೇಡದ ಪಟ್ಟಿಯಲ್ಲಿ ಗಂಗೂಲಿಯನ್ನು ಹಿಂದಿಕ್ಕಿದ ವಿರಾಟ್

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟಿ20 ಸರಣಿಯಲ್ಲೂ ನೀರಸ ಪ್ರದರ್ಶನವನ್ನು ಮುಂದುವರಿಸಿದ್ದಾರೆ. ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಒಂದೂ ರನ್ ಗಳಿಸದೆ ವಿಕೆಟ್ ಒಪ್ಪಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಅಭಿಮಾನಿಗಳಿಗೆ ಆಘಾತವನ್ನು ನೀಡಿದ್ದಾರೆ.
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 2021ನೇ ವರ್ಷದಲ್ಲಿ ಮೂರನೇ ಶೂನ್ಯ ಸಂಪಾದನೆ ಇದಾಗಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಆದಿಲ್ ರಶೀದ್ ಎಸೆತದಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಚೆನ್ನೈನಲ್ಲಿ ನಡೆದ ದ್ವಿತೀಯ ಟೆಸ್ಟ್‌ನಲ್ಲಿ ಮೊದಲ ಬಾರಿಗೆ ಹಾಗೂ ಅಹ್ಮದಾಬಾದ್‌ನಲ್ಲಿ ನಡೆದ ಅಂತಿಮ ಟೆಸ್ಟ್‌ನಲ್ಲಿ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗಿದ್ದರು.
ನಾಯಕ ವಿರಾಟ್ ಕೊಹ್ಲಿ ಕಳೆದ ಎರಡು ವರ್ಷಗಳಲ್ಲಿ ಆದಿಲ್ ರಶೀದ್‌ಗೆ ಆರನೇ ಬಾರಿ ವಿಕೆಟ್ ನೀಡಿ ನಿರ್ಗಮಿಸಿದಂತಾಗಿದೆ. ಈ ಮೂಲಕ ವಿರಾಟ್ ಕೊಹ್ಲಿ ಮೂರನೇ ಬಾರಿಗೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಹೊರನಡೆದಿದ್ದಾರೆ.
ಇನ್ನು ಈ ಶೂನ್ಯ ಸಂಪಾದನೆಯ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬೇಡದ ಈ ಪಟ್ಟಿಯಲ್ಲಿ ಸೌರವ್ ಗಂಗೂಲಿಯನ್ನು ವಿರಾಟ್ ಕೊಹ್ಲಿ ಹಿಂದಿಕ್ಕಿದ್ದಾರೆ. ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 14ನೇ ಬಾರಿಗೆ ಡಕ್‌ಔಟ್ ಆಗಿದ್ದಾರೆ. ಈ ಮೂಲಕ ಈ ಪಟ್ಟಿಯಲ್ಲಿ ಹ್ಯಾನ್ಸಿ ಕ್ರೋನ್ಜೆ ಜೊತೆಗೆ 5ನೇ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications