Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಇಂಗ್ಲೆಂಡ್ ಪ್ರಥಮ ಟೆಸ್ಟ್‌; ಭಾರತ ತಂಡದ ಆಡುವ ಬಳಗದ ಕುರಿತು ಮಾಹಿತಿ ಹಂಚಿಕೊಂಡ ಕೊಹ್ಲಿ

India vs England: We will announce the XI tomorrow before we go for the toss says Virat Kohli
ಪ್ಲೇಯಿಂಗ್ ಇಲೆವೆನ್ಗೊಸ್ಕರ ಕಾಯುತ್ತಿರುವ ಅಭಿಮಾನಿಗಳು! | Oneindia Kannada

ಕಳೆದ ತಿಂಗಳು ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದ ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ ತಂಡ ಮೊದಲನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ಸೋಲನುಭವಿಸಿತು. ಈ ಪಂದ್ಯ ಮುಗಿದ ನಂತರ ಇಂಗ್ಲೆಂಡ್‌ನಲ್ಲಿ ಉಳಿದುಕೊಂಡಿರುವ ಟೀಮ್ ಇಂಡಿಯಾ ತಂಡದ ಆಟಗಾರರು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ತಯಾರಿಗಳನ್ನು ನಡೆಸಿಕೊಂಡಿದ್ದಾರೆ.

ಇನ್ನು ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ಇದೇ ಬುಧವಾರದಿಂದ ( ಆಗಸ್ಟ್ 4 ) ಆರಂಭವಾಗಲಿದ್ದು ಈ ಪಂದ್ಯದ ಮೇಲೆ ಕ್ರೀಡಾಭಿಮಾನಿಗಳಿಗೆ ನಿರೀಕ್ಷೆಯ ಜತೆಗೆ ಕುತೂಹಲ ಹೆಚ್ಚಾಗಿದೆ. ಭಾರತದ ಪರ ಆರಂಭಿಕ ಆಟಗಾರರಾಗಿ ರೋಹಿತ್ ಶರ್ಮಾ ಜೊತೆ ಯಾರು ಕಣಕ್ಕಿಳಿಯಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲಿಯೂ ಮೂಡಿದೆ. ಶುಬ್ಮನ್ ಗಿಲ್ ಗಾಯದ ಸಮಸ್ಯೆಯಿಂದ ಸರಣಿಯಿಂದ ಹೊರಗುಳಿದಿದ್ದಾರೆ, ಅತ್ತ ಮಯಾಂಕ್ ಅಗರ್ವಾಲ್ ಕೂಡ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು ಮೊದಲನೇ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

ಹೀಗಾಗಿ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ಜತೆ ಯಾವ ಆಟಗಾರ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ. ರೋಹಿತ್ ಶರ್ಮಾ ಜತೆ ಕೆಎಲ್ ರಾಹುಲ್ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಗಳು ಕೂಡ ಹೆಚ್ಚಾಗಿ ಹರಿದಾಡುತ್ತಿದ್ದು ಇದೀಗ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮಾತನಾಡಿದ್ದು ಈ ಎಲ್ಲ ಕುತೂಹಲಗಳಿಗೆ ತೆರೆ ಎಳೆದಿದ್ದಾರೆ. ಎಲ್ಲೆಡೆ ಭಾರೀ ಚರ್ಚೆಯಾಗುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾಗವಹಿಸಲಿರುವ ಟೀಮ್ ಇಂಡಿಯಾದ ಸಂಭಾವ್ಯ ಆಡುವ ಬಳಗದ ಕುರಿತು ವಿರಾಟ್ ಕೊಹ್ಲಿ ಈ ಕೆಳಕಂಡಂತೆ ಹೇಳಿಕೆ ನೀಡಿದ್ದಾರೆ.

ಟಾಸ್‌ಗೂ ಮುನ್ನ ಆಟಗಾರರ ಮಾಹಿತಿ ಹಂಚಿಕೊಳ್ಳುತ್ತೇವೆ

ಟಾಸ್‌ಗೂ ಮುನ್ನ ಆಟಗಾರರ ಮಾಹಿತಿ ಹಂಚಿಕೊಳ್ಳುತ್ತೇವೆ

ಇಂಗ್ಲೆಂಡ್ ವಿರುದ್ಧದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಪರ ಯಾವ ಯಾವ ಆಟಗಾರರು ಕಣಕ್ಕಿಳಿಯಲಿದ್ದಾರೆ ಎಂಬ ಮಾಹಿತಿ ಎಲ್ಲರಲ್ಲಿಯೂ ಹೆಚ್ಚಾಗಿದೆ. ಈ ಹಿಂದೆ ನ್ಯೂಜಿಲೆಂಡ್ ವಿರುದ್ಧ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯಕ್ಕೆ ಇನ್ನೂ ಒಂದು ದಿನ ಬಾಕಿ ಇರುವಾಗಲೇ ಭಾರತದ ಆಡುವ ಬಳಗವನ್ನು ಘೋಷಣೆ ಮಾಡಲಾಗಿತ್ತು. ಆದರೆ ಈ ಬಾರಿ ಟಾಸ್ ನಡೆಯುವ ಕೆಲ ಸಮಯಕ್ಕೂ ಮುಂಚೆ ಯಾವ ಯಾವ ಆಟಗಾರರು ಮೊದಲನೇ ಪಂದ್ಯದಲ್ಲಿ ಭಾಗವಹಿಸಲಿದ್ದಾರೆ ಎಂಬ ಮಾಹಿತಿಯನ್ನು ಹಂಚಿಕೊಳ್ಳುತ್ತೇವೆ ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

14 ವರ್ಷಗಳ ನಂತರ ಇಂಗ್ಲೆಂಡ್ ನೆಲದಲ್ಲಿ ಗೆಲುವಿನ ನಿರೀಕ್ಷೆಯಲ್ಲಿ ಭಾರತೀಯರು

14 ವರ್ಷಗಳ ನಂತರ ಇಂಗ್ಲೆಂಡ್ ನೆಲದಲ್ಲಿ ಗೆಲುವಿನ ನಿರೀಕ್ಷೆಯಲ್ಲಿ ಭಾರತೀಯರು

2007ರಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಇಂಗ್ಲೆಂಡ್ ನೆಲದಲ್ಲಿ ಸರಣಿ ಗೆಲುವನ್ನು ದಾಖಲಿಸಿತ್ತು. ಇದಾದ ಬಳಿಕ 2011, 2014 ಹಾಗೂ 2018ರ ಸರಣಿಗಳಲ್ಲಿ ಸೋಲುವುದರ ಮೂಲಕ ಇಂಗ್ಲೆಂಡ್ ನೆಲದಲ್ಲಿ ಟೀಮ್ ಇಂಡಿಯಾ 14 ವರ್ಷಗಳಿಂದ ಯಾವುದೇ ಸರಣಿಯನ್ನು ಗೆದ್ದಿಲ್ಲ. ಆದರೆ ಈ ಬಾರಿ ಇಂಗ್ಲೆಂಡ್ ನೆಲದಲ್ಲಿ ಕೊಹ್ಲಿ ಪಡೆ ಗೆಲುವನ್ನು ಸಾಧಿಸಲಿದ್ದು ಈ ಕೆಟ್ಟ ದಾಖಲಿಗೆ ಪೂರ್ವ ವಿರಾಮ ಇಡಲಾಗುತ್ತದೆ ಎನ್ನಲಾಗುತ್ತಿದೆ. ಮೊದಲನೇ ಪಂದ್ಯ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ಈ ಕ್ರೀಡಾಂಗಣದಲ್ಲಿ ಭಾರತ ತಂಡ ಉತ್ತಮ ಪಂದ್ಯಗಳನ್ನಾಡಿದೆ, ಹೀಗಾಗಿ ಸರಣಿಯಲ್ಲಿ ಶುಭಾರಂಭ ಮಾಡುವ ಮೂಲಕ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವನ್ನು ಕೊಹ್ಲಿ ವ್ಯಕ್ತಪಡಿಸಿದ್ದಾರೆ.

ಆರಂಭಿಕರಾಗಿ ರೋಹಿತ್ ಜತೆ ಯಾರು ಕಣಕ್ಕಿಳಿಯಬಹುದು?

ಆರಂಭಿಕರಾಗಿ ರೋಹಿತ್ ಜತೆ ಯಾರು ಕಣಕ್ಕಿಳಿಯಬಹುದು?

ರೋಹಿತ್ ಶರ್ಮಾ ಜತೆ ಆರಂಭಿಕ ಆಟಗಾರನಾಗಿ ಕೆಎಲ್ ರಾಹುಲ್ ಕಣಕ್ಕಿಳಿಯಲಿದ್ದಾರೆ ಎನ್ನಲಾಗುತ್ತಿದ್ದು ಮತ್ತೊಂದೆಡೆ ರೋಹಿತ್ ಶರ್ಮಾ ಜತೆ ಆರಂಭಿಕರಾಗಿ ಅಭಿಮನ್ಯು ಈಶ್ವರನ್ ಕಣಕ್ಕಿಳಿಯುತ್ತಾರೆ ಎನ್ನುವ ಸುದ್ದಿ ಕೂಡ ಇದೆ. ಇವರ ಜತೆಗೆ ಚೇತೇಶ್ವರ್ ಪೂಜಾರ ಮತ್ತು ಹನುಮ ವಿಹಾರಿ ಕೂಡ ಆರಂಭಿಕ ಆಟಗಾರರಾಗಿ ಕಣಕ್ಕಿಳಿಯುವ ನಿರೀಕ್ಷೆಗಳು ಇವೆ.

Story first published: Tuesday, August 3, 2021, 20:44 [IST]
Other articles published on Aug 3, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+