Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ವಿಶ್ವಕಪ್‌ ಅಭ್ಯಾಸ ಪಂದ್ಯ: ಭಾರತಕ್ಕೆ ಇಂದು ಇಂಗ್ಲೆಂಡ್ ತಂಡದ ಸವಾಲು: ಪಂದ್ಯ ಯಾವಾಗ? ನೇರಪ್ರಸಾರದ ಮಾಹಿತಿ

ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಇಂದು ಗುವಾಹಟಿಯಲ್ಲಿ ವಿಶ್ವಕಪ್‌ಗೂ ಮುನ್ನ ನಡೆಯಲಿರುವ ಅಭ್ಯಾಸ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಎರಡು ಪಂದ್ಯಗಳ ಅಭ್ಯಾಸ ಪಂದ್ಯದಲ್ಲಿ ಇಂದು ಮೊದಲ ಪಂದ್ಯದಲ್ಲಿ ಭಾರತ ಕಣಕ್ಕಿಳಿಯಲಿದ್ದು ವಿಶ್ವಕಪ್‌ಗೆ ಮುನ್ನ ಕೊನೆಯ ಸಿದ್ಧತೆಯನ್ನು ನಡೆಸಲಿದೆ.

ಭಾರತ ಈ ವಿಶ್ವಕಪ್ ಟೂರ್ಇಗೆ ಭರ್ಜರಿ ಸಿದ್ಧತೆಯೊಂದಿಗೆ ಬಂದಿದೆ. ಏಷ್ಯಾಕಪ್ ಟೂರ್ನಿಯಲ್ಲಿ ಚಾಂಪಿಯನ್ ಎನಿಸಿಕೊಂಡಿರುವ ಭಾರತ ಬಳಿಕ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 2-1 ಅಂತರದಿಂದ ಗೆದ್ದು ಬೀಗಿತ್ತು. ಅಲ್ಲದೆ ಈ ಸಂದರ್ಭದಲ್ಲಿ ಭಾರತ ತಂಡ ಏಕದಿನ ಮಾದರಿಯಲ್ಲಿ ನಂಬರ್1 ಸ್ಥಾನವನ್ನು ಕೂಡ ಅಲಂಕರಿಸಿದೆ. ಹೀಗಾಗಿ ಈ ಬಾರಿಯ ವಿಶ್ವಕಪ್ ಟೂರ್ನಿಗೆ ಅತ್ಯಂತ ಆತ್ಮವಿಶ್ವಾಸದಿಂದ ಭಾರತ ತಂಡ ಸಜ್ಜಾಗಿದೆ.

India vs England, World Cup Warm-up Match: pitch report, live streaming and other details

ಇನ್ನು ಇಂಗ್ಲೆಂಡ್ ತಂಡ ಕೂಡ ಈ ಬಾರಿಯ ವಿರ್ಶವಕಪ್ ಟೂರ್ನಿ ಗೆಲ್ಲುವ ಅತ್ಯಂತ ನೆಚ್ಚಿನ ತಂಡಗಳಲ್ಲಿ ಒಂದಾಗಿದೆ. ಹೀಗಾಗಿ ಇಂದಿನ ಅಭ್ಯಾಸ ಪಂದ್ಯ ತೀವ್ರ ಕುತೂಹಲ ಕೆರಳಿಸಿದೆ.

ಅಭ್ಯಾಸ ಪಂದ್ಯದ ಸಮಯ, ಸ್ಥಳ ಹಾಗೂ ನೇರಪ್ರಸಾರದ ಮಾಹಿತಿ

ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಅಭ್ಯಾಸ ಪಂದ್ಯ ಗುವಾಹಟಿಯ ಬರ್ಸಾಪರ ಕ್ರಿಕೆಟ್ ಮೈದಾನದಲ್ಲಿ ಆಯೋಜನೆಯಾಗಲಿದೆ. ಮಧ್ಯಾಹ್ನ 2 ಗಂಟೆಗೆ ಈ ಪಂದ್ಯ ಆರಂಭವಾಗಲಿದ್ದು 1:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಈ ಪಂದ್ಯ ಸ್ಟಾರ್ ಸ್ಪೋರ್ಟ್ಸ್ 1, ಸ್ಟಾರ್ ಸ್ಪೋರ್ಟ್ಸ್ 1 ಹೆಚ್‌ಡಿ ಹಾಗೂ ಸ್ಟಾರ್ ಸ್ಪೋರ್ಟ್ಸ್ 1 ಹಿಂದಿ ವಾಹಿನಿಯಲ್ಲಿ ನೇರಪ್ರಸಾರವಾಗಲಿದೆ. ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯದ ವೀಕ್ಷಣೆಗೆ ಅವಕಾಶವಿದೆ.

ಪಿಚ್ ರಿಪೋರ್ಟ್ ಹವಾಮಾನ ವರದಿ
ಗುವಾಹಟಿಯ ಪಿಚ್ ಸಾಮಾನ್ಯವಾಗಿ ಬ್ಯಾಟಿಂಗ್‌ಗೆ ಪೂರಕವಾದ ಪಿಚ್ ಆಗಿದೆ. ಕಳೆದ ಐಪಿಎಲ್‌ನಲ್ಲಿ ಈ ಮೈದಾನದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಎರಡು ಆತಿಥೇಯ ಪಂದ್ಯಗಳನ್ನು ಇಲ್ಲಿ ಆಯೋಜನೆ ಮಾಡಲಾಗಿತ್ತು. ಎರಡು ಸಂದರ್ಭದಲ್ಲಿಯೂ ಪಿಚ್ ಬ್ಯಾಟರ್‌ಗಳ ಪಾಲಿಗೆ ಸ್ವರ್ಗವಾಗಿ ಪರಿಣಮಿಸಿತ್ತು. ಹಾಗಾಗಿ ಇಂದಿನ ಪಂದ್ಯದಲ್ಲಿಯೂ ಬ್ಯಾಟರ್‌ಗಳಿಗೆ ಸ್ವಗವೆನಿಸುವ ಸಾಧ್ಯತೆಯಿದೆ.

ಹವಾಮಾನ ವರದಿ: ಇನ್ನು ಮಧ್ತಾಹ್ನ ಬಳಿಕ ಈ ಗುವಾಹಟಿಯಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಕೆಲ ಕಾಲ ಪಂದ್ಯಕ್ಕೆ ಮಳೆ ಅಡ್ಡಿಯುಂಟು ಮಾಡುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ .

ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್, ಗಸ್ ಅಟ್ಕಿನ್ಸನ್, ಜಾನಿ ಬೈರ್‌ಸ್ಟೋ, ಸ್ಯಾಮ್ ಕರ್ರಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಆದಿಲ್ ರಶೀದ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಮಾರ್ಕ್ ವುಡ್ ಮತ್ತು ಕ್ರಿಸ್ ವೋಕ್ಸ್.

Story first published: Saturday, September 30, 2023, 8:47 [IST]
Other articles published on Sep 30, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+