ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಐರ್ಲೆಂಡ್: ಮೊದಲ ಪಂದ್ಯದಲ್ಲಿ ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ

India vs Ireland, 1st T20I, India won by 7 wickets against Ireland
Photo Credit: bcci twitter

ಭಾರತ ಹಾಗು ಐರ್ಲೆಂಡ್ ವಿರುದ್ಧಧ ಮೊದಲ ಟಿ20 ಪಂದ್ಯದಲ್ಲಿ ಭಾರತ ಭರ್ಜರಿ ಜಯ ಸಾಧಿಸಿದೆ. ಮಳೆಯಿಂದಾಗಿ 12 ಓವರ್‌ಗಳಿಗೆ ಸೀಮಿತವಾದ ಪಂದ್ಯದಲ್ಲಿ ಐರ್ಲೆಂಡ್ ತಂಡ ಮೊದಲಿಗೆ ಬ್ಯಾಟಿಂಗ್ ಮಾಡಿ ಸವಾಲಿನ ಗುರಿ ನಿಗದಿಪಡಿಸಿತು. ಆದರೆ ಭಾರತ ತಂಡ ಈ ಮೊತ್ತವನ್ನು ಸುಲಭವಾಗಿ ಬೆನ್ನಟ್ಟುವಲ್ಲಿ ಯಶಸ್ವಿಯಾಗಿದೆ.

ಮೊದಲಿಗೆ ಬ್ಯಾಟಿಂಗ್ ನಡೆಸಿದ ಐರ್ಲೆಂಡ್ ತಂಡ ನಿಗದಿತ 12 ಓವರ್‌ಗಳಲ್ಲಿ 108 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿತು. ಐರ್ಲೆಂಡ್ ತಂಡದ ಪರವಾಗಿ ಹ್ಯಾರಿ ಟೆಕ್ಟರ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. 33 ಎಸೆತಗಳನ್ನು ಎದುರಿಸಿದ ಟೆಕ್ಟರ್ 64 ರನ್‌ಗಳಿಸಿದ್ದಾರೆ. ಈ ಇನ್ನಿಂಗ್ಸ್‌ನಲ್ಲಿ ಅವರಿಂದ ಆರು ಬೌಂಡರಿ ಹಾಗೂ ಮೂರು ಸಿಕ್ಸರ್ ಸಿಡಿದಿತ್ತು. ಉಳಿದಂತೆ ಡಕ್ಕರ್ ಕೆಲ ಕಾಲ ಅವರಿಗೆ ಉತ್ತಮವಾಗಿ ಸಾಥ್ ನೀಡಿ 18 ರನ್‌ಗಳ ಕೊಡುಗೆ ನೀಡಿದರು.

ಭಾರತದ ಪರವಾಗಿ ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯ ಹಾಗೂ ಆವೇಶ್ ಖಾನ್ ಮತ್ತು ಚಾಹಲ್ ತಲಾ ಒಂದು ವಿಕೆಟ್ ಪಡೆದರು. ಭಾರತ ಐರ್ಲೆಂಡ್ ತಮಡದ ಮೂರು ವಿಕೆಟ್‌ಗಳನ್ನು ಪವರ್‌ಪ್ಲೇನಲ್ಲಿಯೇ ಪಡೆದುಕೊಂಡಿತು ಎಂಬುದು ವಿಶೇಷ.

ಇನ್ನು ಈ ಮೊತ್ತವನ್ನು ಬೆನ್ನಟ್ಟಿದ ಭಾರತ ತಂಡಕ್ಕೆ ಉತ್ತಮ ಆರಂಭ ದೊರೆಯಿತು. ಇಶಾನ್ ಕಿಶನ್ ಜೊತೆಗೆ ಮೊದಲ ಬಾರಿಗೆ ಆರಂಭಿಕನಾಗಿ ಕಣಕ್ಕಿಳಿದ ದೀಪಕ್ ಹೂಡಾ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಇಶಾನ್ ಕಿಶನ್ 11 ಎಸೆತಗಳಲ್ಲಿ 26 ರನ್ ಸಿಡಿಸಿ ಕ್ರೇಗ್ ಯಂಗ್‌ಗೆ ಬೌಲ್ಡ್ ಆದರು. ಬಳಿಕ ಬಂದ ಸೂರ್ಯಕುಮಾರ್ ಯಾದವ್ ಒಂದೇ ಎಸೆತಕ್ಕೆ ಶೂನ್ಯ ಸುತ್ತಿ ಫೆವಿಲಿಯನ್ ಸೇರಿಕೊಂಡರು. ನಂತರ ಬ್ಯಾಟಿಂಗ್‌ಗೆ ಇಳಿದ ನಾಯಕ ಹಾರ್ದಿಕ್ ಪಾಂಡ್ಯ 12 ಎಸೆತಗಳಲ್ಲಿ 24 ರನ್‌ಗಳ ಕೊಡುಗೆ ನೀಡಿ ವಿಕೆಟ್ ಕಳೆದುಕೊಂಡರು.

ಇನ್ನು ಆರಂಭಿಕನಾಗಿ ಕಣಕ್ಕಿಳಿದ ದೀಪಕ್ ಹೂಡಾ ಅಂತಿಮ ಹಂತದವರೆಗೂ ಅಜೇಯವಾಗುಳಿದು ತಂಡವನ್ನು ಗೆಲುವಿನ ದಡ ಸೇರಿಸಿದರು. 29 ಎಸೆತ ಎದುರಿಸಿದ ಹೂಡಾ 47 ರನ್‌ಗಳಿಸಿದ್ದಾರೆ. ದಿನೇಶ್ ಕಾರ್ತಿಕ್ 5 ರನ್‌ಗಳಿಸಿದ್ದಾರೆ. ಈ ಮೂಲಕ ಭಾರತ ಇನ್ನೂ 16 ಎಸೆತಗಳು ಬಾಕಿಯಿರುವಂತೆಯೇ ಭರ್ಜರಿಯಾಗಿ ಗೆಲುವು ಸಾಧಿಸಿದೆ.

ಐರ್ಲೆಂಡ್ ಆಡುವ ಬಳಗ: ಪಾಲ್ ಸ್ಟಿರ್ಲಿಂಗ್, ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಗರೆಥ್ ಡೆಲಾನಿ, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಆಂಡಿ ಮ್ಯಾಕ್‌ಬ್ರೈನ್, ಕ್ರೇಗ್ ಯಂಗ್, ಜೋಶುವಾ ಲಿಟಲ್, ಕಾನರ್ ಓಲ್ಫರ್ಟ್

ಬೆಂಚ್: ಕರ್ಟಿಸ್ ಕ್ಯಾಂಫರ್, ಬ್ಯಾರಿ ಮೆಕಾರ್ಥಿ, ಸ್ಟೀಫನ್ ಡೊಹೆನಿ

ಭಾರತ ಆಡುವ ಬಳಗ: ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್

Ind vs Ireland ಪಂದ್ಯದಲ್ಲಿ ಹೆಚ್ಚಾಗಿ ಮಿಂಚಿದ್ದು ಇವನೇ | *Cricket | OneIndia Kannada

ಬೆಂಚ್: ಸಂಜು ಸ್ಯಾಮ್ಸನ್, ಹರ್ಷಲ್ ಪಟೇಲ್, ವೆಂಕಟೇಶ್ ಅಯ್ಯರ್, ರಾಹುಲ್ ತ್ರಿಪಾಠಿ, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್

Story first published: Monday, June 27, 2022, 10:28 [IST]
Other articles published on Jun 27, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X