ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಐರ್ಲೆಂಡ್: ಮೊದಲ ಟಿ20 ಪಂದ್ಯ, ಟಾಸ್ ಗೆದ್ದ ಭಾರತ, ಆರಂಭಕ್ಕೆ ಮಳೆ ಅಡ್ಡಿ

India vs Ireland, 1st T20I, toss report, Live score and Playing XI details

ಭಾರತ ಹಾಗೂ ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಚಾಲನೆ ದೊರೆತಿದೆ. ಮೊದಲ ಪಂದ್ಯದಲ್ಲಿ ಭಾರತ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದಿದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಭಾರತದ ವಿರುದ್ಧ ಆತಿಥೆಯ ಐರ್ಲೆಂಡ್ ತಂಡ ಮೊದಲು ಬ್ಯಾಟಿಂಗ್ ನಡೆಸಿ ಗುರಿ ನಿಗದಿಪಡಿಸುವ ಸವಾಲು ಸ್ವೀಕರಿಸಿದೆ.

ಈ ಪಂದ್ಯದ ಮೂಲಕ ಹಾರ್ದಿಕ್ ಪಾಂಡ್ಯ ಇದೇ ಮೊದಲ ಬಾರಿಗೆ ಭಾರತ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ. ಭುವನೇಶ್ವರ್ ಕುಮಾರ್‌ ಉಪನಾಯಕನಾಗಿ ಸಾಥ್ ನೀಡುತ್ತಿದ್ದಾರೆ. ಋತುರಾಜ್ ಗಾಯಕ್ವಾಡ್ ಹಾಗೂ ಇಶಾನ್ ಕಿಶನ್ ಆರಂಭಿಕರಾಗಿ ಕಣಕ್ಕಿಳಿದರೆ ಸೂರ್ಯಕುಮಾರ್ ಯಾದವ್ ಆಡುವ ಬಳಗಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ.

Live ಸ್ಕೋರ್‌ಕಾರ್ಡ್ ಹೀಗಿದೆ

1
53594

Ind vs Eng: ರೋಹಿತ್ ಶರ್ಮಾಗೆ ಕೋವಿಡ್; ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್‌ಗೆ ನಾಯಕ ಯಾರು?Ind vs Eng: ರೋಹಿತ್ ಶರ್ಮಾಗೆ ಕೋವಿಡ್; ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್‌ಗೆ ನಾಯಕ ಯಾರು?

ಭಾರತ ತಂಡಕ್ಕೆ ಉಮ್ರಾನ್ ಮಲಿಕ್ ಪದಾರ್ಪಣೆ

ಭಾರತ ತಂಡಕ್ಕೆ ಉಮ್ರಾನ್ ಮಲಿಕ್ ಪದಾರ್ಪಣೆ

ಇನ್ನು ಈ ಪಂದ್ಯದ ಮೂಲಕ ಭಾರತ ತಂಡಕ್ಕೆ ಯುವ ವೇಗದ ಬೌಲರ್ ಉಮ್ರಾನ್ ಮಲಿಕ್ ಪದಾರ್ಪಣೆ ಮಾಡಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ಮಿಂಚಿರುವ ಉಮ್ರಾನ್ ಮಲಿಕ್ ದಕ್ಷಿಣ ಆಫ್ರಿಕಾ ವಿರುದ್ಧಧ ಸರಣಿಗೆ ಮೊದಲ ಬಾರಿಗೆ ಆಯ್ಕೆಯಾಗಿದ್ದರು. ಆದರೆ ಅವರಿಗೆ ಆಡುವ ಅವಕಾಶ ದೊರೆತಿರಲಿಲ್ಲ. ಇದೀಗ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಉಮ್ರಾನ್ ತಮ್ಮ ಕನಸು ನನಸಾಗಿಸಿದ್ದಾರೆ. ತಂಡದ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಉಮ್ರಾನ್ ಮಲಿಕ್‌ಗೆ ಕ್ಯಾಪ್ ನೀಡಿದರು.

ಐರ್ಲೆಂಡ್ ಆಡುವ ಬಳಗ

ಐರ್ಲೆಂಡ್ ಆಡುವ ಬಳಗ

ಪಾಲ್ ಸ್ಟಿರ್ಲಿಂಗ್, ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಗರೆಥ್ ಡೆಲಾನಿ, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಆಂಡಿ ಮ್ಯಾಕ್‌ಬ್ರೈನ್, ಕ್ರೇಗ್ ಯಂಗ್, ಜೋಶುವಾ ಲಿಟಲ್, ಕಾನರ್ ಓಲ್ಫರ್ಟ್
ಬೆಂಚ್: ಕರ್ಟಿಸ್ ಕ್ಯಾಂಫರ್, ಬ್ಯಾರಿ ಮೆಕಾರ್ಥಿ, ಸ್ಟೀಫನ್ ಡೊಹೆನಿ

Kapil Dev ನಂತರ ಟೀಮ್ ಇಂಡಿಯಾಗೆ ಜಸ್ಪ್ರೀತ್ ಬುಮ್ರಾ ನಾಯಕ | *Cricket | OneIndia Kannada
ಭಾರತ ಆಡುವ ಬಳಗ

ಭಾರತ ಆಡುವ ಬಳಗ

ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್
ಬೆಂಚ್: ಸಂಜು ಸ್ಯಾಮ್ಸನ್, ಹರ್ಷಲ್ ಪಟೇಲ್, ವೆಂಕಟೇಶ್ ಅಯ್ಯರ್, ರಾಹುಲ್ ತ್ರಿಪಾಠಿ, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್

Story first published: Sunday, June 26, 2022, 21:50 [IST]
Other articles published on Jun 26, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X