ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ಸರಣಿ: ಐರ್ಲೆಂಡ್ ವಿರುದ್ಧ ಅಂತಿಮ ಕದನಕ್ಕೆ ಹಾರ್ದಿಕ್ ಪಾಂಡ್ಯ ಪಡೆ ಸಜ್ಜು

India vs Ireland: 2nd t20I match Dublin, preview and Details

ಭಾರತ ಹಾಗೂ ಐರ್ಲೆಂಡ್ ವಿರುದ್ಧದ ಟಿ20 ಸರಣಿಯ ಎರಡನೃ ಹಾಘೂ ಅಂತಿಮ ಪಂದ್ಯ ಇಂದು ನಡೆಯಲಿದೆ. ಮೊದಲ ಪಂದ್ಯ ಆಯೋಜನೆಯಾದ ಡಬ್ಲಿನ್‌ನಲ್ಲಿಯೇ ಈ ಪಂದ್ಯ ಕೂಡ ಆಯೋಜನೆಯಾಗಲಿದೆ. ಮೊದಲ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದ್ದು ಇಂದಿನ ಪಂದ್ಯದಲ್ಲಿಯೂ ಅಂತಾದ್ದೇ ಪ್ರದರ್ಶನ ನೀಡುವ ವಿಶ್ವಾಸದಲ್ಲಿದೆ ಭಾರತ ತಂಡ.

ಹಾರ್ದಿಕ್ ಪಾಂಡ್ಯ ನೇತೃತ್ವದ ಭಾರತ ತಂಡ ಯುವ ಆಟಗಾರರನ್ನು ಹೆಚ್ಚಾಗಿ ಹೊಂದಿದ್ದು ಉತ್ತಮ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದೆ. ಮೊದಲ ಪಂದ್ಯ ಮಳೆಯಿಂದಾಗಿ ತಲಾ 12 ಓವರ್‌ಗಳ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಭಾರತ ತಂಡ ಉತ್ತಮ ಬೌಲಿಂಗ್ ಹಾಗೂ ಬ್ಯಾಟಿಂಗ್ ಪ್ರದರ್ಶಿಸಿದರೆ. ಬೌಲಿಂಗ್‌ನಲ್ಲಿ ಸಾಂಗಿಕ ಪ್ರದರ್ಶನ ಬಂದರೆ ಬ್ಯಾಟಿಂಗ್‌ನಲ್ಲ ಆರಂಭಿಕನಾಗಿ ಕಣಕ್ಕಿಳಿದ ದೀಪಕ್ ಹೂಡಾ. ಇಶಾನ್ ಕಿಶನ್ ಉತ್ತಮ ಪ್ರದರ್ಶನ ನೀಡಿದ್ದಾರೆ.

ಐರ್ಲೆಂಡ್ vs ಭಾರತ: ನಾಯಕತ್ವದ ಮೊದಲ ಪಂದ್ಯದಲ್ಲೇ ಹೊಸ ದಾಖಲೆ ಬರೆದ ಹಾರ್ದಿಕ್ ಪಾಂಡ್ಯಐರ್ಲೆಂಡ್ vs ಭಾರತ: ನಾಯಕತ್ವದ ಮೊದಲ ಪಂದ್ಯದಲ್ಲೇ ಹೊಸ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ

ಸರ್ವಾಂಗೀಣ ಪ್ರದರ್ಶನ ನೀಡಿದ ಭಾರತ

ಸರ್ವಾಂಗೀಣ ಪ್ರದರ್ಶನ ನೀಡಿದ ಭಾರತ

ಭಾರತ ಹಾಗು ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಭರ್ಜರಿ ಜಯ ಸಾಧಿಸಿದೆ. ಮಳೆಯಿಂದಾಗಿ 12 ಓವರ್‌ಗಳಿಗೆ ಸೀಮಿತವಾದ ಪಂದ್ಯದಲ್ಲಿ ಐರ್ಲೆಂಡ್ ತಂಡ ಮೊದಲಿಗೆ ಬ್ಯಾಟಿಂಗ್ ಮಾಡಿ ಸವಾಲಿನ ಗುರಿ ನಿಗದಿಪಡಿಸಿತು. ಆದರೆ ಭಾರತ ತಂಡ ಈ ಮೊತ್ತವನ್ನು ಸುಲಭವಾಗಿ ಬೆನ್ನಟ್ಟುವಲ್ಲಿ ಯಶಸ್ವಿಯಾಗಿದೆ. ಮೊದಲಿಗೆ ಬ್ಯಾಟಿಂಗ್ ನಡೆಸಿದ ಐರ್ಲೆಂಡ್ ತಂಡ ನಿಗದಿತ 12 ಓವರ್‌ಗಳಲ್ಲಿ 108 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿತು. ಈ ಮೊತ್ತವನ್ನು ಬೆನ್ನಟ್ಟಿದ ಭಾರತ ತಂಡ 16 ಎಸೆತಗಳು ಬಾಕಿಯಿರುವಂತೆಯೇ ಭರ್ಜರಿಯಾಗಿ ಗೆಲುವು ಸಾಧಿಸಿದೆ.

ಪಂದ್ಯದ ಸಮಯ ಹಾಗೂ ನೇರಪ್ರಸಾರ

ಪಂದ್ಯದ ಸಮಯ ಹಾಗೂ ನೇರಪ್ರಸಾರ

ಭಾರತ ಹಾಗೂ ಐರ್ಲೆಂಡ್ ನಡುವಿನ ಎರಡನೇ ಟಿ200 ಪಂದ್ಯ ಭಾರತೀಯ ಕಾಲಮಾನ ರಾತ್ರಿ 9 ಗಂಟೆಗೆ ಆರಂಭವಾಗಲಿದೆ. 8:30ಕ್ಕೆ ಪಂದ್ಯದ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸೋನಿ ಸಿಕ್ಸ್ ವಾಹಿನಿಯಲ್ಲಿ ನೇರಪ್ರಸಾರವಾಗಲಿದ್ದು ಸೋನಿ ಲಿವ್‌ನಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕವೂ ವೀಕ್ಷಿಸಬಹುದಾಗಿದೆ.

ನಾಯಕನಾಗಿ ವಿಶೇಷ ಸಾಧನೆ ಮಾಡಲಿದ್ದಾರಾ ಪಾಂಡ್ಯ?

ನಾಯಕನಾಗಿ ವಿಶೇಷ ಸಾಧನೆ ಮಾಡಲಿದ್ದಾರಾ ಪಾಂಡ್ಯ?

ಹಾರ್ದಿಕ್ ಪಾಂಡ್ಯ ಇದೇ ಮೊದಲ ಬಾರಿಗೆ ಭಾರತ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ. ಮೊದಲ ಪಂದ್ಯದಲ್ಲಿಯೇ ಯಶಸ್ಸು ಸಾಧಿಸಿರುವ ಪಾಂಡ್ಯ ಗೆಲುವಿನ ಮೂಲಕ ಸ್ಮರಣೀಯವಾಗಿಸಿದ್ದಾರೆ. ಇನ್ನು ಎರಡನೇ ಪಂದ್ಯವನ್ನು ಕೂಡ ಗೆದ್ದರೆ ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಳ್ಳುವುದರ ಜೊತೆಗೆ ವೈಟ್‌ವಾಶ್ ಮಾಡುವ ಅವಕಾಶವೂ ಭಾರತದ ಮುಂದಿದೆ. ಹೀಗಾಗಿ ನಾಯಕನಾಗಿ ಮೊದಲ ಸರಣಿಯಲ್ಲಿಯೇ ವೈಟ್‌ವಾಶ್ ಮೂಲಕ ಸರಣಿ ವಶಪಡಿಸಿಕೊಂಡ ವಿಶೇಷ ಸಾಧನೆ ಮಾಡುವ ಅವಕಾಶ ಹಾರ್ದಿಕ್ ಪಾಂಡ್ಯಗಿದೆ.

ವಿರಾಟ್ ಶತಕದ ಬಗ್ಗೆ ಸೆಹ್ವಾಗ್ ಇಷ್ಟು ಕಳಪೆಯಾಗಿ ಮಾತಾಡ್ಬಾರ್ದಿತ್ತು!! | OneIndia Kannada
ಇತ್ತಂಡಗಳ ಸ್ಕ್ವಾಡ್ ಹೀಗಿದೆ

ಇತ್ತಂಡಗಳ ಸ್ಕ್ವಾಡ್ ಹೀಗಿದೆ

ಐರ್ಲೆಂಡ್: ಪಾಲ್ ಸ್ಟಿರ್ಲಿಂಗ್, ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಗರೆಥ್ ಡೆಲಾನಿ, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಆಂಡಿ ಮ್ಯಾಕ್‌ಬ್ರೈನ್, ಕ್ರೇಗ್ ಯಂಗ್, ಜೋಶುವಾ ಲಿಟಲ್, ಕಾನರ್ ಓಲ್ಫರ್ಟ್, ಕರ್ಟಿಸ್ ಕ್ಯಾಂಫರ್, ಬ್ಯಾರಿ ಮೆಕಾರ್ಥಿ, ಸ್ಟೀಫನ್ ಡೊಹೆನಿ

ಭಾರತ: ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್, ಸಂಜು ಸ್ಯಾಮ್ಸನ್, ಹರ್ಷಲ್ ಪಟೇಲ್, ವೆಂಕಟೇಶ್ ಅಯ್ಯರ್, ರಾಹುಲ್ ತ್ರಿಪಾಠಿ, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್

Story first published: Tuesday, June 28, 2022, 12:22 [IST]
Other articles published on Jun 28, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X