Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಐರ್ಲೆಂಡ್, 2ನೇ ಟಿ20 ಪಂದ್ಯ; ಪ್ರಿವ್ರ್ಯೂ, ಸಮಯ ಹಾಗೂ ಸಂಭಾವ್ಯ ಆಡುವ ಬಳಗ

ಭಾರತ ಹಾಗೂ ಐರ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲ ಪಂದ್ಯ ಈಗಾಗಲೇ ಮುಕ್ತಾಯವಾಗಿದೆ. ಇದೀಗ ಎರಡನೇ ಪಂದ್ಯಕ್ಕೆ ಎರಡು ತಂಡಗಳು ಸಜ್ಜಾಗಿದ್ದು ಕುತೂಹಲ ಮೂಡಿಸಿದೆ. ಮಳೆಯಿಂದಾಗಿ ಮೊದಲ ಪಂದ್ಯದಲ್ಲಿ ಪೂರ್ಣಪ್ರಮಾಣದ ಆಟ ನಡೆಯದಿದ್ದರೂ ಡಿಎಲ್ ನಿಯಮದ ಆಧಾರದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿತು. ಇದೀಗ ಎರಡನೇ ಪಂದ್ಯದಲ್ಲಿಯೂ ಗೆದ್ದು ಸರಣಿ ಗೆಲುವು ತನ್ನದಾಗಿಸಿಕೊಳ್ಳುವ ಉತ್ಸಾಹದಲ್ಲಿದೆ.

ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾದ ಬೌಲಿಂಗ್ ವಿಭಾಗದ ಪ್ರದರ್ಶನ ಅದ್ಭುತವಾಗಿದ್ದು ಎಲ್ಲರ ಗಮನಸೆಳೆದಿದೆ. ಅದರಲ್ಲೂ ನಾಯಕ ಬೂಮ್ರಾ ಹಾಗೂ ಪ್ರಸಿದ್ಧ್ ಕೃಷ್ಣ ಗಾಯದಿಂದ ಕಮ್‌ಬ್ಯಾಕ್ ಮಾಡಿದ ಬಳಿಕ ನೀಡಿರುವ ಪ್ರದರ್ಶನ ದೊಡ್ಡ ಭರವಸೆ ಮೂಡಿಸಿದೆ. ಆದರೆ ಬ್ಯಾಟಿಂಗ್‌ನಲ್ಲಿ ಭಾರತಕ್ಕೆ ಹೆಚ್ಚಿನ ಅವಕಾಶ ದೊರೆತಿರಲಿಲ್ಲ. ಹೀಗಾಗಿ ಎರಡನೇ ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ವಿಭಾಗದ ಪ್ರದರ್ಶನದ ಮೇಲರ ಕುತೂಹಲ ನೆಟ್ಟಿದೆ.

India vs Ireland, 2nd t20I, preview, match timings, probable xi and pitch report

ಪಂದ್ಯದ ಸಮಯ ಹಾಗೂ ನೇರಪ್ರಸಾರದ ಮಾಹಿತಿ

ಭಾರತ ಹಾಗೂ ಐರ್ಲೆಂಡ್ ತಂಡಗಳ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಆಗಸ್ಟ್ 18 ಶುಕ್ರವಾರದಂದು ನಡೆಯಲಿದೆ. ಡಬ್ಲಿನ್‌ನಲ್ಲಿ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋನೆಯಾಗಲಿದ್ದು ಭಾರತೀಯ ಕಾಲಮಾನ ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಸ್ಪೋರ್ಟ್ಸ್ 18 ವಾಹಿನಿಯಲ್ಲಿ ಪಂದ್ಯ ನೇರಪ್ರಸಾರವಾಗಲಿದ್ದು ಜಿಯೋ ಸಿನಿಮಾದಲ್ಲಿಯೂ ಪಂದ್ಯವನ್ನು ಉಚಿತವಾಗಿ ವೀಕ್ಷಿಸುವ ಅವಕಾಶವಿದೆ.

ಪಿಚ್ ರಿಪೋರ್ಟ್, ಹವಾಮಾನ ವರದಿ

ಸರನಿಯ ಎರಡನೇ ಪಂದ್ಯ ಕೂಡ ಡಬ್ಲಿನ್‌ನಲ್ಲಿಯೇ ನಡೆಯಲಿದೆ. ಈ ಮೈದಾನದ ಸರಾಸರಿ ಸ್ಕೋರ್ 170ರ ಸನಿಹದಲ್ಲಿದ್ದು ಪಿಚ್ ಸ್ಪರ್ಧಾತ್ಮಕವಾಗಿರಲಿದೆ. ಇಲ್ಲಿ ಆಡಿರುವ 17 ಪಂದ್ಯಗಳ ಪೈಕಿ 10 ಪಂದ್ಯಗಳಲ್ಲಿ ರನ್ ಬೆನ್ನಟ್ಟಿರುವ ತಂಡ ಗೆಲುವು ಸಾಧಿಸಿದೆ. ಸರಣಿಯ ಮೊದಲ ಪಂದ್ಯದಲ್ಲಿಯೂ ಭಾರತ ರನ್ ಬೆನ್ನಟ್ಟುವ ನಿರ್ಧಾರವನ್ನು ತೆಗೆದುಕೊಂಡಿತ್ತು. ಇನ್ನು ಪಂದ್ಯದ ಅವಧಿಯಲ್ಲಿ ಸಂಪೂರ್ಣವಾಗಿ ಮೋಡಕವಿದ ವಾತಾವರಣವಿರಲಿದ್ದು ಮಳೆ ಅಡ್ಡಿಯುಂಟು ಮಾಡುವ ಆತಂಕವೂ ಇದ್ದೇ ಇದೆ.

ಸಂಭಾವ್ಯ ಆಡುವ ಬಳಗ

ಐರ್ಲೆಂಡ್: ಪಾಲ್ ಸ್ಟಿರ್ಲಿಂಗ್ (ನಾಯಕ), ಆಂಡ್ರ್ಯೂ ಬಾಲ್ಬಿರ್ನಿ, ಗರೆಥ್ ಡೆಲಾನಿ, ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಜೋಶ್ ಲಿಟಲ್, ಕ್ರೇಗ್ ಯಂಗ್, ಬ್ಯಾರಿ ಮೆಕಾರ್ಥಿ
ಟೀಮ್ ಇಂಡಿಯಾ: ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ (ನಾಯಕ), ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್, ಮುಖೇಶ್ ಕುಮಾರ್

ಸಂಪೂರ್ಣ ಸ್ಕ್ವಾಡ್

ಐರ್ಲೆಂಡ್ ತಂಡ: ಪಾಲ್ ಸ್ಟಿರ್ಲಿಂಗ್ (ನಾಯಕ), ಆಂಡ್ರ್ಯೂ ಬಾಲ್ಬಿರ್ನಿ, ಮಾರ್ಕ್ ಅಡೇರ್, ರಾಸ್ ಅಡೇರ್, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಫಿಯಾನ್ ಹ್ಯಾಂಡ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್, ಥಿಯೋ ವ್ಯಾನ್ ವೋರ್ಕಾಮ್, ಬೆನ್ ವೈಟ್, ಕ್ರೇಗ್ ಯಂಗ್

ಭಾರತ ತಂಡ: ಜಸ್ಪ್ರೀತ್ ಬುಮ್ರಾ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಅವೇಶ್ ಖಾನ್.

Story first published: Saturday, August 19, 2023, 18:25 [IST]
Other articles published on Aug 19, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+