ಭಾರತ vs ಐರ್ಲೆಂಡ್, 3ನೇ ಟಿ20 ಪಂದ್ಯ; ಪ್ರಿವ್ರ್ಯೂ, ಸಮಯ ಹಾಗೂ ಸಂಭಾವ್ಯ ಆಡುವ ಬಳಗ
ಭಾರತ ಹಾಗೂ ಐರ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲ ಎರಡು ಪಂದ್ಯಗಳು ಈಗಾಗಲೇ ಮುಕ್ತಾಯವಾಗಿದೆ. ಎರಡು ಪಂದ್ಯದಲ್ಲಿಯೂ ಭಾರತ ಗೆಲುವು ಸಾಧಿಸಿದ್ದು ಸರಣಿಯ್ನು ಈಗಾಗಲೇ ತನ್ನ ವಶಕ್ಕೆ ಪಡೆದಿಕೊಂಡಿದೆ. ಇದೀಗ ಸರಣಿಯ ಅಂತಿಮ ಪಂದ್ಯಕ್ಕೆ ಎರಡು ತಂಡಗಳು ಕೂಡ ಸಿದ್ಧವಾಗಿದೆ. ಆತಿಥೇಯ ಐರ್ಲೆಂಡ್ ಅಂತಿಮ ಪಂದ್ಯದಲ್ಲಿ ಗೆದ್ದು ವೈಟ್‌ವಾಶ್ ಅವಮಾನದಿಮದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿದ್ದರೆ ಟೀಮ್ ಇಂಡಿಯಾ ಕೊನೆಯ ಪಂದ್ಯದಲ್ಲಿ ಕೆಲ ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ನಿರೀಕ್ಷೆಯಿದೆ.
ಇನ್ನು ಮೊದಲ ಎರಡು ಪಂದ್ಯದಲ್ಲಿಯೂ ಟೀಮ್ ಇಂಡಿಯಾದ ಬೌಲಿಂಗ್ ವಿಭಾಗದ ಪ್ರದರ್ಶನ ಅದ್ಭುತವಾಗಿತ್ತು. ಇನ್ನು ಬ್ಯಾಟಿಂಗ್‌ನಲ್ಲಿಯೂ ಸಂಘಟಿತ ಪ್ರದರ್ಶನ ಬಂದಿತ್ತು. ಅಂತಿಮ ಪಂದ್ಯ ಕೆಲ ಯುವ ಆಟಗಾರರಿಗೆ ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಬಹಿರಂಗಪಡಿಸಲು ವೇದಿಕೆಯಾಗಿದೆ.

ಪಂದ್ಯದ ಸಮಯ ಹಾಗೂ ನೇರಪ್ರಸಾರದ ಮಾಹಿತಿ
ಭಾರತ ಹಾಗೂ ಐರ್ಲೆಂಡ್ ತಂಡಗಳ ನಡುವಿನ ಟಿ20 ಸರಣಿಯ ಕೊನೆಯ ಪಂದ್ಯ ಆಗಸ್ಟ್ 23 ಬುಧವಾರ ನಡೆಯಲಿದೆ. ಡಬ್ಲಿನ್‌ನ ಕ್ರೀಡಾಂಗಣದಲ್ಲಿ ಈ ಪಂದ್ಯ ಕೂಡ ಆಯೋಜನೆಯಾಗಲಿದ್ದು ಭಾರತೀಯ ಕಾಲಮಾನ ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಸ್ಪೋರ್ಟ್ಸ್ 18 ವಾಹಿನಿಯಲ್ಲಿ ಪಂದ್ಯ ನೇರಪ್ರಸಾರವಾಗಲಿದ್ದು ಜಿಯೋ ಸಿನಿಮಾದಲ್ಲಿಯೂ ಪಂದ್ಯವನ್ನು ಉಚಿತವಾಗಿ ವೀಕ್ಷಿಸುವ ಅವಕಾಶವಿದೆ.
ಪಿಚ್ ರಿಪೋರ್ಟ್, ಹವಾಮಾನ ವರದಿ
ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ ಕೂಡ ಡಬ್ಲಿನ್‌ನಲ್ಲಿಯೇ ನಡೆಯಲಿದೆ. ಈ ಮೈದಾನದ ಸರಾಸರಿ ಸ್ಕೋರ್ 170ರ ಸನಿಹದಲ್ಲಿದ್ದು ಪಿಚ್ ಸ್ಪರ್ಧಾತ್ಮಕವಾಗಿರಲಿದೆ. ಇಲ್ಲಿ ಆಡಿರುವ 18 ಪಂದ್ಯಗಳ ಪೈಕಿ 10 ಪಂದ್ಯಗಳಲ್ಲಿ ರನ್ ಬೆನ್ನಟ್ಟಿರುವ ತಂಡ ಗೆಲುವು ಸಾಧಿಸಿದೆ. ಸರಣಿಯ ಮೊದಲ ಪಂದ್ಯದಲ್ಲಿಯೂ ಭಾರತ ರನ್ ಬೆನ್ನಟ್ಟುವ ನಿರ್ಧಾರವನ್ನು ತೆಗೆದುಕೊಂಡಿತ್ತು. ಇನ್ನು ಪಂದ್ಯದ ಅವಧಿಯಲ್ಲಿ ಸಂಪೂರ್ಣವಾಗಿ ಮೋಡಕವಿದ ವಾತಾವರಣವಿರಲಿದ್ದು ಮಳೆ ಅಡ್ಡಿಯುಂಟು ಮಾಡುವ ಆತಂಕವೂ ಇದ್ದೇ ಇದೆ.
ಸಂಭಾವ್ಯ ಆಡುವ ಬಳಗ
ಐರ್ಲೆಂಡ್: ಪಾಲ್ ಸ್ಟಿರ್ಲಿಂಗ್ (ನಾಯಕ), ಆಂಡ್ರ್ಯೂ ಬಾಲ್ಬಿರ್ನಿ, ಗರೆಥ್ ಡೆಲಾನಿ, ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಜೋಶ್ ಲಿಟಲ್, ಕ್ರೇಗ್ ಯಂಗ್, ಬ್ಯಾರಿ ಮೆಕಾರ್ಥಿ
ಟೀಮ್ ಇಂಡಿಯಾ: ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರಿಂಕು ಸಿಂಗ್, ಶಹ್ಬಾಜ್ ಅಹ್ಮದ್, ಜಸ್ಪ್ರೀತ್ ಬುಮ್ರಾ (ನಾಯಕ), ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್, ಆವೇಶ್ ಖಾನ್
ಸಂಪೂರ್ಣ ಸ್ಕ್ವಾಡ್
ಐರ್ಲೆಂಡ್ ತಂಡ: ಪಾಲ್ ಸ್ಟಿರ್ಲಿಂಗ್ (ನಾಯಕ), ಆಂಡ್ರ್ಯೂ ಬಾಲ್ಬಿರ್ನಿ, ಮಾರ್ಕ್ ಅಡೇರ್, ರಾಸ್ ಅಡೇರ್, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಫಿಯಾನ್ ಹ್ಯಾಂಡ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್, ಥಿಯೋ ವ್ಯಾನ್ ವೋರ್ಕಾಮ್, ಬೆನ್ ವೈಟ್, ಕ್ರೇಗ್ ಯಂಗ್
ಭಾರತ ತಂಡ: ಜಸ್ಪ್ರೀತ್ ಬುಮ್ರಾ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಅವೇಶ್ ಖಾನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications