ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಐರ್ಲೆಂಡ್: ಸೊನ್ನೆ ಸುತ್ತಿದ್ದರೂ ದಿನೇಶ್ ಕಾರ್ತಿಕ್‌ಗೆ ನೆಟ್ಟಿಗರಿಂದ ಪ್ರಶಂಸೆಯ ಸುರಿಮಳೆ: ಕಾರಣ?

India vs Ireland: Fans praises Dinesh Karthik walks back even umpire did not raise finger

ಭಾರತ ಹಾಗೂ ಐರ್ಲೆಂಡ್ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ರೋಚಕವಾಗಿ ಗೆಲುವು ಸಾಧಸಿದೆ. ಈ ಪಂದ್ಯದಲ್ಲಿ ಭಾರತ ತಂಡ ಬೃಹತ್ ಮೊತ್ತವನ್ನು ಕಲೆ ಹಾಕಿದರೂ ಐರ್ಲೆಂಡ್ ಕೂಡ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಗೆಲುವಿನ ಸನಿಹಕ್ಕೆ ತಲುಪಿತ್ತು. ಆದರೆ ಅಂತಿಮವಾಗಿ ಗೆಲುವು ಭಾರತದ ಪರವಾಗಿತ್ತು.

ಈ ಪಂದ್ಯದಲ್ಲಿ ಭಾರತದ ಪರವಾಗಿ ದೀಪಕ್ ಹೂಡಾ ಶತಕ ಸಿಡಿಸುವ ಮೂಲಕ ಭಾರತದ ಪರವಾಗಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ನಾಲ್ಕನೇ ಆಟಗಾರ ಎನಿಸಿಕೊಂಡಿದ್ದಾರೆ. ಇನ್ನು ಸಂಜು ಸ್ಯಾಮ್ಸನ್ ಕೂಡ ಅವಕಾಶ ಪಡೆದುಕೊಂಡು ಸ್ಪೋಟಕ ಅರ್ಧ ಶತಕ ಸಿಡಿಸಿ ಮಿಂಚಿದ್ದು ತಂಡದ ಬೃಹತ್ ಮೊತ್ತಕ್ಕೆ ಕಾರಣವಾದರು.

2022ರಲ್ಲಿ ಅತಿ ಹೆಚ್ಚು ಟೆಸ್ಟ್ ಶತಕ ಬಾರಿಸಿರುವ ಟಾಪ್ 4 ಬ್ಯಾಟ್ಸ್‌ಮನ್‌ಗಳಿವರು; ಯಾರು ನಂಬರ್ 1?2022ರಲ್ಲಿ ಅತಿ ಹೆಚ್ಚು ಟೆಸ್ಟ್ ಶತಕ ಬಾರಿಸಿರುವ ಟಾಪ್ 4 ಬ್ಯಾಟ್ಸ್‌ಮನ್‌ಗಳಿವರು; ಯಾರು ನಂಬರ್ 1?

ಆದರೆ ಈ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರೂ ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ಬಗ್ಗೆ ನೆಟ್ಟಿಗರು ಭಾರೀ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಅದಕ್ಕೆ ಕಾರಣವೇನು? ಇಲ್ಲಿದೆ ವಿವರ

ಕ್ರೀಡಾಸ್ಪೂರ್ತಿ ಮೆರೆದ ಡಿಕೆ

ಕ್ರೀಡಾಸ್ಪೂರ್ತಿ ಮೆರೆದ ಡಿಕೆ

ದಿನೇಶ್ ಕಾರ್ತಿಕ್ ಕ್ರಿಕೆಟ್ ಪ್ರೇಮಿಗಳಿಂದ ಭಾರೀ ಪ್ರಶಂಸೆಗೆ ಪಾತ್ರವಾಗಲು ಸೂಕ್ತ ಕಾರಣವೂ ಇದೆ. ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಕ್ರೀಡಾಸ್ಪೂರ್ತಿ ತೋರಿಸಿದ್ದು ಅಭಿಮಾನಿಗಳ ಹೃದಯಗೆಲ್ಲುವಂತೆ ಮಾಡಿದೆ. ದಿನೇಶ್ ಕಾರ್ತಿಕ್ ಅವರ ಈ ನಡೆಯಿಂದಾಗಿ ಅಭಿಮಾನಿಗಳು ಕೊಂಡಾಡುತ್ತಿದ್ದಾರೆ.

ಅಂಪೈರ್ ತೀರ್ಪಿಗೆ ಕಾಯದ ಡಿಕೆ

ಅಂಪೈರ್ ತೀರ್ಪಿಗೆ ಕಾಯದ ಡಿಕೆ

ಐರ್ಲೆಂಡ್ ವಿರುದ್ಧದ ಎರಡನೇ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದರು. ತಂಡ ಅದಾಗಲೇ ಇನ್ನೂರರ ಗಡಿ ದಾಟಿತ್ತು. ದಿನೇಶ್ ಕಾರ್ತಿಕ್ ಕಣಕ್ಕಿಳಿದಾಗ ಅವರ ಬ್ಯಾಟ್‌ನಿಂದಲೂ ವೇಗವಾಗಿ ರನ್‌ಗಳು ಹರಿದುಬರುವ ನಿರೀಕ್ಷೆ ಹೊಂದಿದ್ದರು ಭಾರತೀಯ ಕ್ರಿಕೆಟ್ ಅಭಿಮಾನಿಗಳು. ಆದರೆ ತಾನು ಎದುರಿಸಿದ ಮೊದಲ ಎಸೆತದಲ್ಲಿಯೇ ಡಿಕೆ ಎಡವಿದರು. ಚೆಂಡು ದಿನೇಶ್ ಕಾರ್ತಿಕ್ ಬ್ಯಾಟ್‌ಗೆ ಸವರಿದಂತೆ ಅನಿಸಿ ವಿಕೆಟ್ ಕೀಪರ್ ಬೊಗಸೆ ಸೇರಿಕೊಂಡಿತ್ತು. ಈ ಸಂದರ್ಭದಲ್ಲಿ ಅಂಪೈರ್ ಔಟ್ ಎಂದು ತೀರ್ಪು ನೀಡಿರಲಿಲ್ಲ. ಆದರೆ ದಿನೇಶ್ ಕಾರ್ತಿಕ್‌ಗೆ ತಾನು ಔಟ್ ಎಂದು ಸ್ಪಷ್ಟವಾಗಿತ್ತು. ಹೀಗಾಗಿ ಅಂಫೈರ್ ತೀರ್ಪಿಗೆ ಕಾಯದೆ ಡಿಕೆ ನೇರವಾಗಿ ಫೆವಿಲಿಯನ್‌ಗೆ ಸಾಗಿದರು.

ಐರ್ಲೆಂಡ್ ವಿರುದ್ಧ ರೋಚಕ ಗೆಲುವು

ಐರ್ಲೆಂಡ್ ವಿರುದ್ಧ ರೋಚಕ ಗೆಲುವು

ಇನ್ನು ಈ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ನಡೆಸಿ 225 ರನ್‌ಗಳನ್ನು ಗಳಿಸಿತು. ಈ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಭಾರತ ತನ್ನ ಅತಿ ದೊಡ್ಡ ಮೊತ್ತವನ್ನು ಗಳಿಸಿದಂತಾಯಿತು. ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್‌ ನಡೆಸಿದ ಐರ್ಲೆಂಡ್ ತಂಡ ಕೂಡ ಸ್ಪೋಟಕ ಪ್ರದರ್ಶನ ನೀಡಿತು. ಆರಂಬಿಕ ಆಟಗಾರರಾದ ಪೌಲ್ ಸ್ಟಿರ್ಲಿಂಗ್ ಹಾಗೂ ನಾಯಕ ಆಂಡ್ರೋ ಬಲ್ಬರ್ನೈ ಅವರಿಂದ ಸ್ಪೋಟಕ ಪ್ರದರ್ಶನ ಬಂದ ಕಾರಣ ದೊಡ್ಡ ಮೊತ್ತವನ್ನು ಬೆನ್ನಟ್ಟುವ ಉತ್ಸಾಹದಲ್ಲಿರುವುದು ಸ್ಪಷ್ಟವಾಗಿತ್ತು. ನಂತರ ಬಂದ ಹ್ಯಾರಿ ಟೆಕ್ಟರ್, ಜಾರ್ಜ್ ಡಾಕ್ರೆಲ್ ಹಾಗೂ ಮಾರ್ಕ್ ಅಡೈರ್ ಕೂಡ ಸ್ಪೋಟಕ ಬ್ಯಾಟಿಂಗ್ ನಡೆಸಿ ಗೆಲುವಿನ ಸನಿಹಕ್ಕೆ ತಲುಪಿಸಿದರು. ಆದರೆ ಅಂತಿಮವಾಗಿ ಐರ್ಲೆಂಡ್ ತಂಡ ಕೇವಲ 4 ರನ್‌ಗಳ ಅಂತರದಿಂದ ಸೋಲು ಅನುಭವಿಸಿತು.

T20 ಸರಣಿ ಟೀಂ‌ಇಂಡಿಯಾ ಪಾಲು: ಗೆಲ್ಲಲು ಭಾರತ ಪರದಾಡಿದ್ದು ಹೀಗೆ.. | Oneindia Kannada
ಇತ್ತಂಡಗಳ ಆಡುವ ಬಳಗ

ಇತ್ತಂಡಗಳ ಆಡುವ ಬಳಗ

ಭಾರತ ಆಡುವ ಬಳಗ: ಸಂಜು ಸ್ಯಾಮ್ಸನ್, ಇಶಾನ್ ಕಿಶನ್(ವಿಕೆಟ್ ಕೀಪರ್), ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ(ನಾಯಕ), ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಉಮ್ರಾನ್ ಮಲಿಕ್
ಐರ್ಲೆಂಡ್ ಆಡುವ ಬಳಗ: ಪಾಲ್ ಸ್ಟಿರ್ಲಿಂಗ್, ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಗರೆಥ್ ಡೆಲಾನಿ, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಆಂಡಿ ಮ್ಯಾಕ್‌ಬ್ರೈನ್, ಜೋಶುವಾ ಲಿಟಲ್, ಕ್ರೇಗ್ ಯಂಗ್, ಕಾನರ್ ಓಲ್ಫರ್ಟ್

Story first published: Wednesday, June 29, 2022, 10:05 [IST]
Other articles published on Jun 29, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X