Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Women's T20 World Cup: 150ನೇ ಟಿ20 ಪಂದ್ಯದಲ್ಲಿ ವಿಶೇಷ ದಾಖಲೆ ಬರೆದ ಹರ್ಮನ್‌ಪ್ರೀತ್ ಕೌರ್

India vs Ireland: Harmanpreet Kaur Completed 3000 T20I Runs In Her 150th Match

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಐರ್ಲೆಂಡ್ ವಿರುದ್ಧದ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ವಿಶೇಷ ದಾಖಲೆ ಬರೆದಿದ್ದಾರೆ. ತಮ್ಮ 150ನೇ ಅಂತಾರಾಷ್ಟ್ರೀಯ ಪಂದ್ಯವನ್ನಾಡುತ್ತಿರುವ ಅವರು, 3000 ರನ್‌ಗಳನ್ನು ಗಳಿಸಿ ಇತಿಹಾಸ ನಿರ್ಮಿಸಿದರು.

ಭಾರತದ ಪರವಾಗಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 3000 ರನ್ ಪೂರೈಸಿದ ಮೊದಲ ಮಹಿಳಾ ಕ್ರಿಕೆಟರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಲ್ಲದೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 3000 ರನ್ ಪೂರೈಸಿದ ವಿಶ್ವದ 4ನೇ ಆಟಗಾರ್ತಿ ಎನಿಸಿಕೊಂಡಿದ್ದಾರೆ.

150 ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನಾಡಿರುವ ಹರ್ಮನ್‌ಪ್ರೀತ್ ಕೌರ್ 135 ಇನ್ನಿಂಗ್ಸ್‌ಗಳಲ್ಲಿ 27.83 ಸರಾಸರಿ ಮತ್ತು 106.22 ಸ್ಟ್ರೈಕ್‌ರೇಟ್‌ನಲ್ಲಿ 3006 ರನ್ ಗಳಿಸಿದ್ದಾರೆ. ಟಿ20 ಮಾದರಿಯಲ್ಲಿ 9 ಅರ್ಧಶತಕ ಗಳಿಸಿದ್ದು, ಭಾರತದ ಪರವಾಗಿ ಟಿ20 ಕ್ರಿಕೆಟ್‌ನಲ್ಲಿ ಶತಕ ಗಳಿಸಿದ ಮೊದಲ ಆಟಗಾರ್ತಿ ಎನಿಸಿಕೊಂಡಿದ್ದಾರೆ.

ಭಾರತದ ಪರವಾಗಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಂತರ 3000 ರನ್ ಗಳಿಸಿದ ಆಟಗಾರ್ತಿ ಎನಿಸಿಕೊಂಡಿದ್ದಾರೆ ಹರ್ಮನ್‌ಪ್ರೀತ್ ಕೌರ್.

India vs Ireland: Harmanpreet Kaur Completed 3000 T20I Runs In Her 150th Match

150ನೇ ಪಂದ್ಯವನ್ನಾಡಿದ ಮೊದಲ ಆಟಗಾರ್ತಿ

150 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಮೊದಲ ಮಹಿಳಾ ಆಟಗಾರ್ತಿ ಎನಿಸಿಕೊಂಡಿದ್ದಾರೆ ಹರ್ಮನ್‌ಪ್ರೀತ್ ಕೌರ್. ಇವರನ್ನು ಹೊರತುಪಡಿಸಿದರೆ ನ್ಯೂಜಿಲೆಂಡ್‌ನ ಆಟಗಾರ್ತಿ ಸುಜಿ ಬೇಟ್ಸ್‌ 143 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನಾಡುವ ಮೂಲಕ 2ನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್‌ನ ಡ್ಯಾನಿ ವ್ಯಾಟ್ 141 ಪಂದ್ಯಗಳನ್ನಾಡಿದ್ದು ಮೂರನೇ ಸ್ಥಾನದಲ್ಲಿದ್ದಾರೆ.

India vs Ireland: Harmanpreet Kaur Completed 3000 T20I Runs In Her 150th Match

ಅತಿ ಹೆಚ್ಚು ರನ್‌ ಗಳಿಸಿದ ನಾಲ್ಕನೇ ಆಟಗಾರ್ತಿ

ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ 3000 ರನ್ ಪೂರೈಸಿದ ವಿಶ್ವದ ನಾಲ್ಕನೇ ಆಟಗಾರ್ತಿಯಾಗಿದ್ದಾರೆ ಹರ್ಮನ್ ಪ್ರೀತ್ ಕೌರ್. ನ್ಯೂಜಿಲೆಂಡ್‌ನ ಸುಜಿ ಬೇಟ್ಸ್ 143 ಪಂದ್ಯಗಳಲ್ಲಿ 29.61 ಸರಾಸರಿ ಮತ್ತು 109.70 ಸ್ಟ್ರೈಕ್‌ರೇಟ್‌ನಲ್ಲಿ 3820 ರನ್ ಗಳಿಸಿದ್ದು ಅಗ್ರಸ್ಥಾನದಲ್ಲಿದ್ದಾರೆ.

ಆಸ್ಟ್ರೇಲಿಯಾ ಮೆಕ್ ಲ್ಯಾನಿಂಗ್ 130 ಪಂದ್ಯಗಳಲ್ಲಿ 36.36 ಸರಾಸರಿ ಮತ್ತು 116.14 ಸ್ಟ್ರೈಕ್‌ರೇಟ್‌ನಲ್ಲಿ 3346 ರನ್ ಗಳಿಸಿದ್ದು ಎರಡನೇ ಸ್ಥಾನದಲ್ಲಿದ್ದಾರೆ. ವೆಸ್ಟ್ ಇಂಡೀಸ್ ಮಹಿಳಾ ತಂಡದ ಆಟಗಾರ್ತಿ ಸಾರಾ ಟೇಲರ್ 113 ಪಂದ್ಯಗಳಿಂದ 35.57 ಸರಾಸರಿ ಮತ್ತು 100.66 ಸ್ಟ್ರೈಕ್‌ರೇಟ್‌ನಲ್ಲಿ 3166 ರನ್‌ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ.

ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ 13 ರನ್‌ಗಳಿಗೆ ಔಟಾಗುವ ಮೂಲಕ ನಿರಾಸೆ ಮೂಡಿಸಿದರು.

Story first published: Monday, February 20, 2023, 20:11 [IST]
Other articles published on Feb 20, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+